ಬೆಂಗಳೂರು : ಇತ್ತೀಚಿಗೆ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರು ಕಾಮಗಾರಿ ಒಂದಕ್ಕೆ ಗುತ್ತಿಗೆದಾರನ ಬಳಿ 5ಲಕ್ಷ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ಇದೀಗ ಇದೆ ವಿಚಾರವಾಗಿ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಆರ್ ಮಂಜುನಾಥ್ ಸ್ಫೋಟಕವಾದ ಹೇಳಿಕೆ ನೀಡಿದ್ದಾರೆ.
ಕೋಲಾರದಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಕಾಮಗಾರಿ ಮುಗಿದರೂ ಬಿಲ್ ಆಗದೆ ಮನೆಮಠ ಕಳೆದುಕೊಂಡಿದ್ದೇವೆ. ನಾವು ಪರ್ಸೆಂಟೇಜ್ ನಿಗದಿ ಮಾಡಿಲ್ಲ ಆದರೂ ಪರ್ಸೆಂಟೇಜ್ ಇದೆ. ಸರ್ಕಾರದ ಎಲ್ಲಾ ಇಲಾಖೆಗಳಲ್ಲೂ ಪರ್ಸೆಂಟೇಜ್ ಇದೆ ನಾವು ಮಧ್ಯಮ ವರ್ಗದ ಗುತ್ತಿಗೆದಾರರು ಆ ವಿಚಾರ ಮಾತನಾಡಿದರೆ ತೊಂದರೆಯಾಗುತ್ತದೆ ಎಂದು ತಿಳಿಸಿದರು.
ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಚಂದ್ರು ಲಮಾಣಿ ಬಲೆಗೆ ಬಿದ್ದ ವಿಚಾರವಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಅಂತಹ ಇಬ್ಬರು ಶಾಸಕರು ಸಿಗುತ್ತಾರೆ. ಬಿಜೆಪಿ ಶಾಸಕ ಚಂದ್ರು ಲಮಾಣಿ ಈ ರೀತಿ ಎಲ್ಲಾ ಪಕ್ಷಗಳಲ್ಲೂ ಇದ್ದಾರೆ. ಸಿಎಂ ಸಿದ್ದರಾಮಯ್ಯ ಅನುಮತಿ ನೀಡಿದರೆ ಶಾಸಕರ ಹೆಸರು ಹೇಳುತ್ತೇವೆ ಎಂದು ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಆರ್ ಮಂಜುನಾಥ್ ಸ್ಫೋಟಕ ಹೇಳಿಕೆ ನೀಡಿದರು.
ಗುತ್ತಿಗೆದಾರರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಪ್ರತಿಭಟನೆ ಮಾಡುತ್ತೇವೆ ಮಾರ್ಚ್ 6 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಮಾಡುತ್ತೇವೆ. ಎಲ್ಲಾ ಜಿಲ್ಲೆಗಳು ಮತ್ತು ತಾಲೂಕುಗಳಿಂದ ಗುತ್ತಿಗೆದಾರರು ಹೋರಾಟಗೆ ಬರುತ್ತಾರೆ ಎಂದು ಆರ್ ಮಂಜುನಾಥ್ ತಿಳಿಸಿದರು.








