ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಸಂಬಂಧಿಸಿದಂತೆ 3ನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ.
ಸೇವಾ ನಿರತ ಮತ್ತು ಸೇವಾ ನಿರತರಲ್ಲದ ಅಭ್ಯರ್ಥಿಗಳ ಸೀಟು ಹಂಚಿಕೆಯ ಫಲಿತಾಂಶ ಇದಾಗಿದೆ. ಅಂತಿಮ ಫಲಿತಾಂಶವನ್ನು ಫೆ.26ರಂದು ಪ್ರಕಟಿಸಲಿದೆ ಎಂದು ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಸೀಟು ಹಂಚಿಕೆಯಾದವರು ಮಾರ್ಚ್ 3ರೊಳಗೆ ಶುಲ್ಕ ಪಾವತಿಸಿ, ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಬೇಕು. ಮಾರ್ಚ್ 4ರೊಳಗೆ ಸಂಬಂಧಪಟ್ಟ ಕಾಲೇಜುಗಳಲ್ಲಿ ವರದಿ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.








