ಬೆಂಗಳೂರು : ಒಂದು ಕಡೆ ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ ಎಂದು ಸಚಿವಾ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದರೆ ಇನ್ನೊಂದು ಕಡೆ ಬಜೆಟ್ ನಲ್ಲಿ ಈ ಬಾರಿ ಪೆಟ್ರೋಲ್ ಡೀಸೆಲ್ ಮೇಲೆ ಒಂದು ರೂಪಾಯಿ ವಿಧಿಸಲು ಇದೀಗ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಈ ಮೂಲಕ ರಾಜ್ಯದ ಜನತೆಗೆ ಮತ್ತೊಂದು ಶಾಕ್ ನೀಡಲು ಸರ್ಕಾರ ಮುಂದಾಗಿದೆ.
ಹೌದು ಗ್ಯಾರಂಟಿ ಯೋಜನೆಗಳು ಸೃಷ್ಟಿಸಿದ ಆರ್ಥಿಕ ಹೊರೆ ಒಂದೆಡೆಯಾದರೆ ಸಂಪನ್ಮೂಲ ಕ್ರೋಡೀಕರಣ ಇಲಾಖೆಗಳಿಗೆ ನೀಡಿದ್ದ ರಾಜಸ್ವ ಸಂಗ್ರಹಣೆಯ ಗುರಿ ಈಗಾಗಲೇ ಅತಿಯಾಗಿದೆ. ಹೀಗಾಗಿ ಹೊಸ ಆದಾಯದ ಮೂಲಗಳನ್ನು ಅರಸುವುದು ರಾಜ್ಯ ಸರ್ಕಾರಕ್ಕೆ ಅನಿವಾರ್ಯವಾಗಿ ಪರಿಣಮಿಸಿದೆ. ಹೀಗಾಗಿ ಪೆಟ್ರೋಲ್ ಹಾಗೂ ಡೀಸೆಲ್ಗಳ ಮೇಲೆ ಹೆಚ್ಚುವರಿಯಾಗಿ ಮಾರಾಟ ತೆರಿಗೆ ಹೇರುವುದು ಅನಿವಾರ್ಯವಾಗುವ ಸಾಧ್ಯತೆ 2໖.
ಹಣಕಾಸು ಇಲಾಖೆ ಅಧಿಕಾರಿಗಳ ಜತೆಗೆ ಕಳೆದ ಕೆಲ ದಿನಗಳಿಂದ ಪ್ರತ್ಯೇಕ ಚರ್ಚೆ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆ ಈ ಪ್ರಸ್ತಾಪವೊಂದು ಈಗಾಗಲೇ ಸಲ್ಲಿಕೆಯಾಗಿದೆ. ಪ್ರತಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ 1 ರೂ. ಹೆಚ್ಚುವರಿ ಮಾರಾಟ ತೆರಿಗೆ ವಿಧಿಸುವುದರಿಂದ ತಕ್ಕಮಟ್ಟಿಗೆ ಸಂಪನ್ಮೂಲ ಕ್ರೋಡೀಕರಣಕ್ಕೆ ವೇಗ ನೀಡಬಹುದೆಂದು ಚರ್ಚಿಸಲಾಗುತ್ತಿದೆ. ಆದರೆ, ಅದು ಇನ್ನೂ ಅಂತಿಮ ನಿರ್ಧಾರದ ಹಂತಕ್ಕೆ ಬಂದಿಲ್ಲ. ಇದರಿಂದ ಸಾರ್ವಜನಿಕ ವಿರೋಧ ತೀವ್ರವಾಗಬಹುದೆಂಬ ಸಲಹೆಯೂ ವ್ಯಕ್ತವಾಗಿದೆ.
2024ರಲ್ಲಿ ಸಿದ್ದರಾಮಯ್ಯ ಅವರು ಹಾಲಿ ಇರುವ ಪೆಟ್ರೋಲ್ ಮಾರಾಟ ತೆರಿಗೆಯನ್ನು ಶೇ.29.84ಕ್ಕೆ ಏರಿಕೆ ಮಾಡಿದ್ದರು. ಇದರಿಂದ ಪೆಟ್ರೋಲ್ ದರ ಪ್ರತಿ ಲೀಟರ್ಗೆ 3 ರೂ.ನಷ್ಟು ತುಟ್ಟಿಯಾಗಿತ್ತು. ನೆರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಕಡಿಮೆ ಪ್ರಮಾಣದಲ್ಲಿ ಸೆಸ್ ವಿಧಿಸಲಾಗಿದೆ ಎಂದು ಮುಖ್ಯಮಂತ್ರಿಗಳು ಆ ಸಂದರ್ಭದಲ್ಲಿ ತಮ್ಮ ನಿರ್ಣಯವನ್ನು ಸಮರ್ಥನೆ ಮಾಡಿಕೊಂಡಿದ್ದರು. ಬಜೆಟ್ ಅಧಿವೇಶನಕ್ಕೆ ಇನ್ನು 4 ದಿನ ಮಾತ್ರ ಬಾಕಿ ಇದೆ.
