Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇರಾನ್ ಮೇಲೆ ಇಸ್ರೇಲ್ ‘ಮಹಾ ದಂಡಯಾತ್ರೆ’: ಜೆರುಸಲೆಮ್ ದಾಳಿಗೆ ಪ್ರತಿಯಾಗಿ ಭೀಕರ ವೈಮಾನಿಕ ದಾಳಿ!

02/03/2026 6:59 AM

Weather Update : ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ಈ ವರ್ಷ ವಾಡಿಕೆಗಿಂತ ಅಧಿಕ ಬಿಸಿಲು, ಹೆಚ್ಚು ಉಷ್ಣಾಂಶ !

02/03/2026 6:54 AM

ನಾಳೆ ಚಂದ್ರಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳ ದರ್ಶನ ಸಮಯದಲ್ಲಿ ಬದಲಾವಣೆ – ಭಕ್ತರಿಗೆ ಪ್ರಮುಖ ಸೂಚನೆ

02/03/2026 6:41 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Weather Update : ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ಈ ವರ್ಷ ವಾಡಿಕೆಗಿಂತ ಅಧಿಕ ಬಿಸಿಲು, ಹೆಚ್ಚು ಉಷ್ಣಾಂಶ !
KARNATAKA

Weather Update : ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ಈ ವರ್ಷ ವಾಡಿಕೆಗಿಂತ ಅಧಿಕ ಬಿಸಿಲು, ಹೆಚ್ಚು ಉಷ್ಣಾಂಶ !

By kannadanewsnow5702/03/2026 6:54 AM

ಬೆಂಗಳೂರು : ಈ ಬಾರಿಯ ಬೇಸಿಗೆಯು ಸಾಮಾನ್ಯಕ್ಕಿಂತ ಹೆಚ್ಚು ಕಠಿಣವಾಗಿರಲಿದ್ದು, ತೀವ್ರವಾದ ಬಿಸಿಗಾಳಿ ಬೀಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಈ ಕುರಿತು ಇಲಾಖೆಯ ಮಹಾನಿರ್ದೇಶಕರಾದ ಮೃತ್ಯುಂಜಯ ಮಹಾಪಾತ್ರ ಅವರು ಮಾಹಿತಿ ನೀಡಿದ್ದು, ಬೇಸಿಗೆಯ ಮೊದಲ ತಿಂಗಳಾದ ಮಾರ್ಚ್‌ನಲ್ಲಿಯೇ ದೇಶದ ಬಹುತೇಕ ಭಾಗಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಿರಲಿದೆ.ಮಾರ್ಚ್ ಮತ್ತು ಮೇ ತಿಂಗಳ ಅವಧಿಯಲ್ಲಿ ವಾಡಿಕೆಗಿಂತ ಅತಿ ಹೆಚ್ಚಿನ ಉಷ್ಣಾಂಶ ದಾಖಲಾಗುವ ಸಾಧ್ಯತೆಯಿದೆ ಎಂದು ಶನಿವಾರ ಬಿಡುಗಡೆ ಮಾಡಿದ ಮುನ್ಸೂಚನೆಯಲ್ಲಿ ತಿಳಿಸಲಾಗಿದೆ.

ಕೇವಲ ತಾಪಮಾನ ಏರಿಕೆ ಮಾತ್ರವಲ್ಲದೆ, ಈ ವರ್ಷ ಬಿಸಿಗಾಳಿಯ (Heatwave) ಪ್ರಭಾವವೂ ಹೆಚ್ಚಿರಲಿದೆ. ಕಳೆದ ಫೆಬ್ರವರಿ ತಿಂಗಳಿನಲ್ಲಿ ಕನಿಷ್ಠ ಮತ್ತು ಗರಿಷ್ಠ ತಾಪಮಾನಗಳೆರಡೂ ವಾಡಿಕೆಗಿಂತ ಹೆಚ್ಚಾಗಿದ್ದವು. ಇದು 1901 ರಿಂದೀಚೆಗೆ ದಾಖಲಾದ ಅಂಕಿಅಂಶಗಳ ಆಧಾರದ ಮೇಲೆ ಗಮನಾರ್ಹ ಏರಿಕೆಯಾಗಿದೆ ಎಂದು ಇಲಾಖೆ ತಿಳಿಸಿದೆ.

