ಬೆಂಗಳೂರು : ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಓರ್ವ ಮಹಿಳೆ ಸಾವನ್ನಪ್ಪಿದ್ದು, ಮೂವರನ್ನು ರಕ್ಷಣೆ ಮಾಡಲಾಗಿದೆ.
ಬೆಂಗಳೂರಿನ ಗಾಯಿತ್ರಿ ನಗರದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ದುರಂತದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, ಮೂವರನ್ನು ರಕ್ಷಣೆ ಮಾಡಲಾಗಿದೆ. ಅಗ್ನಿ ದುರಂತದಲ್ಲಿ 53 ವರ್ಷದ ಸವಿತಾ ಸಾವನ್ನಪ್ಪಿದ್ದಾರೆ.
ಕಂಟ್ರ್ಯಾಕ್ಟರ್ ರಮೇಶ್ ಬಾಬು ಅವರ 4 ಅಂತಸ್ತಿನ ಮನೆಯಲ್ಲಿ 3ನೇ ಫ್ಲೋರ್ ನ ಅಡುಗೆ ಮನೆಯಲ್ಲಿ ಅಗ್ನಿ ಅವಘಢ ಸಂಭವಿಸಿದ್ದು, ರಮೇಶ್ ಬಾಬು ಪತ್ನಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಆಗಮಿಸಿ ರಮೇಶ್ ಬಾಬು, ಅವರ ತಾಯಿ ಹಾಗೂ ಮಗನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುಭ್ರಹ್ಮಣ್ಯ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.








