Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಚೆಕ್ ಬೌನ್ಸ್’ ಆದ ತಕ್ಷಣ ಅದನ್ನು ‘ವಂಚನೆ’ ಎನ್ನಲಾಗದು: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

20/03/2026 8:00 PM

BREAKING : ‘ವಾಕರ್ ಟೆಕ್ಸಾಸ್ ರೇಂಜರ್’ ಖ್ಯಾತಿಯ ಹಾಲಿವುಡ್ ಪ್ರಸಿದ್ಧ ನಟ ‘ಚಕ್ ನಾರ್ರಿಸ್’ ಇನ್ನಿಲ್ಲ

20/03/2026 7:59 PM

BREAKING: ಹಾಲಿವುಡ್ ಹಿರಿಯ ‘ಆಕ್ಷನ್ ಸ್ಟಾರ್ ಚಕ್ ನಾರ್ರಿಸ್’ ಇನ್ನಿಲ್ಲ | Walker Texas Ranger

20/03/2026 7:56 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ: ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್
KARNATAKA

ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ: ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್

By kannadanewsnow0928/02/2026 1:55 PM

ಬೆಂಗಳೂರು : ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ. ಹಣೆಬರಹ ಇಲ್ಲ ಎಂದರೆ ಯಾರೂ ಏನೂ ಮಾಡಲು ಆಗುವುದಿಲ್ಲ ಎಂದು ಬಮೂಲ್ ಅಧ್ಯಕ್ಷರಾದ ಡಿ.ಕೆ. ಸುರೇಶ್ ಅವರು ತಿಳಿಸಿದರು.

ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು.

ನೀವು ಶಸ್ತ್ರತ್ಯಾಗ ಮಾಡಿದ್ದೀರಾ ಎಂದು ಕೇಳಿದಾಗ, “ತ್ಯಾಗ ಮಾಡಲು ಶಸ್ತ್ರ ಇರಬೇಕಲ್ಲವೇ? ಶಸ್ತ್ರವೇ ಇಲ್ಲವಲ್ಲ. ಶಸ್ತ್ರ ಇದೆ ಎಂದು ನಾನು ಯಾವಾಗ ಹೇಳಿದ್ದೆ. ಶಸ್ತ್ರವೇ ಇಲ್ಲದಿದ್ದಾಗ ಶಸ್ತ್ರತ್ಯಾಗದ ಪ್ರಶ್ನೆಯೇ ಬಾರದು” ಎಂದು ಕೇಳಿದರು.

ತಾಳ್ಮೆಯ ಅಸ್ತ್ರ ಇದೆ ಎಂದಿದ್ದೀರಿ ಎಂದಾಗ, “ಈಗಲೂ ತಾಳ್ಮೆ ಇರಲಿ ಎಂದು ಹೇಳುತ್ತಿದ್ದೇನೆ” ಎಂದರು.

ಶಸ್ತ್ರ, ತಂತ್ರ, ಯುದ್ಧ ಇಲ್ಲದೇ ಬಗೆಹರಿಯುವುದೇ ಎಂದಾಗ, “ಇದು ರಾಜಕಾರಣ. ಇಲ್ಲಿ ಶಸ್ತ್ರ ಹಾಗೂ ಅಸ್ತ್ರ ಬೇಕಾಗಿಲ್ಲ” ಎಂದರು.

ಶಾಸಕರ ದೆಹಲಿ ಯಾತ್ರೆ ವಿಚಾರ ನನಗೆ ಗೊತ್ತಿಲ್ಲ

ಶಾಸಕರು ದೆಹಲಿಗೆ ತೆರಳಿ ನಾಯಕತ್ವ ಬದಲಾವಣೆ ವಿಚಾರವಾಗಿ ಹೈಕಮಾಂಡ್ ನಾಯಕರನ್ನು ಕೇಳುವ ಬಗ್ಗೆ ಪ್ರಶ್ನಿಸಿದಾಗ, “ಶಾಸಕರು ದೆಹಲಿಗೆ ಹೋಗುವ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಈ ಬಗ್ಗೆ ಶಾಸಕರನ್ನೇ ಕೇಳಿ” ಎಂದರು.