ಸಾರ್ವಜನಿಕರು ಬಿಸಿಲಿನ ತಾಪಮಾನದಿಂದ ಹೇಗೆ ರಕ್ಷಿಸಿಕೊಳ್ಳಬೇಕು ಮತ್ತು ಬಿಸಿಲಿನ ಬೇಗೆಯಿಂದ ಮನುಷ್ಯ ಶಾಖಾಘಾತಕ್ಕೊಳಗಾದಾಗ ಕೈಗೊಳ್ಳಬೇಕಾದ ಕ್ರಮಗಳ ಇಲ್ಲಿದೆ ಸಂಪೂರ್ಣ ಮಾಹಿತಿ

ಏನು ಮಾಡಬೇಕು?

ಸಡಿಲವಾದ, ತೆಳು ಬಣ್ಣದ ಹತ್ತಿಯ ಬಟ್ಟೆ ಧರಿಸಬೇಕು. ಕೈಗೆಟುಕುವಂತೆ ಕುಡಿಯುವ ನೀರನ್ನು ಇಟ್ಟುಕೊಳ್ಳಿ. ಆಗಾಗ್ಗೆ ನಿಧಾನವಾಗಿ ಧಾರಳವಾಗಿ ಉಪ್ಪು, ಸಕ್ಕರೆ ಮಿಶ್ರಿತ ನೀರನ್ನು ಕುಡಿಯಿರಿ. ಹಣ್ಣಿನ ರಸ, ಪಾನಕಗಳನ್ನು ಕುಡಿಯಿರಿ. ಹತ್ತಿಯ ನುಣುಪಾದ ಬಟ್ಟೆ, ಟಿಶ್ಯೂ ಕರವಸ್ತçದಿಂದ ಬೆವರನ್ನು ಒರೆಸಿರಿ. ನೀರು, ಮಜ್ಜಿಗೆ, ಎಳೆನೀರು ಕುಡಿಯಬಹುದು.

ಬೆಚ್ಚಗಿನ, ಮಸಾಲೆ ರಹಿತ, ಶುದ್ದ ಸಾತ್ವಿಕ ಆಹಾರ ಸೇವಿಸಬೇಕು. ಗಾಳಿಯಾಡುವಂತಹ ಪಾದರಕ್ಷೆ ಧರಿಸಿರಿ. ಮನೆಯಿಂದ ಹೊರಗಡೆ ಹೋಗುವಾಗ ಜೊತೆಯಲ್ಲಿ ತಪ್ಪದೇ ಶುದ್ದ ಕುಡಿಯುವ ನೀರನ್ನು ತೆಗೆದುಕೊಂಡು ಹೋಗಬೇಕು.

ವ್ಯಕ್ತಿ ತೊದಲು ಮಾತು ಅಥವಾ ಅರ್ಥರಹಿತವಾಗಿ ಬಡಬಡಿಸಿದ್ದಲ್ಲಿ, ಕೂಡಲೇ ನೆರಳಿನ ಪ್ರದೇಶಕ್ಕೆ ಸ್ಥಳಾಂತರಿಸಿರಿ. ಕೆಳಗೆ ಮಲಗಿಸಿ, ಕಾಲುಗಳನ್ನು ಮೇಲಕೆತ್ತಿ ಆರೈಕೆ ಮಾಡಿ. ಆತ/ಆಕೆಯ ಹಣೆ, ಕತ್ತು, ಪಾದ ತೊಡೆಯ ಸಂದುಗಳನ್ನು ಒದ್ದೆ ಬಟ್ಟೆಯಿಂದ ಒರೆಸಿರಿ (ತಂಪಾದ ಅಥವಾ ಐಸ್ ನೀರಿನಿಂದ ಒರೆಸಬೇಡಿ) ಚರ್ಮ ಕೆಂಪಾದರೆ, ಬೆವರು ಕಡಿಮೆಯಾದರೆ, ದೇಹದ ಉಷ್ಣತೆ ಜಾಸ್ತಿಯಾದರೆ, ದೀರ್ಘವಾದ ತೀರ್ವ ಉಸಿರಾಟವಿದ್ದಲ್ಲಿ ತುರ್ತಾಗಿ ವೈದ್ಯರನ್ನು ಸಂಪರ್ಕಿಸಬೇಕು. ಇಲ್ಲವೇ 104ಕ್ಕೆ ಕರೆ ಮಾಡಬೇಕು.

