Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಎನ್ಸಿಪಿ ರಾಷ್ಟ್ರೀಯ ಅಧ್ಯಕ್ಷೆಯಾಗಿ ಅಜಿತ್ ಪವಾರ್ ಪತ್ನಿ ‘ಸುನೇತ್ರಾ’ ನೇಮಕ

26/02/2026 6:13 PM

ಯಡಿಯೂರಪ್ಪ, ಬೊಮ್ಮಾಯಿಯವರೇ ನೀವು ಉರ್ದು ಜಾಹೀರಾತು ನೀಡಿಲ್ವ?: ಸಾಕ್ಷಿ ಸಹಿತ ಸಿಎಂ ಪ್ರಶ್ನೆ

26/02/2026 6:03 PM

Watch Video: ಕೇರಳದಲ್ಲಿ ವ್ಯಕ್ತಿಯನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಆನೆ: ಮೈ ಜುಂ ಎನ್ನುವ ವೀಡಿಯೊ ವೈರಲ್

26/02/2026 5:57 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಯಡಿಯೂರಪ್ಪ, ಬೊಮ್ಮಾಯಿಯವರೇ ನೀವು ಉರ್ದು ಜಾಹೀರಾತು ನೀಡಿಲ್ವ?: ಸಾಕ್ಷಿ ಸಹಿತ ಸಿಎಂ ಪ್ರಶ್ನೆ
KARNATAKA

ಯಡಿಯೂರಪ್ಪ, ಬೊಮ್ಮಾಯಿಯವರೇ ನೀವು ಉರ್ದು ಜಾಹೀರಾತು ನೀಡಿಲ್ವ?: ಸಾಕ್ಷಿ ಸಹಿತ ಸಿಎಂ ಪ್ರಶ್ನೆ

By kannadanewsnow0926/02/2026 6:03 PM

ಬೆಂಗಳೂರು: ಹಿಂದೆ ತಾವೇ ಅಧಿಕಾರದಲ್ಲಿ ಇದ್ದಾಗ ಉರ್ದು ಭಾಷೆಯ ಜಾಹೀರಾತು ನೀಡಿ, ಈಗ ನಮ್ಮ ವಿರುದ್ಧ ಮುಗಿಬೀಳುವುದು ಆತ್ಮವಂಚನೆ ಮತ್ತು ಅಸಹ್ಯದ ಪರಮಾವಧಿ. ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರು ಅಧಿಕಾರದಲ್ಲಿದ್ದಾಗ ಯಾರ ಓಲೈಕೆ ಮಾಡಲು ಉರ್ದು ಜಾಹೀರಾತು ನೀಡಿದ್ದರು? ಎಂದು ಹೇಳಿ ಪುಣ್ಯಕಟ್ಟಿಕೊಳ್ಳಿ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ.

ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಉರ್ದು ಪತ್ರಿಕೆಯಲ್ಲಿ ಸರ್ಕಾರದ ಜಾಹೀರಾತೊಂದು ಉರ್ದು ಭಾಷೆಯಲ್ಲಿ ಪ್ರಕಟಗೊಂಡಿದ್ದನ್ನು ವಿರೋಧಿಸಿ ವಿಪಕ್ಷಗಳ ನಾಯಕರು ಆಡಿರುವ ವೀರಾವೇಶದ ಮಾತುಗಳನ್ನು ಆಲಿಸಿದೆ. ಹಿಂದೆ ತಾವೇ ಅಧಿಕಾರದಲ್ಲಿ ಇದ್ದಾಗ ಉರ್ದು ಭಾಷೆಯ ಜಾಹೀರಾತು ನೀಡಿ, ಈಗ ನಮ್ಮ ವಿರುದ್ಧ ಮುಗಿಬೀಳುವುದು ಆತ್ಮವಂಚನೆ ಮತ್ತು ಅಸಹ್ಯದ ಪರಮಾವಧಿ. ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರು ಅಧಿಕಾರದಲ್ಲಿದ್ದಾಗ ಯಾರ ಓಲೈಕೆ ಮಾಡಲು ಉರ್ದು ಜಾಹೀರಾತು ನೀಡಿದ್ದರು? ಎಂದು ಹೇಳಿ ಪುಣ್ಯಕಟ್ಟಿಕೊಳ್ಳಿ ಎಂದಿದ್ದಾರೆ.