ಭೋಜನಕೂಟ ಸೇರಿದ ಶಾಸಕರು ನಾಯಕತ್ವದ ವಿಚಾರದಲ್ಲಿ ಸ್ಪಷ್ಟನೆ ಕೇಳಿದ್ದಾರೆ ಎಂದಾಗ, “ನಾನು ಊರಲ್ಲಿ ಇರಲಿಲ್ಲ. ನನಗೆ ಈ ಬಗ್ಗೆ ಮಾಹಿತಿ ಇಲ್ಲ. ಅವರು ಯಾವ ತೀರ್ಮಾನ ಕೈಗೊಂಡಿದ್ದಾರೆ, ಯಾವ ಹೇಳಿಕೆ ಕೊಟ್ಟಿದ್ದಾರೆ ಎಂಬುದೂ ಗೊತ್ತಿಲ್ಲ. ಇದು ಅವರ ವೈಯಕ್ತಿಕ ವಿಚಾರ. ಪಕ್ಷ ಅದನ್ನು ಗಮನಿಸಲಿದೆ” ಎಂದು ತಿಳಿಸಿದರು.

ಹೀಗೆ ಆದರೆ 2028ರ ಚುನಾವಣೆ ಪಕ್ಷಕ್ಕೆ ಕಷ್ಟವಾಗಲಿದೆ ಎಂದಾಗ, “ಚುನಾವಣೆಗೆ ಸ್ಪರ್ಧಿಸುವವರಿಗೆ ಕಷ್ಟವಾಗಬಹುದು. ನನಗೆ ಕಷ್ಟ ಆಗುವುದಿಲ್ಲ. ಈ ಬಗ್ಗೆ ನಾನೇಗೆ ಹೇಳಲಿ” ಎಂದು ತಿಳಿಸಿದರು.

ಶಾಸಕರ ಆಗ್ರಹದಲ್ಲಿ ನ್ಯಾಯ ಇದೆ ಅಲ್ಲವೇ ಎಂದು ಕೇಳಿದಾಗ, “ಶಾಸಕರ ವಿಚಾರಧಾರೆ ಅವರಿಗೆ ಹಾಗೂ ಸಂಬಂಧಿಸಿದ್ದೇ ಹೊರತು, ನನಗಲ್ಲ. ಪಕ್ಷ ಅವರ ವಿಚಾರಗಳನ್ನು ಗಮನಿಸಲಿದೆ. ನಾವು ಆ ವಿಚಾರದಲ್ಲಿ ಹೇಳಲು ಬರುವುದಿಲ್ಲ” ಎಂದರು.

ಶಿವಕುಮಾರ್ ಅವರು ಪಕ್ಷ ನನ್ನನ್ನು ಗಮನಿಸಲಿದೆ ಎಂದು ಹೇಳುತ್ತಲೇ ಇದ್ದಾರೆ ಎಂದಾಗ, “ಎಲ್ಲದಕ್ಕೂ ತಾಳ್ಮೆ ಇರಲಿ” ಎಂದರು.

ಸಿದ್ದರಾಮಯ್ಯ ಅವರನ್ನು ಬದಲಿಸುವುದಾದರೆ ದಲಿತ ಸಿಎಂ ಮಾಡಬೇಕು ಎಂಬ ಹೆಚ್.ಸಿ ಮಹದೇವಪ್ಪ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಎಲ್ಲರಿಗೂ ಆಸೆ ಇದೆ. ಇದರಲ್ಲಿ ತಪ್ಪೇನಿಲ್ಲ” ಎಂದರು.

