ಶಿವಮೊಗ್ಗ: ಕಳೆದ ಕೆಲ ದಿನಗಳ ಹಿಂದೆ ಅನ್ಯಕೋಮಿನ ಅಪ್ರಾಪ್ತ ಬಾಲಕರು ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಸಂಕೇತ್ ನನ್ನು ಭೀಕರವಾಗಿ ಹಲ್ಲೆ ಮಾಡಿ ಕೊಲೆ ಮಾಡಿದ್ದರು. ಇಂತಹ ಬಾಲಕನ ಕುಟುಂಬಕ್ಕೆ ಸರ್ಕಾರ 15 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿತ್ತು. ಅದರಂತೆ ಇಂದು ಸಿಎಂ ಸಿದ್ಧರಾಮಯ್ಯ ಹಾಗೂ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮೃತ ಸಂಕೇತ್ ಕುಟುಂಬಕ್ಕೆ 15 ಲಕ್ಷ ಪರಿಹಾರದ ಚೆಕ್ ಹಸ್ತಾಂತರಿಸಿದರು.
ಕಳೆದ ಕೆಲ ದಿನಗಳ ಹಿಂದೆ ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಸಂಕೇತ್ ಸ್ನೇಹಿತನ ಜೊತೆಗೆ ಅನ್ಯಕೋಮಿನ ಅಪ್ರಾಪ್ತ ಬಾಲಕರು ಜಗಳ ಮಾಡುತ್ತಿದ್ದರು. ಈ ವೇಳೆ ಮಧ್ಯ ಪ್ರವೇಶಿಸಿ ಸಂಕೇತನಿಗೆ ಆ ಅಪ್ರಾಪ್ತ ಬಾಲಕರು ಹಲ್ಲೆ ಮಾಡಿ ಕೊಲೆ ಮಾಡಿದ್ದರು. ಆ ಸಂಬಂಧ ಪೊಲೀಸರು ಐವರು ಅಪ್ರಾಪ್ತ ಬಾಲಕರನ್ನು ಅರೆಸ್ಟ್ ಮಾಡಿದ್ದರು. ಈ ಘಟನೆಯ ಬಳಿಕ ಮೃತನ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 10 ಲಕ್ಷ ರೂಪಾಯಿ ಹಾಗೂ ಶಿಕ್ಷಣ ಇಲಾಖೆಯಿಂದ 5 ಲಕ್ಷ ರೂಪಾಯಿ ಪರಿಹಾರ ಸೇರಿ ಒಟ್ಟು 15 ಲಕ್ಷ ಪರಿಹಾರ ನೀಡಲಾಗುತ್ತದೆ ಎಂಬುದಾಗಿ ಸರ್ಕಾರ ಘೋಷಿಸಿತ್ತು.
ಇಂದು ರಾಜ್ಯ ಸರ್ಕಾರ ಘೋಷಿಸಿದಂತೆ ಶಿವಮೊಗ್ಗದ ಸೂಳೆಬೈಲು ಘಟನೆಯಲ್ಲಿ ಮೃತ ಬಾಲಕ ಸಂಕೇತ್ ಕುಟುಂಬಕ್ಕೆ ಸಿಎಂ ಸಿದ್ಧರಾಮಯ್ಯ ಹಾಗೂ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿಯಾದರು. ಕುಟುಂಬಸ್ಥರಿಗೆ ಸಾಂತ್ವಾನ ಹೇಳಿ ಧೈರ್ಯ ತುಂಬಿದಂತ ಅವರು, ರಾಜ್ಯ ಸರ್ಕಾರದಿಂದ ಮೃತ ಸಂಕೇತ್ ಗೆ ಘೋಷಣೆ ಮಾಡಿದಂತೆ 15 ಲಕ್ಷ ರೂ. ಪರಿಹಾರ ಹಸ್ತಾಂತರ ಮಾಡಿದರು.
ಘಟನೆಯ ಹಿನ್ನೆಲೆ ಏನು?
ಶಿವಮೊಗ್ಗದಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆ ವಿಕೋಪಕ್ಕೆ ಹೋಗಿ, ವಿದ್ಯಾರ್ಥಿ ಸಂಕೇತ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಲಾಗಿತ್ತು. ಈ ಘಟನೆಯು ಸ್ಥಳೀಯರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಕಾನೂನು ಸುವ್ಯವಸ್ಥೆಯ ಬಗ್ಗೆ ಪ್ರಶ್ನೆಗಳು ಎದ್ದಿದ್ದವು.ನಗರದಲ್ಲಿ 10ನೇ ತರಗತಿ ವಿದ್ಯಾರ್ಥಿ ಸಂಕೇತ್ ಕೊಲೆ ಪ್ರಕರಣ ರಾಜ್ಯಾದ್ಯಂತ ಸಂಚಲನ ಮೂಡಿಸಿತ್ತು.
ಅರಬ್ ರಾಷ್ಟ್ರಗಳ ಕನ್ನಡಿಗರ ರಕ್ಷಣೆಗೆ CS ಶಾಲಿನಿ ರಜನೀಶ್ ಭರವಸೆ: ಶಾಸಕ ದಿನೇಶ್ ಗೂಳಿಗೌಡ ಮನವಿಗೆ ಸ್ಪಂದನೆ
ರಾಜ್ಯದ ಜನತೆಗೆ ಸಿಹಿ ಸುದ್ದಿ: ಸದ್ಯಕ್ಕಿಲ್ಲ ವಿದ್ಯುತ್ ದರ ಏರಿಕೆ; ಸಿಎಂ ಸ್ಪಷ್ಟನೆ








