Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ‘ಅನಿಲ್ ಅಂಬಾನಿ’ಯ 3,716 ಕೋಟಿ ರೂ. ಮೌಲ್ಯದ ‘ಮುಂಬೈ ನಿವಾಸ’ ED ಮುಟ್ಟುಗೋಲು

25/02/2026 6:33 PM

ಖಾಲಿಯಿರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು-ಮುಖ್ಯಮಂತ್ರಿ ಸಿದ್ದರಾಮಯ್ಯ

25/02/2026 6:24 PM

BREAKING : ಎರಡೂವರೆ ಲಕ್ಷ ಖಾಲಿ ಹುದ್ದೆಗಳನ್ನ ಹಂತ ಹಂತವಾಗಿ ಭರ್ತಿ ಮಾಡುತ್ತೇವೆ : ಸಿಎಂ ಸಿದ್ದರಾಮಯ್ಯ ಘೋಷಣೆ

25/02/2026 5:37 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಖಾಲಿಯಿರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು-ಮುಖ್ಯಮಂತ್ರಿ ಸಿದ್ದರಾಮಯ್ಯ
KARNATAKA

ಖಾಲಿಯಿರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು-ಮುಖ್ಯಮಂತ್ರಿ ಸಿದ್ದರಾಮಯ್ಯ

By kannadanewsnow0525/02/2026 6:24 PM

ಉಡುಪಿ, ಫೆಬ್ರವರಿ 25: ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಹಂತಹಂತವಾಗಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಾರ್ಕಾಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಉದ್ಯೋಗ ಒದಗಿಸುವ ಭರವಸೆಯನ್ನು ಸರ್ಕಾರ ನೀಡುತ್ತದೆ. ಒಳಮೀಸಲಾತಿಯ ಕಾರಣ ನೇಮಕಾತಿ ಪ್ರಕ್ರಿಯೆ ವಿಳಂಬವಾಯಿತು. ಪ್ರಸ್ತುತ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು ಎಂದರು.

ಅನೆದಾಳಿ:ಬ್ಯಾರಿಕೇಡ್ ನಿರ್ಮಾಣಕ್ಕೆ ಕ್ರಮ

ಚಿಕ್ಕಮಗಳೂರಿನಲ್ಲಿ ಅನೆ ದಾಳಿ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಉತ್ತರಿಸುತ್ತಾ, ಅನೆ, ಚಿರತೆ ಮತ್ತು ಹುಲಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ, ಮಾನವ ವನ್ಯಪ್ರಾಣಿ ಸಂಘರ್ಷಕ್ಕೆ ಕಾರಣವಾಗುತ್ತಿದೆ. ಆದ್ದರಿಂದ ವನ್ಯಜೀವಿಗಳು ಜನಪ್ರದೇಶಗಳಿಗೆ ಬರದಂತೆ ಕಾಡಂಚಿನ ಪ್ರದೇಶಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಬ್ಯಾರಿಕೇಡ್ ನಿರ್ಮಿಸಲು ಕ್ರಮಕೈಗೊಳ್ಳಲಾಗಿದೆ ಎಂದರು.

ಮಾದಕವಸ್ತುಗಳ ನಿಗ್ರಹ

ಶಿವಮೊಗ್ಗ ವಿದ್ಯಾರ್ಥಿ ಹತ್ಯೆ ಹಾಗೂ ಅಪ್ರಾಪ್ತರಲ್ಲಿ ಗಾಂಜಾ ಸೇವೆನೆ ವ್ಯಾಪಕವಾಗುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಗಾಂಜಾ ಸೇರಿದಂತೆ ಮಾದಕ ವಸ್ತುಗಳನ್ನು ಸಂಪೂರ್ಣವಾಗಿ ನಿಗ್ರಹಿಸಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದರು.