ನಿಮ್ಮ ಸಹೋದರರನ್ನು ಸಿಎಂ ಹುದ್ದೆಯಲ್ಲಿ ಕೂರಿಸಲು ನಿಮ್ಮ ಪ್ರಯತ್ನ ಹೇಗಿದೆ, ನಿಮ್ಮ ಬಳಿ ಶಾಸಕರ ಸಂಖ್ಯೆ ಹೆಚ್ಚಾಗಿದೆಯೇ ಎಂದು ಕೇಳಿದಾಗ, “ನನಗೆ ಆ ಬಗ್ಗೆ ಗೊತ್ತಿಲ್ಲ. ಶಾಸಕರ ವಿಚಾರ ಬಿಟ್ಟು ಬಮೂಲ್ ವಿಚಾರ ಏನಾದರೂ ಇದ್ದರೆ ಕೇಳಿ, ಪ್ರತಿಕ್ರಿಯೆ ನೀಡುವೆ’ ಎಂದರು.

ಪಕ್ಷದಿಂದ ಕೆಎಂಎಫ್ ಚುನಾವಣೆ ಅಭ್ಯರ್ಥಿ ಆಯ್ಕೆ

ಮಾರ್ಚ್ 6 ರಂದು ಕೆಎಂಎಫ್ ಚುನಾವಣೆ ನಡೆಯಲಿದೆಯೇ ಎಂದು ಕೇಳಿದಾಗ, “ಚುನಾವಣೆ ಯಾವಾಗ ಮಾಡಬೇಕು ಎಂದು ಅಧಿಕಾರಿಗಳು ತೀರ್ಮಾನ ಮಾಡುತ್ತಾರೆ. ಆಗ ಪಕ್ಷ ತೀರ್ಮಾನ ಮಾಡುವ ವ್ಯಕ್ತಿಯೇ ಸ್ಪರ್ಧೆ ಮಾಡಲಿದ್ದಾರೆ” ಎಂದರು.

ನೀವು ಕೆಎಂಎಫ್ ಚುನಾವಣೆ ಆಕಾಂಕ್ಷಿ ಎಂದಾಗ, “ನಾನು ಯಾವುದಕ್ಕೂ ಆಕಾಂಕ್ಷಿ ಅಲ್ಲ” ಎಂದರು.

ರಾಜ್ಯಸಭೆಗೆ ಹೋಗುವ ಪ್ರಯತ್ನ ಇದೆಯೇ ಎಂದಾಗ, “ಇಲ್ಲ, ಅದರ ಬಗ್ಗೆ ನನಗೆ ಗೊತ್ತಿಲ್ಲ. ನಾನು ರಾಜಕೀಯ ಪಂಡಿತನಲ್ಲ” ಎಂದರು.

ನನ್ನ ಪರವಾಗಿ ಯಾರು ದೆಹಲಿಗೆ ಹೋಗುವುದು ಬೇಡ ಎಂದು ಡಿಸಿಎಂ ಅವರು ಹೇಳಿರುವ ಬಗ್ಗೆ ಕೇಳಿದಾಗ, “ನಾನು ಶಿವಕುಮಾರ್ ಅವರನ್ನು ಭೇಟಿ ಮಾಡಿಲ್ಲ. ಹೀಗಾಗಿ ಈ ವಿಚಾರ ನನಗೆ ಗೊತ್ತಿಲ್ಲ” ಎಂದರು.

ಕೊಟ್ಟ ಗ್ಯಾರಂಟಿ ವಾಗ್ದಾನ ಉಳಿಸಿಕೊಳ್ಳಬೇಕು

ಗ್ಯಾರಂಟಿ ಯೋಜನೆಗಳಿಗೆ 1.20 ಲಕ್ಷ ಕೋಟಿ ಖರ್ಚಾಗಿದೆ ಎಂದು ಕೇಳಿದಾಗ, “ಗ್ಯಾರಂಟಿಯು ರಾಜ್ಯದ ಜನತೆಗೆ ಕೊಟ್ಟ ನಮ್ಮ ವಾಗ್ದಾನ. ನಾವು ಅದರಂತೆ ನಡೆಯಬೇಕು. ಪಕ್ಷದ ಅಧ್ಯಕ್ಷರು, ಸಿಎಂ ಸೇರಿದಂತೆ ಚುನಾವಣೆ ಎದುರಿಸಿದ ಎಲ್ಲರೂ ಗ್ಯಾರಂಟಿ ನೀಡುವುದಾಗಿ ಹೇಳಿದ್ದಾರೆ. ಅದನ್ನು ಉಳಿಸಿಕೊಳ್ಳುವ ಕೆಲಸ ಮಾಡಬೇಕು” ಎಂದರು.

