ಬೆಂಗಳೂರು: ಇಸ್ರೇಲ್-ಇರಾನ್ ಯುದ್ಧದ ಭೀತಿಯಿಂದಾಗಿ ದುಬೈ ಸೇರಿದಂತೆ ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಮಾಹಿತಿ ನೀಡಿದ್ದಾರೆ.
ವಿಧಾನ ಪರಿಷತ್ ಶಾಸಕ ದಿನೇಶ್ ಗೂಳಿಗೌಡ ಅವರು ಈ ಕುರಿತು ಬರೆದಿದ್ದ ಪತ್ರಕ್ಕೆ ತಕ್ಷಣವೇ ಸ್ಪಂದಿಸಿದ ಶಾಲಿನಿ ರಜನೀಶ್ ಅವರು, ವಿದೇಶದಲ್ಲಿರುವ ಕನ್ನಡಿಗರ ಸುರಕ್ಷತೆಗಾಗಿ ಸರ್ಕಾರವು ಈಗಾಗಲೇ ಕಾರ್ಯಪ್ರವೃತ್ತವಾಗಿದೆ ಎಂದು ತಿಳಿಸಿದ್ದಾರೆ.
“ಸದ್ಯದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ವಿದೇಶದಲ್ಲಿ ಸಿಲುಕಿರುವ ಕನ್ನಡಿಗರ ಮಾಹಿತಿಯನ್ನು ನಾವು ಸಂಗ್ರಹಿಸುತ್ತಿದ್ದೇವೆ. ಇವರೆಲ್ಲರ ಹೆಸರನ್ನು ನೋಂದಾಯಿಸಲು ಮತ್ತು ಮುಂದಿನ ನೆರವು ಹಾಗೂ ರಕ್ಷಣಾ ಕಾರ್ಯಕ್ಕಾಗಿ ನಾವು ಎಲ್ಲ ಅಗತ್ಯ ವಿವರಗಳನ್ನು (ದೂರವಾಣಿ ಸಂಖ್ಯೆಗಳು ಮತ್ತು ಮಾಹಿತಿ) ಸಂಬಂಧಪಟ್ಟ ಭಾರತೀಯ ರಾಯಭಾರ ಕಚೇರಿಗಳಿಗೆ ನೀಡುತ್ತಿದ್ದೇವೆ” ಎಂದು ಅವರು ತಿಳಿಸಿದ್ದಾರೆ.
ರಾಜ್ಯದ ಜನತೆಗೆ ಸಿಹಿ ಸುದ್ದಿ: ಸದ್ಯಕ್ಕಿಲ್ಲ ವಿದ್ಯುತ್ ದರ ಏರಿಕೆ; ಸಿಎಂ ಸ್ಪಷ್ಟನೆ








