ಮೈಸೂರು : ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಸಂಪುಟ ಪುನಾರ ರಚನೆ ಕುರಿತು ಕೂಡ ಇತ್ತೀಚೆಗೆ ಕಾಂಗ್ರೆಸ್ನ 31 ಶಾಸಕರು ಹೈಕಮಾಂಡ್ಗೆ ಪತ್ರ ಬರೆದಿದ್ದರು. ಇದರ ಮಧ್ಯ ಬಿಜೆಪಿ ಜೆಡಿಎಸ್ 2028 ರಲ್ಲಿ ಅಧಿಕಾರಕ್ಕೆ ಬರಲಿದ್ದು ಎಚ್ ಡಿ ಕುಮಾರಸ್ವಾಮಿ ಸಿಎಂ ಅಗಲಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.
ಮೈಸೂರಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಅಧಿಕಾರಕ್ಕೆ ಬರಲಿದ್ದು, ಮೈತ್ರಿಕೂಟದಿಂದ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.
ಈ ಹಿಂದೆ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ರಾಜ್ಯದ ರೈತರ ಸಾವಿರಾರು ಕೋಟಿ ರು.ಗಳನ್ನು ಮನ್ನಾ ಮಾಡಿದ್ದರು. ಆದರೆ, ಕಾಂಗ್ರೆಸ್ ಸರ್ಕಾರ 4 ಲಕ್ಷ ರು. ಸಾಲವನ್ನು ರಾಜ್ಯದ ಜನತೆ ಮೇಲೆ ಹೊರಿಸಿದೆ ಎಂದು ಕಾಂಗ್ರೆಸ್ ಸರ್ಕಾರವನ್ನು ದೂಷಿಸಿದರು.