ಗ್ಯಾರಂಟಿಗಳು ಹೊರೆ ಎಂಬ ಶಿವಕುಮಾರ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಹೊರೆಯಾದರೂ ಆಗಲಿ, ಬೇರೆಯಾದರೂ ಆಗಲಿ. ಮಾತು ಕೊಡುವ ಮುನ್ನ ಚಿಂತನೆ ಮಾಡಬೇಕಿತ್ತು. ಮಾತು ಕೊಟ್ಟಾಗಿದೆ. ಅದರಂತೆ ನಡೆಯಬೇಕು. ಐದು ವರ್ಷಗಳ ಕಾಲ ಎಷ್ಟೇ ಕಷ್ಟ ಆದರೂ ಗ್ಯಾರಂಟಿಗಳನ್ನು ರಾಜ್ಯದ ಜನತೆಗೆ ಕೊಡಬೇಕು. ಅದು ನಮ್ಮ ನಂಬಿಕೆ” ಎಂದು ತಿಳಿಸಿದರು.

ಸಿರಿವಂತರು ಗ್ಯಾರಂಟಿ ಯೋಜನೆ ತೆಗೆದುಕೊಳ್ಳುವುದು ಬೇಡ ಎಂಬ ಹೇಳಿಕೆ ಬಗ್ಗೆ ಕೇಳಿದಾಗ, “ಸಿರಿವಂತರು ಇದನ್ನು ಪಡೆಯುತ್ತಿದ್ದರೆ ಅದು ತಪ್ಪು. ಬಡವರಿಗಾಗಿ ಗ್ಯಾರಂಟಿ ಯೋಜನೆ ತರಲಾಗಿದೆ. ಈ ಯೋಜನೆ ಎಲ್ಲರೂ ಬಳಸುತ್ತಿರುವ ಬಗ್ಗೆ ಕೆಲವರು ಮಾತನಾಡಿರಬಹುದು. ನಾವು ಕೊಟ್ಟಿರುವ ವಾಗ್ದಾನವನ್ನು ಅನುಷ್ಠಾನ ಮಾಡಲಾಗಿದ್ದು, ಇದರಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ. ಹಿಂದೆ ಸರಿದರೆ ಮಾತಿಗೆ ತಪ್ಪಿದಂತೆ ಆಗುತ್ತದೆ” ಎಂದರು.

Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ಪಾದಚಾರಿ ಮಾರ್ಗಕ್ಕೆ ಹೊಸ ನೀತಿ: ಮುಖ್ಯರಸ್ತೆ, ಉಪ ಮುಖ್ಯರಸ್ತೆಗಳಲ್ಲಿ ಬೀದಿ ವ್ಯಾಪಾರಕ್ಕೆ ಅವಕಾಶವಿಲ್ಲ

20/03/2026 7:48 PM2 Mins Read

ಬೆಂಗಳೂರಲ್ಲಿ ವಾರಾನುಗಟ್ಟಲೆ ರಸ್ತೆಯಲ್ಲಿ ನಿಲ್ಲಿಸಲಾದ ಹಳೆ ವಾಹನಗಳನ್ನು ಡಂಪ್: ಡಿಸಿಎಂ ಡಿ.ಕೆ ಶಿವಕುಮಾರ್

