ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಬೀದಿ ನಾಯಿ ಹಾವಳಿ ಮುಂದುವರೆದಿದ್ದು, ಬೆಂಗಳೂರಿನ ಕಾಳನ ಅಗ್ರಹಾರದ ಎಂಎಲ್ಎ ಲೇಔಟ್ ನಲ್ಲಿ ಮಗುವಿನ ಮೇಲೆ ನಾಯಿ ದಾಳಿ ಮಾಡಿದ ಘಟನೆ ವರದಿಯಾಗಿದೆ.
ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ತಾಯಿ ಮತ್ತು ಮಗು ಈ ವೇಳೆ ಮಗುವಿನ ಮೇಲೆ ಬೀದಿ ನಾಯಿ ಒಂದು ದಾಳಿಗೆ ಮುಂದಾಗಿದೆ. ತಕ್ಷಣ ಮಗುವನ್ನು ತಾಯಿ ರಕ್ಷಣೆ ಮಾಡಿದ್ದಾರೆ. ನಾಯಿ ದಾಳಿಯಿಂದ ತಪ್ಪಿಸಿಕೊಳ್ಳಲು ತಾಯಿ ಮತ್ತು ಮಗು ನೆಲಕ್ಕೆ ಬಿದ್ದಿದ್ದಾರೆ. ನಿನ್ನೆ ಸಂಜೆ 7:30 ಸುಮಾರಿಗೆ ಈ ಒಂದು ಘಟನೆ ನಡೆದಿದೆ. ಬೀದಿ ನಾಯಿ ದಾಳಿ ಮಾಡುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.