ಕಾನೂನು ಕ್ರಮ

ಅಜೀಂಪ್ರೇಂಜಿ ವಿವಿಯ ಮೇಲೆ ಎಬಿವಿಪಿ ವಿದ್ಯಾರ್ಥಿಗಳು ದಾಂಧಲೆ ನಡೆಸಿರುವ ಬಗ್ಗೆ ಉತ್ತರಿಸಿ, ಯಾವುದೇ ಸಂಘಟನೆಗಳು ಕಾನೂನು ವಿರುದ್ಧವಾಗಿ ನಡೆದುಕೊಂಡಲ್ಲಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಗ್ಯಾರಂಟಿ ಯೋಜನೆ

ಗ್ಯಾರಂಟಿಗಳ ಬಗ್ಗೆ ಡಿಸಿಎಂ ಡಿಕೆಶಿವಕುಮಾರ್ ಅವರ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿ,ಗ್ಯಾರಂಟಿ ಯೋಜನೆಗಳಿಗೆ ವಾರ್ಷಕ 52000 ಕೋಟಿ ರೂ.ಗಳನ್ನು ವೆಚ್ಚ ಮಾಡಿದರೂ, ಅಭಿವೃದ್ಧಿ ಕಾರ್ಯಗಳನ್ನು ಮುಂದುವರೆಸಲಾಗುತ್ತಿದೆ. ಈಗಾಗಲೇ 1,20,000 ಕೋಟಿ ರೂ.ಗಳನ್ನು ಗ್ಯಾರಂಟಿಗಳಿಗೆ ನೀಡಲಾಗಿದೆ ಎಂದರು.

ಪರಿಸರವಾದಿಗಳೊಂದಿಗೆ ಚರ್ಚೆ

ಆಗುಂಬೆ ಸುರಂಗ ಮಾರ್ಗ ನಿರ್ಮಾಣಕ್ಕೆ ಅನುಮತಿ ನೀಡಲಾಗುವುದೇ ಎಂಬುದಕ್ಕೆ ಉತ್ತರಿಸುತ್ತಾ, ಇದಕ್ಕೆ ಸಂಬಂಧಿಸಿದಂತೆ ಪರಿಸರವಾದಿಗಳೊಂದಿಗೆ ಚರ್ಚಿಸಲಾಗುವುದು ಹಾಗೂ ಅನುಮತಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಥೀಮ್ ಪಾರ್ಕ್ ಪೂರ್ಣಗೊಳಿಸಲಾಗುವುದು

ಕಾರ್ಕಾಳದಲ್ಲಿ ಪರುಶರಾಮ ಧೀಂ ಪಾರ್ಕ್ ನಿರ್ಮಾಣದ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಧೀಂ ಪಾರ್ಕ್ ನಿರ್ಮಾಣ ಯೋಜನೆಯನ್ನು ಸಧ್ಯದಲ್ಲಿಯೇ ಪೂರ್ಣಗೊಳಿಸಲಾಗುವುದು ಎಂದರು.

ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಅವ್ಯವಹಾರ ಪ್ರಕರಣದಬಗ್ಗೆ ಮಾತನಾಡಿ, ಕಾರ್ಖಾನೆಯ ಗುಜರಿ ಮಾರಾಟ ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುವುದು ಎಂದರು.

ಶಾಸಕರು ಸಚಿವರಾಗಲು ಬಯಸುತ್ತಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಶಾಸಕರು ಸಚಿವರಾಗಬಯಸುವುದು ತಪ್ಪಲ್ಲ. ಮೊದಲ ಬಾರಿ ಶಾಸಕರಾದವರಿಗೆ ಮಂತ್ರಿ ಪದವಿ ನೀಡಬಾರದೆಂಬ ನಿರ್ಣಯವನ್ನು ಕೈಗೊಳ್ಳಲಾಗಿದೆ.