20/03/2026 7:47 PM1 Min Read

ಬೆಂಗಳೂರಲ್ಲಿ ಅನಧಿಕೃತ ಪ್ರತಿ ಫ್ಲೆಕ್ಸ್ ಗೆ 50,000ದಿಂದ 1 ಲಕ್ಷ ದಂಡ ವಿಧಿಸಲು ಚಿಂತನೆ: ಡಿಸಿಎಂ ಡಿ.ಕೆ ಶಿವಕುಮಾರ್

20/03/2026 7:44 PM1 Min Read
Recent News

‘ಚೆಕ್ ಬೌನ್ಸ್’ ಆದ ತಕ್ಷಣ ಅದನ್ನು ‘ವಂಚನೆ’ ಎನ್ನಲಾಗದು: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

20/03/2026 8:00 PM

BREAKING : ‘ವಾಕರ್ ಟೆಕ್ಸಾಸ್ ರೇಂಜರ್’ ಖ್ಯಾತಿಯ ಹಾಲಿವುಡ್ ಪ್ರಸಿದ್ಧ ನಟ ‘ಚಕ್ ನಾರ್ರಿಸ್’ ಇನ್ನಿಲ್ಲ

20/03/2026 7:59 PM

BREAKING: ಹಾಲಿವುಡ್ ಹಿರಿಯ ‘ಆಕ್ಷನ್ ಸ್ಟಾರ್ ಚಕ್ ನಾರ್ರಿಸ್’ ಇನ್ನಿಲ್ಲ | Walker Texas Ranger

20/03/2026 7:56 PM

ಸಾಲ ಮರುಪಾವತಿಗೆ ಕೇಳುವುದು ಆತ್ಮಹತ್ಯೆಗೆ ಪ್ರೇರಣೆಯಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

20/03/2026 7:54 PM
State News
KARNATAKA

ಬೆಂಗಳೂರಲ್ಲಿ ಪಾದಚಾರಿ ಮಾರ್ಗಕ್ಕೆ ಹೊಸ ನೀತಿ: ಮುಖ್ಯರಸ್ತೆ, ಉಪ ಮುಖ್ಯರಸ್ತೆಗಳಲ್ಲಿ ಬೀದಿ ವ್ಯಾಪಾರಕ್ಕೆ ಅವಕಾಶವಿಲ್ಲ

By kannadanewsnow0920/03/2026 7:48 PM KARNATAKA 2 Mins Read

ಬೆಂಗಳೂರು : “ಬೆಂಗಳೂರು ನಗರದಲ್ಲಿ ಪಾದಚಾರಿ ಮಾರ್ಗಕ್ಕೆ ಹೊಸ ನೀತಿ ರೂಪಿಸಲು ತೀರ್ಮಾನಿಸಲಾಗಿದ್ದು, ಮುಖ್ಯರಸ್ತೆ, ಉಪ ಮುಖ್ಯರಸ್ತೆಗಳಲ್ಲಿ ಬೀದಿ ವ್ಯಾಪಾರಕ್ಕೆ ಅವಕಾಶ…

ಬೆಂಗಳೂರಲ್ಲಿ ವಾರಾನುಗಟ್ಟಲೆ ರಸ್ತೆಯಲ್ಲಿ ನಿಲ್ಲಿಸಲಾದ ಹಳೆ ವಾಹನಗಳನ್ನು ಡಂಪ್: ಡಿಸಿಎಂ ಡಿ.ಕೆ ಶಿವಕುಮಾರ್

20/03/2026 7:47 PM

ಬೆಂಗಳೂರಲ್ಲಿ ಅನಧಿಕೃತ ಪ್ರತಿ ಫ್ಲೆಕ್ಸ್ ಗೆ 50,000ದಿಂದ 1 ಲಕ್ಷ ದಂಡ ವಿಧಿಸಲು ಚಿಂತನೆ: ಡಿಸಿಎಂ ಡಿ.ಕೆ ಶಿವಕುಮಾರ್

20/03/2026 7:44 PM

ರೈಲ್ವೆ ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಂಚಾರ ಭಾಗಶಃ ರದ್ದು, ನಿಯಂತ್ರಣ

20/03/2026 6:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.