ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿಗೆ (KRIES-2026ಕ್ಕೆ) ಅರ್ಜಿ ಸಲ್ಲಿಸಿರುವ ಪರಿಶಿಷ್ಟ ಜಾತಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ ಶಾಲೆಗಳಿಗೆ ಭೇಟಿ ನೀಡಿ ಪ್ರವರ್ಗ-ಎ, ಪ್ರವರ್ಗ-ಬಿ ಮತ್ತು ಪ್ರವರ್ಗ-ಸಿ ಎಂದು ವರ್ಗೀಕರಿಸಿದ ಪ್ರಮಾಣ ಪತ್ರದ ಆರ್.ಡಿ. ಸಂಖ್ಯೆಯನ್ನು ಕೆಇಎ ಪೋರ್ಟಲ್ ನಲ್ಲಿ ನಮೂದಿಸಲು ಮಾರ್ಚ್ 30ರವರೆಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ವಿದ್ಯಾರ್ಥಿಗಳು ಸಂಬಂಧಿಸಿದ ತಹಶೀಲ್ದಾರರಿಂದ ಪಡೆದ ವರ್ಗೀಕರಿಸಿದ ಪ್ರಮಾಣ ಪತ್ರದ ಆರ್.ಡಿ.ಸಂಖ್ಯೆ ನಮೂದಿಸುವುದನ್ನು ಒಳಮೀಸಲಾತಿ ಆದೇಶಾನುಸಾರ ಕಡ್ಡಾಯಗೊಳಿಸಲಾಗಿದೆ ಎಂದು ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರು ಗುರುವಾರ ಪ್ರಕಟಣೆಯಲ್ಲಿ ಹೇಳಿದ್ದಾರೆ.
ತಲೆಹೊಟ್ಟು ಸಮಸ್ಯೆಯೇ? ಕೆಮಿಕಲ್ ಬಿಡಿ, ಮುತ್ತಿನಂತಹ ಕೂದಲಿಗೆ ಮನೆಯಲ್ಲೇ ಇದೆ ಮದ್ದು | Dandruff








