ಯಾದಗಿರಿ : ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ಸಂಬಂಧಪಟ್ಟಂತೆ ಇದೀಗ ಪ್ರಕರಣ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಾಪಸ್ ಪಡೆದಿದ್ದಾರೆ.
ಕಲಬುರ್ಗಿ ಹೈಕೋರ್ಟ್ ಪೀಠದಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ವಾಪಾಸ್ ಪಡೆದಿದ್ದಾರೆ. ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದ ಹಿನ್ನೆಲೆ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ FIR ದಾಖಲಾಗಿತ್ತು.ಅದನ್ನ ರದ್ದುಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಇದೀಗ ಮಲ್ಲಿಕಾರ್ಜುನ ಮುತ್ಯಾ ಪರ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ವಾಪಸ್ ಪಡೆದಿದ್ದಾರೆ.








