ಯಾದಗಿರಿ : ಯಾದಗಿರಿಯ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಷ್ಟ್ರಪಿತ ಗಾಂಧಿ ಹಾಗೂ ಮೊದಲ ಪ್ರಧಾನಿ ನೆಹರು ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು. ವಿವಾದಾತ್ಮಕ ಭಾಷಣದ ಹಿನ್ನೆಲೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.
ಫೆ.21ರಂದು ಯಾದಗಿರಿ ಜಿಲ್ಲೆ ಗುರುಮಠಕಲ್ ಪಟ್ಟಣದಲ್ಲಿ ನಡೆದಿದ್ದ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಯತ್ನಾಳ್, ಗಾಂಧಿ ಮತ್ತು ನೆಹರು ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಹೀಗಾಗಿ ಬಿಜೆಪಿ ಉಚ್ಛಾಟಿತ ಶಾಸಕನ ವಿರುದ್ಧ ಬಿಎನ್‌ಎಸ್ 196, 299, 302, 352, 353 ಅಡಿ ಪೊಲೀಸರು ಸುಮೋಟೋ ಕೇಸ್ ದಾಖಲು ಮಾಡಿದ್ದಾರೆ.