Share. Facebook Twitter LinkedIn WhatsApp Email

Related Posts

BREAKING : ಎರಡೂವರೆ ಲಕ್ಷ ಖಾಲಿ ಹುದ್ದೆಗಳನ್ನ ಹಂತ ಹಂತವಾಗಿ ಭರ್ತಿ ಮಾಡುತ್ತೇವೆ : ಸಿಎಂ ಸಿದ್ದರಾಮಯ್ಯ ಘೋಷಣೆ

25/02/2026 5:37 PM1 Min Read

BIG NEWS : ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆಗೆ ಬಿಗ್ ಟ್ವಿಸ್ಟ್ : 500 ಕೋಟಿ ಹವಾಲಾನೆ ರಾಯ್ ಆತ್ಮಹತ್ಯೆಗೆ ಕಾರಣ!

25/02/2026 5:28 PM2 Mins Read

ಕರ್ನಾಟಕದಲ್ಲಿ ಶುದ್ಧ ಕುಡಿಯುವ ನೀರು ಒದಗಿಸಲು 52 ಕೋಟಿ ವೆಚ್ಚ: ಸಚಿವ ಪ್ರಿಯಾಂಕ್ ಖರ್ಗೆ

25/02/2026 5:26 PM3 Mins Read
Recent News

BREAKING : ‘ಅನಿಲ್ ಅಂಬಾನಿ’ಯ 3,716 ಕೋಟಿ ರೂ. ಮೌಲ್ಯದ ‘ಮುಂಬೈ ನಿವಾಸ’ ED ಮುಟ್ಟುಗೋಲು

25/02/2026 6:33 PM

ಖಾಲಿಯಿರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು-ಮುಖ್ಯಮಂತ್ರಿ ಸಿದ್ದರಾಮಯ್ಯ

25/02/2026 6:24 PM

BREAKING : ಎರಡೂವರೆ ಲಕ್ಷ ಖಾಲಿ ಹುದ್ದೆಗಳನ್ನ ಹಂತ ಹಂತವಾಗಿ ಭರ್ತಿ ಮಾಡುತ್ತೇವೆ : ಸಿಎಂ ಸಿದ್ದರಾಮಯ್ಯ ಘೋಷಣೆ

25/02/2026 5:37 PM

BIG NEWS : ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆಗೆ ಬಿಗ್ ಟ್ವಿಸ್ಟ್ : 500 ಕೋಟಿ ಹವಾಲಾನೆ ರಾಯ್ ಆತ್ಮಹತ್ಯೆಗೆ ಕಾರಣ!

25/02/2026 5:28 PM
State News
KARNATAKA

ಖಾಲಿಯಿರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು-ಮುಖ್ಯಮಂತ್ರಿ ಸಿದ್ದರಾಮಯ್ಯ

By kannadanewsnow0525/02/2026 6:24 PM KARNATAKA 2 Mins Read

ಉಡುಪಿ, ಫೆಬ್ರವರಿ 25: ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಹಂತಹಂತವಾಗಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…

BREAKING : ಎರಡೂವರೆ ಲಕ್ಷ ಖಾಲಿ ಹುದ್ದೆಗಳನ್ನ ಹಂತ ಹಂತವಾಗಿ ಭರ್ತಿ ಮಾಡುತ್ತೇವೆ : ಸಿಎಂ ಸಿದ್ದರಾಮಯ್ಯ ಘೋಷಣೆ

25/02/2026 5:37 PM

BIG NEWS : ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆಗೆ ಬಿಗ್ ಟ್ವಿಸ್ಟ್ : 500 ಕೋಟಿ ಹವಾಲಾನೆ ರಾಯ್ ಆತ್ಮಹತ್ಯೆಗೆ ಕಾರಣ!

25/02/2026 5:28 PM

ಕರ್ನಾಟಕದಲ್ಲಿ ಶುದ್ಧ ಕುಡಿಯುವ ನೀರು ಒದಗಿಸಲು 52 ಕೋಟಿ ವೆಚ್ಚ: ಸಚಿವ ಪ್ರಿಯಾಂಕ್ ಖರ್ಗೆ

25/02/2026 5:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.