ಬೆಂಗಳೂರು : ನೆಲಮಂಗಲ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಹುದ್ದೆಗೆ ನಡೆದ ಚುನಾವಣೆಯಲ್ಲಿ, ವಿಪ್ ಉಲ್ಲಂಘನೆ ಹಿನ್ನೆಲೆ, ಕರ್ನಾಟಕ ಸ್ಥಳೀಯ ಸಂಸ್ಥೆಗಳ (ಪಕ್ಷಾಂತರ ನಿಷೇಧ) ಅಧಿನಿಯಮ 4 (2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಅವರು ಆದೇಶಿಸಿದ್ದಾರೆ.
ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಹುದ್ದೆಗೆ 2025ರ ಫೆಬ್ರುವರಿ 13ರಂದು ನಡೆದ ಚುನಾವಣೆಯಲ್ಲಿ, ಜೆಡಿಎಸ್ ಚಿಹ್ನೆ ಅಡಿ ಸದಸ್ಯರಾಗಿ ಆಯ್ಕೆಯಾಗಿದ್ದ ಸದಸ್ಯರು ಪಕ್ಷವು ಜಾರಿಗೊಳಿಸಿದ್ದ ವಿಪ್ ಉಲ್ಲಂಘಿಸಿದ್ದರು. ಜೆಡಿಎಸ್ ಪಕ್ಷದ ಅಭ್ಯರ್ಥಿಗಳಿಗೆ ಮತ ಚಲಾಯಿಸದೇ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಚಲಾಯಿಸಿ ಚುನಾವಣಾ ಅಕ್ರಮ ಎಸಗಿರುತ್ತಾರೆ ಎಂದು ಆರೋಪಿಸಿ ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಮುನೇಗೌಡ ಅವರು 2025ರ ಮಾರ್ಚ್ 3ರಂದು ಪಕ್ಷಾಂತರ ನಿಷೇಧ ಕಾಯ್ದೆಯ ಸೆಕ್ಷನ್ 3 ಮತ್ತು 4ರ ಅಡಿ ಪೌರಾಯುಕ್ತರಿಗೆ ದೂರು ಸಲ್ಲಿಸಿದ್ದರು.
ನಗರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಆಯ್ಕೆ ಮಾಡಲು ನಡೆದ ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳಿಗೆ ಮತ ಚಲಾಯಿಸಲು ಪ್ರತಿಪಕ್ಷದ ಅಭ್ಯರ್ಥಿಗೆ ಮತ ಚಲಾಯಿಸಿದ್ದರಿಂದ ಪಕ್ಷವು ಮನ್ನಿಸದ ಕಾರಣ ಅನರ್ಹಗೊಳಿಸಲಾಗಿದೆ.ಆನಂದ್ ಜಿ, ಪದ್ಮನಾಭ ಪ್ರಸನ್ನ, ದಕ್ಷಾಯಣಿ ರವಿಕುಮಾರ್, ನರಸಿಂಹಮೂರ್ತಿ, ಭಾರತಿಬಾಯಿ, ಶಾರದಾ ಉಮೇಶ್, ಲತಾ ಹೆಮಂತಕುಮಾರ್ ಅನರ್ಹಗೊಂಡ ನಗರಸಭೆ ಸದಸ್ಯರು.








