ಬೆಂಗಳೂರು: ಇಸ್ರೇಲ್ ಹಾಗೂ ಇರಾನ್ ನಡುವೆ ಯುದ್ಧದಿಂದಾಗಿ ದುಬೈ ವಿಮಾನ ನಿಲ್ದಾಣವನ್ನು ಬಂದ್ ಮಾಡಲಾಗಿದೆ. ಹೀಗಾಗಿ ದುಬೈಗೆ ತೆರಳಿದ್ದಂತ ಅನೇಕ ಕನ್ನಡಗರು ವಿಮಾನ ನಿಲ್ದಾಣದಲ್ಲೇ ಸಿಲುಕಿದ್ದರು. ಇಂತಹ ಅವರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಎಲ್ಲಾ ವ್ಯವಸ್ಥೆ ಮಾಡಲಾಗುವುದು ಅಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಅವರು, ಇಸ್ರೇಲ್ – ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿಯಿಂದಾಗಿ ದುಬೈನಲ್ಲಿ ಸಿಲುಕಿರುವ ಕನ್ನಡಿಗರ ಜೊತೆ ಮಾತನಾಡಿ, ಧೈರ್ಯ ತುಂಬಿದ್ದೇನೆ ಎಂದಿದ್ದಾರೆ.
ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ದುಬೈ ಸೇರಿದಂತೆ ಯುದ್ಧಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ಸದ್ಯದ ಪರಿಸ್ಥಿತಿಯ ಕುರಿತು ಮಾಹಿತಿ ಪಡೆದು, ಬಳಿಕ ಅವರನ್ನು ತವರಿಗೆ ವಾಪಸ್ ಕರೆ ತರುವ ಸಂಬಂಧ ವಿದೇಶಾಂಗ ಇಲಾಖೆ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿರುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ.
ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಇರುವ ಕನ್ನಡಿಗರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆದಿರುವುದು ತುಸು ಸಮಾಧಾನಕರ ವಿಚಾರ. ಯಾರೊಬ್ಬರೂ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಪ್ರತಿಯೊಬ್ಬರನ್ನೂ ಸುರಕ್ಷಿತವಾಗಿ ಕರೆತರುವ ನಿಟ್ಟಿನಲ್ಲಿ ನಮ್ಮ ಪ್ರಯತ್ನ ನಿರಂತರವಾಗಿರಲಿದೆ ಎಂಬುದಾಗಿ ಭರವಸೆ ನೀಡಿದ್ದಾರೆ.
ಇಸ್ರೇಲ್ – ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿಯಿಂದಾಗಿ ದುಬೈನಲ್ಲಿ ಸಿಲುಕಿರುವ ಕನ್ನಡಿಗರ ಜೊತೆ ಮಾತನಾಡಿ, ಧೈರ್ಯ ತುಂಬಿದ್ದೇನೆ.
ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ದುಬೈ ಸೇರಿದಂತೆ ಯುದ್ಧಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ಸದ್ಯದ ಪರಿಸ್ಥಿತಿಯ ಕುರಿತು ಮಾಹಿತಿ ಪಡೆದು, ಬಳಿಕ ಅವರನ್ನು ತವರಿಗೆ ವಾಪಸ್ ಕರೆ ತರುವ ಸಂಬಂಧ…
— Siddaramaiah (@siddaramaiah) March 1, 2026
ರಾಜ್ಯದ ಜನತೆಗೆ ಸಿಹಿ ಸುದ್ದಿ: ಸದ್ಯಕ್ಕಿಲ್ಲ ವಿದ್ಯುತ್ ದರ ಏರಿಕೆ; ಸಿಎಂ ಸ್ಪಷ್ಟನೆ
ಉಡುಪಿಯಲ್ಲಿ ಪೊಲೀಸ್ ಮ್ಯಾರಥಾನ್ ವೇಳೆ ಹೃದಯಾಘಾತ; ಕುಂದಾಪುರ ಗ್ರಾಮಾಂತರ ಠಾಣೆ ಎಸ್‌ಐ ದಾರುಣ ಸಾವು








