ಉಡುಪಿ : ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಇದೀಗ ಉದ್ಯೋಗಾಕಾಂಕ್ಷಿಗಳಿಗೆ ಭರವಸೆ ನೀಡಿದ್ದು, ಯುವಕರಿಗೆ ಉದ್ಯೋಗ ಕೊಡಬೇಕು ಎನ್ನುವುದು ನಮ್ಮ ಸರ್ಕಾರದ ಭರವಸೆ ಯುವಕರಿಗೆ ಉದ್ಯೋಗ ಕೊಡುತ್ತೇವೆ ಎಂದು ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಹೇಳಿದರು.
ಈ ಕುರಿತು ಮಾತನಾಡಿದ ಅವರು ಉದ್ಯೋಗ ಕೊಡಬೇಕು ಎನ್ನುವುದು ನಮ್ಮ ಸರ್ಕಾರದ ಭರವಸೆ. ಯುವಕರಿಗೆ ಉದ್ಯೋಗ ಕೊಡುತ್ತೇವೆ ಈ ಬಗ್ಗೆ ಚರ್ಚಿಸಿದ್ದೇನೆ. ಒಳ ಮೀಸಲಾತಿ ಕಾರಣದಿಂದ ಕೆಲಸ ಆಗಿಲ್ಲ ಆ ಕೆಲಸ ಪ್ರಾರಂಭ ಮಾಡಿದ್ದೇವೆ. ಬಜೆಟ್ ನಲ್ಲಿ ಘೋಷಣೆ ಮಾಡುತ್ತೇವೆ ಹಂತ ಹಂತವಾಗಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ. ಎರಡುವರೆ ಲಕ್ಷಕ್ಕಿಂತಲೂ ಹೆಚ್ಚು ಹುದ್ದೆಗಳು ಖಾಲಿ ಇವೆ ಹಾಗಾಗಿ ಎಲ್ಲವನ್ನು ಹಂತ ಹಂತವಾಗಿ ಭರ್ತಿ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು.








