ವಾಷಿಂಗ್ಟನ್/ಕುವೈತ್ ಸಿಟಿ: ಇರಾನ್ ನಡೆಸಿದ ಕ್ಷಿಪಣಿ ದಾಳಿಯಲ್ಲಿ ಅಮೆರಿಕದ ಅತ್ಯಾಧುನಿಕ F-15 ಯುದ್ಧ ವಿಮಾನವೊಂದು ಕುವೈತ್ ಆಕಾಶದಲ್ಲಿ ಪತನಗೊಂಡಿದೆ ಎಂದು ವರದಿಯಾಗಿದೆ. ವಿಮಾನವು ಬೆಂಕಿಯ ಉಂಡೆಯಾಗಿ ಕೆಳಕ್ಕೆ ಬೀಳುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಜಗತ್ತಿನಾದ್ಯಂತ ಆತಂಕ ಮೂಡಿಸಿವೆ.
ವೈರಲ್ ಆಗಿರುವ ವಿಡಿಯೋದಲ್ಲಿ ಯುದ್ಧ ವಿಮಾನವು ನಿಯಂತ್ರಣ ತಪ್ಪಿ ನೆಲಕ್ಕೆ ಅಪ್ಪಳಿಸುತ್ತಿರುವುದು ಸ್ಪಷ್ಟವಾಗಿ ಕಂಡುಬಂದಿದೆ. ಇದು ಶತ್ರು ಪಡೆಗಳ ದಾಳಿಯಿಂದ ಪತನವಾಗಿದೆಯೇ ಅಥವಾ ತಾಂತ್ರಿಕ ದೋಷವೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
ವಾಷಿಂಗ್ಟನ್ ಪ್ರತಿಕ್ರಿಯೆ: ಈ ಘಟನೆಗೆ ಸಂಬಂಧಿಸಿದಂತೆ ಅಮೆರಿಕದ ರಕ್ಷಣಾ ಇಲಾಖೆ (Pentagon) ಈವರೆಗೆ ಅಧಿಕೃತವಾಗಿ ಯಾವುದೇ ಸ್ಪಷ್ಟನೆ ನೀಡಿಲ್ಲ. ವಾಷಿಂಗ್ಟನ್‌ನಿಂದ ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ದೃಢೀಕರಣಕ್ಕಾಗಿ ಕಾಯಲಾಗುತ್ತಿದೆ.
BREAKING: American warplane (F-15) crashes in Kuwait.
Locals claim the crash occured after friendly fire. Pilot ejected. pic.twitter.com/jOhxqXMBdg
— Treeni (@treeni) March 2, 2026








