ಕಲಬುರ್ಗಿ : ಕಲ್ಬುರ್ಗಿಯಲ್ಲಿ ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿಯಾಗಿದ್ದಾನೆ. ಕಲ್ಬುರ್ಗಿ ಜಿಲ್ಲೆಯ ಅಫಜಲಪುರ ತಾಲೂಕಿನ ರಾಷ್ಟ್ರೋತ್ಥಾನ ಶಾಲೆಯ ಬಳಿ ಈ ಒಂದು ಘಟನೆ ಸಂಭವಿಸಿದೆ.
ಬೈಕ್ ಸವಾರ ಶಿವಲಿಂಗಪ್ಪ ಸ್ಥಳದಲ್ಲೇ ಸಾವನಪ್ಪಿದ್ದರೆ ಮತ್ತೊಬ್ಬ ಮತ್ತೊಬ್ಬರಿಗೆ ಗಂಭೀರವಾದ ಗಾಯಗಳಾಗಿವೆ. ಸಿಸಿ ಕ್ಯಾಮೆರಾದಲ್ಲಿ ಅಪಘಾತದ ದೃಶ್ಯ ಸೆರೆಯಾಗಿದೆ. ಬೈಕ್ ಸವಾರನಿಗೆ ಥಾರ್ ಜೀಪ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಸಾವನ್ನಪ್ಪಿದ್ದು, ಮತ್ತೊರ್ವನಿಗೆ ಗಂಭೀರವಾದ ಗಾಯವಾಗಿದೆ.