ಬೇಸಿಗೆಯಲ್ಲಿ ಕಲುಷಿತ ನೀರಿನ ಸೇವನೆಯಿಂದ ಸಂಭಾವ್ಯ ವಾಂತಿ-ಬೇಧಿ ಪ್ರಕರಣಗಳು ಉಂಟಾಗುವ ಹಿನ್ನಲೆಯಲ್ಲಿ ಶುದ್ಧೀಕರಿಸಿದ ನೀರು ಅಥವಾ ನೀರು ಶುದ್ದೀಕರಣ ಘಟಕದ ನೀರನ್ನು ಕುಡಿಯಲು ಬಳಸಬೇಕು.

ಕೈಗಳನ್ನು ಸಾಬೂನು ಮತ್ತು ನೀರಿನಿಂದ 45 ಸೆಕೆಂಡ್ಗಳ ಕಾಲ ತೊಳೆದ ನಂತರ ಆಹಾರ ಸೇವಿಸಬೇಕು. ನೀರಿನ ಸಂಗ್ರಹಣಗಳ ಮೇಲೆ ತಪ್ಪದೇ ಮುಚ್ಚಳ ಮುಚ್ಚಬೇಕು. ಮಲ, ಮೂತ್ರ ವಿಸರ್ಜನೆಗಾಗಿ ಶೌಚಾಲಯ ಬಳಸಬೇಕು. ಸುರಕ್ಷಿತ ಆಹಾರ ಮಾತ್ರ ಸೇವಿಸಿ, ಆದಷ್ಟು ಮನೆಯಲ್ಲಿ ತಯಾರಿಸಿದ ಆಹಾರಕ್ಕೆ ಆದ್ಯತೆ ನೀಡಿ.

ಏನು ಮಾಡಬಾರದು?

ಬಿಗಿಯಾದ, ಗಾಢ ಬಣ್ಣದ, ಸಿಂಥೆಟಿಕ್ ಬಟ್ಟೆ ಧರಿಸಬಾರದು. ಕುಷನ್ಯುಕ್ತ ಕುರ್ಚಿಯಲ್ಲಿ ಕೂಡಬಾರದು. ಸೋಡಾ ಇತ್ಯಾದಿ ಕಾರ್ಬೋನೇಟೆಡ್ ತಂಪು ಪಾನಿಯಗಳನ್ನು ಕುಡಿಯಬೇಡಿ (ಬಾಯಾರಿಕೆಯಾದಾಗÀ ಕಡ್ಡಾಯವಾಗಿ ನೀರು ಕುಡಿಯಬೇಕು). ಬೆವರನ್ನು ಒರೆಸಲು ಒರಟಾದ ಬಟ್ಟೆಯನ್ನು ಉಪಯೋಗಿಸಬೇಡಿ. ಕಾಫಿ, ಟೀ, ಅತಿ ಸಕ್ಕರೆ ಅಂಶವುಳ್ಳ ಪಾನೀಯ ಅತಿಯಾಗಿ ಸೇವಿಸಬಾರದು. ಬಿಸಿಯಾದ ಮಸಾಲೆಯುಕ್ತ ಆಹಾರ ತಿನ್ನಬಾರದು. ಮಾಂಸಹಾರ ಸೇವನೆ ಮತ್ತು ಮಧ್ಯಪಾನ ವರ್ಜಿಸಿಬೇಕು.

ಬಿಗಿಯಾದ ಗಾಳಿಯಾಡದ ಪಾದರಕ್ಷೆ ಅಥವಾ ಶೂ ಧರಿಸಬೇಡಿ. ಉಷ್ಣತೆಯಿಂದ ಸುಸ್ತಾದಾಗ ತುಂಬಾ ತಣ್ಣಗಿನ ಅಥವಾ ಶೀತಲೀಕರಿಸಿದ ನೀರಿನಿಂದ ಒರೆಸಿಕೊಳ್ಳಬೇಡಿ (ಇದರಿಂದ ದೇಹದ ಹೊರಪದರದಲ್ಲಿನ ರಕ್ತನಾಳಗಳು ಸಂಕುಚಿತಗೊAಡು ದೇಹದ ಒಳಗಿನ ಉಷ್ಣತೆ ದೇಹದೊಳಗೆ ಬಂಧಿತವಾಗಿ ಅಂಗಾAಗಗಳು ನಿಷ್ಕಿçಯಗೊಂಡು ಹೆಚ್ಚಿನ ಹಾನಿಯಾಗುವ ಸಂಭವವಿರುತ್ತದೆ).

