ಬೆಂಗಳೂರು : ಮರಕ್ಕೆ ಬುಲೆಟ್ ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೆ ಸಾವನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಉನ್ನಿಕೃಷ್ಣ ಜಂಕ್ಷನ್ನಲ್ಲಿ ಒಂದು ಅಪಘಾತ ಸಂಭವಿಸಿದೆ ಮೃತ ಸವಾರರನ್ನ ಕಿರಣ್ (25) ಯಶವಂತ್ (25) ಎಂದು ತಿಳಿದುಬಂದಿದೆ.
ಬೆಂಗಳೂರಿನ ಯಲಹಂಕ ನ್ಯೂಟೋನ್ ಉನ್ನಿಕೃಷ್ಣನ್ ಜಂಕ್ಷನ್ ನಲ್ಲಿ ಅಪಘಾತ ಸಂಭವಿಸಿದ್ದು, ಮರಕ್ಕೆ ಬುಲೆಟ್ ಬೈಕ್ ಡಿಕ್ಕಿಯಾಗಿ ಪಲ್ಟಿ ಆಗಿದ್ದರಿಂದ ಕಿರಣ ಸ್ಥಳದಲ್ಲಿ ಸಾವನ್ನಪ್ಪಿದದ್ದಾನೆ. ಇನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಯಶವಂತ ಸಾವನಪ್ಪಿದ್ದಾನೆ. ಇನ್ನು ಬೈಕ್ ನಲ್ಲಿ ಇದ್ದ ಮತ್ತೋರ್ವ ಯುವಕ ಗೌತಮ್ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಧರಿಸದೆ ಬೈಕ್ ನಲ್ಲಿ ತೆರಳುವಾಗ ಈ ಅಪಘಾತ ಸಂಭವಿಸಿದೆ. ಯಲಹಂಕ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.








