ಬೆಂಗಳೂರು : ಗುತ್ತಿಗೆದಾರನಿಂದ 5 ಲಕ್ಷ ಸ್ವೀಕರಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಶಾಸಕ ಚಂದ್ರು ಲಮಾಣಿ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಯಿತು.
ಶಾಸಕ ಚಂದ್ರು ಲಮಾಣಿ ಪರ ಹಿರಿಯ ವಕೀಲ ಅಶೋಕ ಹಾರನಹಳ್ಳಿ ವಾದ ಮಂಡಿಸಿದರು. ಎಸ್ಪಿಪಿ ವಾದಮಂಡನೆಗೆ ಕಾಲಾವಕಾಶ ಕೋರಿದ್ದ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಿಚಾರಣೆಯನ್ನು ನಾಳೆಗೆ ಮುಂದೂಡಿತು. ತಡೆಗೋಡೆ ನಿರ್ಮಾಣ ಒಂದಕ್ಕೆ ಗುತ್ತಿಗೆದಾರನ ಬಳಿ 11% ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳ ಬಳಗೆ ಶಾಸಕ ಚಂದ್ರು ಲಮಾಣಿ ರೆಡ್ ಹ್ಯಾಂಡಾಗಿ ಸಿಗಿಬಿದ್ದಿದ್ದಾರೆ.








