ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಎಲ್ಲ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ (ಮಾ.1) ಲಿಖಿತ ಪರೀಕ್ಷೆ ನಡೆಸಲಿದ್ದು ಸಕಲ ತಯಾರಿ ಮಾಡಿಕೊಂಡಿದೆ.
ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕಿತ್ತೂರು ರಾಣಿ ಚನ್ನಮ್ಮ, ಏಕಲವ್ಯ ಮಾದರಿ ಶಾಲೆ, ಅಟಲ್ ಬಿಹಾರಿ ವಾಜಪೇಯಿ ಶಾಲೆ, ಇಂದಿರಾಗಾಂಧಿ, ಅಂಬೇಡ್ಕರ್, ಮಾಸ್ತಿ ವೆಂಕಟೇಶ ಅಯ್ಯಂಗಾರ್ ಇತ್ಯಾದಿ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ನೂರು ಅಂಕಗಳಿಗೆ ಪರೀಕ್ಷೆ ನಡೆಯಲಿದೆ ಎಂದು ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರು ತಿಳಿಸಿದ್ದಾರೆ.
ಒಟ್ಟು 2.31 ಲಕ್ಷ ಮಂದಿ ಪರೀಕ್ಷೆ ಬರೆಯಲು ಅರ್ಜಿ ಸಲ್ಲಿಸಿದ್ದು, 629 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಬಹುತೇಕ ಎಲ್ಲ ತಾಲೂಕು ಕೇಂದ್ರಗಳಲ್ಲಿ ಕೂಡ ಪರೀಕ್ಷೆ ನಡೆಯಲಿದೆ. ಐದನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ಪರೀಕ್ಷೆ ಬರೆಯಲು ಅರ್ಹತೆ ಪಡೆದಿದ್ದಾರೆ ಎಂದು ಅವರು ವಿವರಿಸಿದರು.
BREAKING: ಇರಾನ್-ಇಸ್ರೇಲ್ ಸಂಘರ್ಷ: ಇರಾನ್ ರಕ್ಷಣಾ ಸಚಿವ, ಕ್ರಾಂತಿಕಾರಿ ಗಾರ್ಡ್ ಕಮಾಂಡರ್ ಸಾವು








