ಗದಗ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಕಿತ್ತೂರು ರಾಣಿ ಚೆನ್ನಮ್ಮ ರಸ್ತೆ ಸಾರಿಗೆ ಸಂಸ್ಥೆ ಎಂದು ನಾಮಕರಣ ಮಾಡಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಚಿವ ರಾಮಲಿಂಗಾ ರೆಡ್ಡಿ ಅವರಲ್ಲಿ ವಿನಂತಿಸಿದರು.
ರಾಮಲಿಂಗಾ ರೆಡ್ಡಿ ಅವರು ಸಾರಿಗೆ ಇಲಾಖೆಯ ಸಾರಥ್ಯ ವಹಿಸಿಕೊಂಡ ನಂತರ ಇಲಾಖೆಯಲ್ಲಿ ಸಾಕಷ್ಟು ಹೊಸತನವನ್ನು ತಂದಿದ್ದಾರೆ. ರಾಜ್ಯಾದ್ಯಂತ 7,800 ಹೊಸ ಬಸ್ ಗಳನ್ನು ಒದಗಿಸಿದ್ದಾರೆ. ಜನರ ಪ್ರಯಾಣ ಸುಖಕರವಾಗಿರುವಂತೆ ನೋಡಿಕೊಳ್ಳಲು ಏನು ಬೇಕೋ ಅದನ್ನೆಲ್ಲ ಮಾಡುತ್ತಿದ್ದಾರೆ. ಶಕ್ತಿ ಯೋಜನೆ ಇಷ್ಟೊಂದು ದೊಡ್ಡ ಮಟ್ಟದಲ್ಲಿ ಯಶಸ್ಸು ಕಾಣಲು ರಾಮಲಿಂಗಾ ರಡ್ಡಿ ಅವರ ಶ್ರಮ ಕಾರಣ ಎಂದ ಸಚಿವರು, ನಮ್ಮ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರ ಹೆಚ್ಚು ಬಡವರಿರುವ ಕ್ಷೇತ್ರ, ಕಾರಿನಲ್ಲಿ ಓಡಾಡುವವರ ಸಂಖ್ಯೆ ತೀರಾ ಕಡಿಮೆ ಇದೆ. ಸುವರ್ಣ ವಿಧಾನಸೌಧ ನಿರ್ಮಾಣ ಸೇರಿದಂತೆ ಎಲ್ಲ ಅಭಿವೃದ್ಧಿ ಕಾರ್ಯಗಳಿಗೆ ತಮ್ಮ ಜೀವನಾಧಾರವಾಗಿದ್ದ ಜಮೀನನ್ನೇ ಬಿಟ್ಟುಕೊಟ್ಟ ತ್ಯಾಗಿಗಳು. ಆದರೆ ಬಹಳಷ್ಟು ಹಳ್ಳಿಗಳಿಗೆ ಬಸ್ ಗಳ ಕೊರತೆ ಇದೆ, ಆದಷ್ಟು ಗ್ರಾಮೀಣ ಪ್ರದೇಶಕ್ಕೆ ಬೇಡಿಕೆ ಇರುವಷ್ಟು ಹೊಸ ಬಸ್ ಗಳನ್ನು ನೀಡುವ ಮೂಲಕ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ವಿನಂತಿಸಿದರು.
ಮೊದಲ ದಿನದ ದ್ವಿತೀಯ ಪಿಯುಸಿ ಪರೀಕ್ಷೆ-1 ಯಶಸ್ವಿಯಾಗಿ ಮುಕ್ತಾಯ: 4.93 ಲಕ್ಷ ವಿದ್ಯಾರ್ಥಿಗಳು ಹಾಜರ್








