ಧಾರವಾಡ : ಸರ್ಕಾರಿ ಅಧಿಕಾರಿ, ನೌಕರರಿಗೆ 2026ನೇ ಸಾಲಿನ ರಾಜ್ಯ ಸರ್ಕಾರದ ಸರ್ವೋತ್ತಮ ಸೇವಾ ಪ್ರಶಸ್ತಿಗಾಗಿ ಆಯ್ಕೆ, ನಾಮನಿರ್ದೇಶನ ಪ್ರಕ್ರಿಯೆಯನ್ನು ಕೈಗೊಳ್ಳಲು ರಾಜ್ಯ ಸರ್ಕಾರ ಆದೇಶಿಸಿದ್ದು, ಮಾರ್ಚ 4, 2026ರ ಸಂಜೆ 5 ಗಂಟೆಯೊಳಗಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲಿ ಆಸಕ್ತರು ಅರ್ಜಿ ಸಲ್ಲಿಸಲು ಜಿಲ್ಲಾಧಿಕಾರಿ ಸ್ನೇಹಲ್ .ಆರ್ ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಪ್ರಸಕ್ತ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಸಲ್ಲಿಕೆ ಆಗುವ ಅರ್ಜಿಗಳ ಪರಿಶೀಲನೆ ಮತ್ತು ನಿರ್ವಹಣೆಗಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರನ್ನು ಜಿಲ್ಲಾ ನೋಡಲ್ ಅಧಿಕಾರಿಯಾಗಿ ನೇಮಿಸಿ ಅವರು ಆದೇಶಿಸಿದ್ದಾರೆ.
ಧಾರವಾಡ ಜಿಲ್ಲೆಯ ವಿವಿಧ ಇಲಾಖೆಗಳ ಅರ್ಹ ಅಧಿಕಾರಿ, ನೌಕರರಿಂದ ಅರ್ಜಿಯನ್ನು ಅಹ್ವಾನಿಸಲಾಗಿದೆ. ಮಾರ್ಚ 4, 2026 ಒಳಗಾಗಿ ತಮ್ಮ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ, ದ್ವಿಪ್ರತಿಯಲ್ಲಿ ಜಿಲ್ಲಾ ನೋಡಲ್ ಅಧಿಕಾರಿಗಳಿಗೆ ಸಲ್ಲಿಸಿ, ಸ್ವೀಕೃತಿ ಪಡೆದುಕೊಳ್ಳಬೇಕು. ನಿಗದಿಪಡಿಸಿದ ದಿನಾಂಕದ ನಂತರದಲ್ಲಿ ಅರ್ಜಿಗಳನ್ನು ಸ್ವೀಕರಿಸಲು ಅವಕಾಶವಿರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಡಾ. ತೇಜಸ್ವಿನಿ ನಾರಾಯಣಕರ ಉಪ ನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆ ಧಾರವಾಡ ಇವರನ್ನು ಸಂಪರ್ಕಿಸಲು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