ಸರ್ಕಾರದ ಕಾರ್ಯಕ್ರಮಗಳು, ಯೋಜನೆಗಳ ಮಾಹಿತಿಯನ್ನು ಜನರಿಗೆ ತಲುಪಿಸುವ ಉದ್ದೇಶದಿಂದಲೇ ಸರ್ಕಾರ ಜಾಹೀರಾತು ನೀಡುತ್ತದೆ. ಹೆಚ್ಚೆಚ್ಚು ಜನರನ್ನು ತಲುಪುತ್ತದೆ ಎನ್ನುವ ಕಾರಣಕ್ಕಾಗಿ ಆಯಾ ಭಾಷೆಯ ಪತ್ರಿಕೆಗಳಲ್ಲಿ ಅದೇ ಭಾಷೆಯ ಜಾಹೀರಾತು ನೀಡುವುದು ಹಿಂದಿನಿಂದ ನಡೆದುಕೊಂಡು ಬಂದ ಪದ್ಧತಿ. ಇದರಿಂದ ಪತ್ರಿಕೆಯ ಓದುಗರಿಗೆ ಜಾಹೀರಾತಿನ ವಿಚಾರ ಅರ್ಥವಾಗಿ, ಜಾಹೀರಾತು ನೀಡಿದ ಉದ್ದೇಶವೂ ಈಡೇರುತ್ತದೆ ಎಂದು ಹೇಳಿದ್ದಾರೆ.

ಬಿಜೆಪಿ ನಾಯಕರು ಒಂದಲ್ಲ, ಎರಡಲ್ಲ ಹತ್ತಾರು ಬಾರಿ ಉರ್ದು ಜಾಹೀರಾತುಗಳನ್ನು ನೀಡಿದ್ದಾರೆ, ಆಗ ಅವರಿಗೆ ಅದು ತುಷ್ಟೀಕರಣ ಅನ್ನಿಸಲಿಲ್ಲ. ಈಗ ನಮ್ಮ ಸರ್ಕಾರ ನೀಡಿರುವ ಉರ್ದು ಜಾಹೀರಾತು ಕಂಡೊಡನೆ ಅವರೊಳಗಿನ ಕನ್ನಡಪ್ರೇಮ ಇದ್ದಕ್ಕಿದ್ದಂತೆ ಎದ್ದುನಿಂತಿದೆ. ನಿಮ್ಮ ಈ ‘ಹಿಪೋಕ್ರಸಿ’ ಗೋಸುಂಬೆಯನ್ನೇ ನಾಚಿಸುವಂತಿದೆ ಎಂದು ಗುಡುಗಿದ್ದಾರೆ.

ನೆಲ – ಜಲ – ಭಾಷೆಯ ಕಾಳಜಿಯ ಬಗ್ಗೆ ಬಿಜೆಪಿ ನಾಯಕರಿಂದ ಪಾಠ ಹೇಳಿಸಿಕೊಳ್ಳಬೇಕಾದ ದರಿದ್ರ ಸ್ಥಿತಿ ನಮಗೆ ಬಂದಿಲ್ಲ. ಕನ್ನಡ ಮತ್ತು ಕನ್ನಡಿಗರ ಹಿತ ಕಾಯುವ ವಿಚಾರ ಬಂದಾಗ ರಾಜಕೀಯ ಬದಿಗಿಟ್ಟು, ಹೋರಾಟದ ಮೊದಲ ಸಾಲಿನಲ್ಲಿ ನಿಂತವನು ನಾನು. ಇದಕ್ಕೆ ಇತಿಹಾಸ ಸಾಕ್ಷಿ. ಕನ್ನಡ ಕಾವಲು ಸಮಿತಿಯ ಅಧ್ಯಕ್ಷನಾಗಿಯೇ ರಾಜಕೀಯ ಜೀವನಕ್ಕೆ ಕಾಲಿರಿಸಿದ ನನಗೆ ಕನ್ನಡ ಬರಿ ಭಾಷೆಯಲ್ಲ, ಬದುಕು ಹೌದು ಎಂದು ಹೇಳಿದ್ದಾರೆ.

ಉರ್ದು ಪತ್ರಿಕೆಯಲ್ಲಿ ಸರ್ಕಾರದ ಜಾಹೀರಾತೊಂದು ಉರ್ದು ಭಾಷೆಯಲ್ಲಿ ಪ್ರಕಟಗೊಂಡಿದ್ದನ್ನು ವಿರೋಧಿಸಿ ವಿಪಕ್ಷಗಳ ನಾಯಕರು ಆಡಿರುವ ವೀರಾವೇಶದ ಮಾತುಗಳನ್ನು ಆಲಿಸಿದೆ. ಹಿಂದೆ ತಾವೇ ಅಧಿಕಾರದಲ್ಲಿ ಇದ್ದಾಗ ಉರ್ದು ಭಾಷೆಯ ಜಾಹೀರಾತು ನೀಡಿ, ಈಗ ನಮ್ಮ ವಿರುದ್ಧ ಮುಗಿಬೀಳುವುದು ಆತ್ಮವಂಚನೆ ಮತ್ತು ಅಸಹ್ಯದ ಪರಮಾವಧಿ. ಬಿ.ಎಸ್.ಯಡಿಯೂರಪ್ಪ, ಬಸವರಾಜ… pic.twitter.com/DIS9CSvhgx

— Siddaramaiah (@siddaramaiah) February 26, 2026

Watch Video: ಕೇರಳದಲ್ಲಿ ವ್ಯಕ್ತಿಯನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಆನೆ: ಮೈ ಜುಂ ಎನ್ನುವ ವೀಡಿಯೊ ವೈರಲ್