ಬೇಸಿಗೆಯಲ್ಲಿ ಕಲುಷಿತ ನೀರಿನ ಸೇವನೆಯಿಂದ ಸಂಭಾವ್ಯ ವಾಂತಿ-ಬೇಧಿ ಪ್ರಕರಣಗಳು ಉಂಟಾಗುವ ಹಿನ್ನಲೆಯಲ್ಲಿ ಶುದ್ಧೀಕರಿಸದೇ ಇರುವ ನೀರನ್ನು ಮತ್ತು ಕೆರೆ, ಕುಂಟೆಗಳ ನೀರನ್ನು ನೇರವಾಗಿ ಕುಡಿಯಬಾರದು. ಕೈಗಳನ್ನು ತೊಳೆದುಕೊಳ್ಳದೇ ಆಹಾರವನ್ನು ಸೇವಿಸಬೇಡಿ, ನೀರಿನ ಸಂಗ್ರಹಣಗಳ ಮೇಲೆ ತಪ್ಪದೇ ಮುಚ್ಚಳ ಮುಚ್ಚಬೇಕು. ಬಯಲು ಪ್ರದೇಶಗಳಲ್ಲಿ ಮಲ, ಮೂತ್ರ ವಿಸರ್ಜನೆ ಮಾಡಬಾರದು. ರಸ್ತೆ ಬದಿ ತೆರೆದಿಟ್ಟ ಆಹಾರ ಪದಾರ್ಥ ಮತ್ತು ಕತ್ತಿರಿಸಿಟ್ಟ ಹಣ್ಣುಗಳನ್ನು ತಿನ್ನಬಾರದು. ತಯಾರಿಸಿದ ಆಹಾರವನ್ನು ಮುಚ್ಚಳದಿಂದ ಮುಚ್ಚಬೇಕು.

ಶಾಖಾಘಾತದ ಲಕ್ಷಣಗಳು

ಅತಿಹೆಚ್ಚು ಬಿಸಿಲಿನ ತಾಪಮಾನದಿಂದ ಮನುಷ್ಯನು ಶಾಖಾಘಾತಕ್ಕೆ ಒಳಗಾಗುವ ಸಂಭವವಿರುತ್ತದೆ. ಅದರಲ್ಲಿ ಮುಖ್ಯವಾಗಿ ಸಂಭ್ರಾAತಿ, ಅಸಂಗತ ಮಾತು, ವ್ಯತ್ಯಸ್ಥ ಪ್ರಜ್ಞೆ ಶಾಖಾಘಾತದ ಲಕ್ಷಣಗಳಾಗಿವೆ.

ಶಾಖಾಘಾತಕ್ಕೆ ಚಿಕಿತ್ಸೆ

ಮನುಷ್ಯನು ಬಿಸಿಲಿನ ಬೇಗೆಯಿಂದ ಶಾಖಾಘಾತಕ್ಕೊಳಗದಾಗ ನೆರಳಿರುವೆಡೆಗೆ ಸ್ಥಳಾಂತರಿಸಬೇಕು. ವ್ಯಕ್ತಿಯ ವಸ್ತçಗಳನ್ನು ಸಡಿಲಗೊಳಿಸಿ, ಅಂಗಾತ ಮಲಗಿಸಿ, ಕಾಲುಗಳನ್ನು ಎತ್ತರಿಸಿ, ಸಾಮಾನ್ಯ ನೀರಿನಿಂದ ದೇಹವನ್ನು ಒರೆಸಬೇಕು. ಇಲ್ಲವೇ ಹತ್ತಿರದ ವೈದ್ಯರನ್ನು ಕರೆಸಬೇಕು

Weather Update: Shocking news for the people of the state: More sunshine and higher temperatures than usual this year!
Share. Facebook Twitter LinkedIn WhatsApp Email

Related Posts

ನಾಳೆ ಚಂದ್ರಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳ ದರ್ಶನ ಸಮಯದಲ್ಲಿ ಬದಲಾವಣೆ – ಭಕ್ತರಿಗೆ ಪ್ರಮುಖ ಸೂಚನೆ

02/03/2026 6:41 AM2 Mins Read

ರಾಜ್ಯದ ವಸತಿ ಶಾಲೆ, ಹಾಸ್ಟೆಲ್ ಗಳಲ್ಲಿ ವಾರ್ಡನ್-ಶಿಕ್ಷಕರು ಈ ದಾಖಲೆಗಳನ್ನು ನಿರ್ವಹಿಸುವುದು ಕಡ್ಡಾಯ !

