ಬೆಂಗಳೂರು: ರಾಜ್ಯದ ವಿವಿಧ ನಿಗಮ-ಮಂಡಳಿಗಳಿಗೆ ಈಗಾಗಲೇ ಅಧ್ಯಕ್ಷರನ್ನು ಮುಂದುವರೆಸಿ ಆದೇಶವನ್ನು ಸರ್ಕಾರ ಮಾಡಿತ್ತು. ಆದರೇ ಕರ್ನಾಟಕ ದ್ರಾಕ್ಷಾರಸ ಮಂಡಳಿಯ ಅಧ್ಯಕ್ಷರಾಗಿದ್ದಂತ ಯೋಗೇಶ್ ಬಾಬು ಅವರನ್ನು ಮುಂದುವರೆಸಿ ಆದೇಶಿಸಿರಲಿಲ್ಲ. ಹೀಗಾಗಿ ಯೋಗೇಶ್ ಬಾಬು ಅವರನ್ನು ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷರಾಗಿ ಮುಂದುವರೆಸಿ ಆದೇಶ ಹೊರಡಿಸುವಂತೆ ಸಿಎಂ ಸಿದ್ಧರಾಮಯ್ಯಗೆ ಡಿಸಿಎಂ ಡಿ.ಕೆ ಶಿವಕುಮಾರ್ ಪತ್ರ ಬರೆದಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಪತ್ರ ಬರೆದಿರುವಂತ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು, ದಿನಾಂಕ 28-02-2024ರಂದು ವಿವಿಧ ಪ್ರಾಧಿಕಾರ, ನಿಗಮ ಮಂಡಳಿಯ ಅಧ್ಯಕ್ಷರನ್ನು, ಪದಾಧಿಕಾರಿಗಳು ಹಾಗೂ ಮುಖಂಡರನ್ನು ಎರಡು ವರ್ಷಗಳ ಅವಧಿಗೆ ನೇಮಕ ಮಾಡಲಾಗಿತ್ತು. ದಿನಾಂಕ 07-02-2026ರಂದು ಆದೇಶ ಪಟ್ಟಿಯಲ್ಲಿ ಕೆಲವರಿಗೆ ರಾಜ್ಯ ಸಚಿವ ಸ್ಥಾನ ಮಾನ ನೀಡಿ ಮುಂದಿನ ಆದೇಶದವರೆಗೆ ಮುಂದುವರೆಸಲು ಆದೇಶ ಮಾಡಲಾಗಿದೆ ಎಂದಿದ್ದಾರೆ.
ಇನ್ನೂ ಆ ಆದೇಶದಲ್ಲಿ ಕೆಲವರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿ ಮುಂದಿನ ಆದೇಶದವರೆಗೆ ಮುಂದುವರೆಸಲು ಆದೇಶ ಮಾಡಿದ್ದು, ಇದರಲ್ಲಿ ಕಾಡಾ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರುಗಳನ್ನು ಮತ್ತು ಯೋಜನಾ ಅಧ್ಯಕ್ಷರುಗಳನ್ನು ಕೈಬಿಡಲಾಗಿರುತ್ತದೆ. ಪ್ರಸ್ತುತ ಸದರಿ ಪ್ರಾಧಿಕಾರಗಳಿಗೆ ಬೇರೆ ಅಧ್ಯಕ್ಷರನ್ನು ನೇಮಕ ಮಾಡಿಲ್ಲವಾದ್ದರಿಂದ ಮುಂದಿನ ಆದೇಶದವರೆಗೆ ಅಥವಾ ನೇಮಕ ಮಾಡುವವರೆಗೆ ಕರ್ನಾಟಕ ದ್ರಾಕ್ಷಾರಸ ಮಂಡಳಿಯ ಅಧ್ಯಕ್ಷರನ್ನಾಗಿ ಯೋಗೇಶ್ ಬಾಬು ಅವರನ್ನು ನೇಮಕ ಮಾಡುವಂತೆ ಡಿಸಿಎಂ ಡಿ.ಕೆ ಶಿವಕುಮಾರ್ ಕೋರಿದ್ದಾರೆ.
ಇದಷ್ಟೇ ಅಲ್ಲದೇ ಮೈಸೂರಿನ ಕಾಡಾ ಅಧ್ಯಕ್ಷರಾಗಿ ಪಿ ಮರಿಸ್ವಾಮಿ, ಶಿವಮೊಗ್ಗ ಕಾಡಾ ಅಧ್ಯಕ್ಷರಾಗಿ ಡಾ.ಅಂಶುಮಂತ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಆಂಜುನೇಯಲು ಜಿ.ಎಸ್, ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಕೇಶವರೆಡ್ಡಿ, ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ತಾಜ್ ಪೀರ್, ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಜಾಕಿರ್ ಸವದಿ, ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಹೆಚ್.ಎಸ್ ಸುಂದರೇಶ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಸದಾಶಿವ ಉಲ್ಲಾಳ್ ಹಾಗೂ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಬಸವರಾಜ್ ಜಾಬಶೆಟ್ಟಿ ಮುಂದುವರೆಸುವಂತೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಸಿಎಂ ಸಿದ್ಧರಾಮಯ್ಯ ಅವರಲ್ಲಿ ಪತ್ರದಲ್ಲಿ ಕೋರಿದ್ದಾರೆ.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು…,,,

ನನ್ನ ಪರವಾಗಿ ಯಾರೂ ದೆಹಲಿಗೆ ಹೋಗುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್
6,50,000 ಉದ್ಯೋಗಿಗಳಿಗೆ 2023-2024 ರಲ್ಲಿ AI ಕೌಶಲ್ಯಗಳ ಕುರಿತು ತರಬೇತಿ: ಡಿಸಿಎಂ ಡಿ.ಕೆ ಶಿವಕುಮಾರ್