Share. Facebook Twitter LinkedIn WhatsApp Email

Related Posts

‘ಮೊಬೈಲ್ ಬಿಡಿ, ಪುಸ್ತಕ ಹಿಡಿಯಿರಿ’: ಸೋಷಿಯಲ್ ಮೀಡಿಯಾ ನಿಯಂತ್ರಣಕ್ಕೆ ಸಚಿವ ಮಧು ಬಂಗಾರಪ್ಪ ಚಿಂತನೆ

26/02/2026 5:47 PM1 Min Read

ಮಲ್ಲಿಕಾರ್ಜುನ ಮುತ್ಯಾ ವಿರುದ್ಧದ ಪೋಕ್ಸೋ ಕೇಸ್ ಗೆ ಬಿಗ್ ಟ್ವಿಸ್ಟ್: ಉಲ್ಟಾ ಹೊಡೆದ ಬಾಲಕಿಯ ಪೋಷಕರು

26/02/2026 5:22 PM1 Min Read

ದೆಹಲಿಯಲ್ಲಿ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ಮಂಜುನಾಥ್ ಗೌಡ ನೇತೃತ್ವದಲ್ಲಿ ರಾಜ್ಯದ ಕಾರ್ಯಕರ್ತರು ಭಾಗಿ

26/02/2026 5:09 PM1 Min Read
Recent News

BREAKING : ಎನ್ಸಿಪಿ ರಾಷ್ಟ್ರೀಯ ಅಧ್ಯಕ್ಷೆಯಾಗಿ ಅಜಿತ್ ಪವಾರ್ ಪತ್ನಿ ‘ಸುನೇತ್ರಾ’ ನೇಮಕ

26/02/2026 6:13 PM

ಯಡಿಯೂರಪ್ಪ, ಬೊಮ್ಮಾಯಿಯವರೇ ನೀವು ಉರ್ದು ಜಾಹೀರಾತು ನೀಡಿಲ್ವ?: ಸಾಕ್ಷಿ ಸಹಿತ ಸಿಎಂ ಪ್ರಶ್ನೆ

26/02/2026 6:03 PM

Watch Video: ಕೇರಳದಲ್ಲಿ ವ್ಯಕ್ತಿಯನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಆನೆ: ಮೈ ಜುಂ ಎನ್ನುವ ವೀಡಿಯೊ ವೈರಲ್

26/02/2026 5:57 PM

‘ಮೊಬೈಲ್ ಬಿಡಿ, ಪುಸ್ತಕ ಹಿಡಿಯಿರಿ’: ಸೋಷಿಯಲ್ ಮೀಡಿಯಾ ನಿಯಂತ್ರಣಕ್ಕೆ ಸಚಿವ ಮಧು ಬಂಗಾರಪ್ಪ ಚಿಂತನೆ

26/02/2026 5:47 PM
State News
KARNATAKA

ಯಡಿಯೂರಪ್ಪ, ಬೊಮ್ಮಾಯಿಯವರೇ ನೀವು ಉರ್ದು ಜಾಹೀರಾತು ನೀಡಿಲ್ವ?: ಸಾಕ್ಷಿ ಸಹಿತ ಸಿಎಂ ಪ್ರಶ್ನೆ

By kannadanewsnow0926/02/2026 6:03 PM KARNATAKA 2 Mins Read

ಬೆಂಗಳೂರು: ಹಿಂದೆ ತಾವೇ ಅಧಿಕಾರದಲ್ಲಿ ಇದ್ದಾಗ ಉರ್ದು ಭಾಷೆಯ ಜಾಹೀರಾತು ನೀಡಿ, ಈಗ ನಮ್ಮ ವಿರುದ್ಧ ಮುಗಿಬೀಳುವುದು ಆತ್ಮವಂಚನೆ ಮತ್ತು…

‘ಮೊಬೈಲ್ ಬಿಡಿ, ಪುಸ್ತಕ ಹಿಡಿಯಿರಿ’: ಸೋಷಿಯಲ್ ಮೀಡಿಯಾ ನಿಯಂತ್ರಣಕ್ಕೆ ಸಚಿವ ಮಧು ಬಂಗಾರಪ್ಪ ಚಿಂತನೆ

26/02/2026 5:47 PM

ಮಲ್ಲಿಕಾರ್ಜುನ ಮುತ್ಯಾ ವಿರುದ್ಧದ ಪೋಕ್ಸೋ ಕೇಸ್ ಗೆ ಬಿಗ್ ಟ್ವಿಸ್ಟ್: ಉಲ್ಟಾ ಹೊಡೆದ ಬಾಲಕಿಯ ಪೋಷಕರು

26/02/2026 5:22 PM

ದೆಹಲಿಯಲ್ಲಿ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ಮಂಜುನಾಥ್ ಗೌಡ ನೇತೃತ್ವದಲ್ಲಿ ರಾಜ್ಯದ ಕಾರ್ಯಕರ್ತರು ಭಾಗಿ

26/02/2026 5:09 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.