02/03/2026 6:23 AM2 Mins Read

ಖಗೋಳ ವಿಸ್ಮಯ : ನಾಳೆ ಸಂಭವಿಸಲಿದೆ ವರ್ಷದ ಮೊದಲ ʻಚಂದ್ರಗ್ರಹಣʼ, ಎಲ್ಲೆಲ್ಲಿ ಗೋಚರಿಸಲಿದೆ ಗೊತ್ತಾ?

02/03/2026 6:05 AM2 Mins Read
Recent News

ಇರಾನ್ ಮೇಲೆ ಇಸ್ರೇಲ್ ‘ಮಹಾ ದಂಡಯಾತ್ರೆ’: ಜೆರುಸಲೆಮ್ ದಾಳಿಗೆ ಪ್ರತಿಯಾಗಿ ಭೀಕರ ವೈಮಾನಿಕ ದಾಳಿ!

02/03/2026 6:59 AM

Weather Update : ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ಈ ವರ್ಷ ವಾಡಿಕೆಗಿಂತ ಅಧಿಕ ಬಿಸಿಲು, ಹೆಚ್ಚು ಉಷ್ಣಾಂಶ !

02/03/2026 6:54 AM

ನಾಳೆ ಚಂದ್ರಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳ ದರ್ಶನ ಸಮಯದಲ್ಲಿ ಬದಲಾವಣೆ – ಭಕ್ತರಿಗೆ ಪ್ರಮುಖ ಸೂಚನೆ

02/03/2026 6:41 AM

ರಾಜ್ಯದ ವಸತಿ ಶಾಲೆ, ಹಾಸ್ಟೆಲ್ ಗಳಲ್ಲಿ ವಾರ್ಡನ್-ಶಿಕ್ಷಕರು ಈ ದಾಖಲೆಗಳನ್ನು ನಿರ್ವಹಿಸುವುದು ಕಡ್ಡಾಯ !

02/03/2026 6:23 AM
State News
KARNATAKA

Weather Update : ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ಈ ವರ್ಷ ವಾಡಿಕೆಗಿಂತ ಅಧಿಕ ಬಿಸಿಲು, ಹೆಚ್ಚು ಉಷ್ಣಾಂಶ !

By kannadanewsnow5702/03/2026 6:54 AM KARNATAKA 3 Mins Read

ಬೆಂಗಳೂರು : ಈ ಬಾರಿಯ ಬೇಸಿಗೆಯು ಸಾಮಾನ್ಯಕ್ಕಿಂತ ಹೆಚ್ಚು ಕಠಿಣವಾಗಿರಲಿದ್ದು, ತೀವ್ರವಾದ ಬಿಸಿಗಾಳಿ ಬೀಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ…

ನಾಳೆ ಚಂದ್ರಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳ ದರ್ಶನ ಸಮಯದಲ್ಲಿ ಬದಲಾವಣೆ – ಭಕ್ತರಿಗೆ ಪ್ರಮುಖ ಸೂಚನೆ

02/03/2026 6:41 AM

ರಾಜ್ಯದ ವಸತಿ ಶಾಲೆ, ಹಾಸ್ಟೆಲ್ ಗಳಲ್ಲಿ ವಾರ್ಡನ್-ಶಿಕ್ಷಕರು ಈ ದಾಖಲೆಗಳನ್ನು ನಿರ್ವಹಿಸುವುದು ಕಡ್ಡಾಯ !

02/03/2026 6:23 AM

ಖಗೋಳ ವಿಸ್ಮಯ : ನಾಳೆ ಸಂಭವಿಸಲಿದೆ ವರ್ಷದ ಮೊದಲ ʻಚಂದ್ರಗ್ರಹಣʼ, ಎಲ್ಲೆಲ್ಲಿ ಗೋಚರಿಸಲಿದೆ ಗೊತ್ತಾ?

02/03/2026 6:05 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.