ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಇಸ್ರೇಲ್ ಭೇಟಿಯ ಬಗ್ಗೆ ಕಾಂಗ್ರೆಸ್ ಬುಧವಾರ ತೀವ್ರ ವಾಗ್ದಾಳಿ ನಡೆಸಿದ್ದು, ಅವರ ಆತ್ಮೀಯ ಸ್ನೇಹಿತ ಮತ್ತು ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಇಡೀ ಜಗತ್ತು ಟೀಕಿಸುತ್ತಿರುವಾಗ ಪ್ರಧಾನಿ ನರೇಂದ್ರ ಮೋದಿ ಅವರು “ನೈತಿಕ ಹೇಡಿತನವನ್ನು” ಪ್ರದರ್ಶಿಸುತ್ತಿದ್ದಾರೆ ಎಂದು ಹೇಳಿದೆ.
ಗಾಜಾವನ್ನು ಅವಶೇಷ ಮತ್ತು ಧೂಳಿನನ್ನಾಗಿ ಮಾಡಿರುವ ಮತ್ತು ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಅಕ್ರಮ ವಸಾಹತುಗಳ ವಿಸ್ತರಣೆಗೆ ಸಂಚು ರೂಪಿಸುತ್ತಿರುವ ಇಸ್ರೇಲ್ ನ್ನು ಪ್ರಧಾನಿ ಮೋದಿ ಅವರು “ನಿರ್ಲಜ್ಜವಾಗಿ ಅಪ್ಪಿಕೊಳ್ಳುತ್ತಿದ್ದಾರೆ” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಂವಹನ ಉಸ್ತುವಾರಿ ಜೈರಾಮ್ ರಮೇಶ್ ಹೇಳಿದ್ದಾರೆ.








