ಕಲಬುರ್ಗಿ : ಕಲ್ಬುರ್ಗಿ ಡಿಸಿ ಇಮೇಲ್ ಐಡಿಗೆ ಕಿಡಿಗೇಡಿಗಳು ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಕಳುಹಿಸಿದ್ದಾರೆ.ಕೋರ್ಟ್ ನಲ್ಲಿ ಬಾಂಬ್ ಇಟ್ಟಿರೋದಾಗಿ ಬೆದರಿಕೆ ಸಂದೇಶ ಕಳಿಸಿದ್ದಾರೆ.
ತಕ್ಷಣ ಬೆದರಿಕೆ ಸಂದೇಶ ಬಂದಿದ್ದನ್ನು ಜಿಲ್ಲಾಧಿಕಾರಿಗಳು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಈ ವೇಳೆ ತಕ್ಷಣ ಕೋರ್ಟ್ ಹಾಲ್ನಲ್ಲಿದ್ದ ಎಲ್ಲಾ ಸಿಬ್ಬಂದಿಗಳನ್ನು ಹೊರಗಡೆ ಕಳುಹಿಸಲಾಗಿದೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.