ಕರ್ನಾಟಕ ರಾಜ್ಯ ಬಜೆಟ್ ಮಂಡನೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ, ರಾಜ್ಯ ಸರ್ಕಾರವು ತನ್ನ ಆದಾಯವನ್ನು ಹೆಚ್ಚಿಸಿಕೊಳ್ಳಲು ಪೆಟ್ರೋಲ್ ಮತ್ತು ಡೀಸೆಲ್ ದರದ ಮೇಲೆ ಹೆಚ್ಚುವರಿ ಸೆಸ್ (Cess) ವಿಧಿಸುವ ಸಾಧ್ಯತೆ ಇದೆ ಎಂಬ ಚರ್ಚೆಗಳು ಸಾರ್ವಜನಿಕ ವಲಯದಲ್ಲಿ ತೀವ್ರವಾಗಿ ನಡೆಯುತ್ತಿವೆ.
ಇಂದಿನ ತಾಜಾ ಮಾಹಿತಿಯ ಪ್ರಕಾರ ಈ ವಿಷಯದ ಕುರಿತಾದ ಮುಖ್ಯಾಂಶಗಳು ಇಲ್ಲಿವೆ:
1. ಹೆಚ್ಚುವರಿ ಸೆಸ್ ವಿಧಿಸುವ ಸಾಧ್ಯತೆ
ರಾಜ್ಯ ಸರ್ಕಾರವು ಐದು ಗ್ಯಾರಂಟಿ ಯೋಜನೆಗಳ ಜಾರಿಯಿಂದಾಗಿ ಉಂಟಾಗಿರುವ ಆರ್ಥಿಕ ಹೊರೆಯನ್ನು ಸರಿದೂಗಿಸಲು ಮತ್ತು ಅಭಿವೃದ್ಧಿ ಕೆಲಸಗಳಿಗೆ ಹಣ ಕ್ರೋಢೀಕರಿಸಲು ಹೊಸ ಮಾರ್ಗಗಳನ್ನು ಹುಡುಕುತ್ತಿದೆ. ಈ ಹಿನ್ನೆಲೆಯಲ್ಲಿ ಇಂಧನದ ಮೇಲೆ 1 ರೂಪಾಯಿ ಹೆಚ್ಚುವರಿ ಸೆಸ್ ವಿಧಿಸಲು ಚಿಂತನೆ ನಡೆಸುತ್ತಿದೆ ಎಂಬ ವರದಿಗಳು ಕೇಳಿಬರುತ್ತಿವೆ.
2. ಇಂದಿನ ಇಂಧನ ದರಗಳು (ಮಾರ್ಚ್ 3, 2026)
ಬೆಂಗಳೂರಿನಲ್ಲಿ ಪ್ರಸ್ತುತ ಇಂಧನ ದರಗಳು ಈ ಕೆಳಗಿನಂತಿವೆ:
-
ಪೆಟ್ರೋಲ್: ಸರಿಸುಮಾರು ₹103.37/ಲೀಟರ್
-
ಡೀಸೆಲ್: ಸರಿಸುಮಾರು ₹90.99/ಲೀಟರ್
3. ಜನಸಾಮಾನ್ಯರ ಮೇಲೆ ಪರಿಣಾಮ
ಒಂದು ವೇಳೆ ಬಜೆಟ್ನಲ್ಲಿ ದರ ಏರಿಕೆ ಘೋಷಣೆಯಾದರೆ, ಅದು ಕೇವಲ ವಾಹನ ಸವಾರರಿಗಷ್ಟೇ ಅಲ್ಲದೆ, ಸರಕು ಸಾಗಣೆ ವೆಚ್ಚ ಹೆಚ್ಚಳವಾಗುವ ಮೂಲಕ ಅಗತ್ಯ ವಸ್ತುಗಳ ಬೆಲೆ ಏರಿಕೆಗೂ ಕಾರಣವಾಗಬಹುದು ಎಂಬ ಆತಂಕ ಸಾರ್ವಜನಿಕರಲ್ಲಿದೆ.








