Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಜಿಯೋ ಪ್ಲಾಟ್‌ಫಾರ್ಮ್ಸ್ ಗೆ ಡ್ಯಾನ್ ಬೈಲಿ ಅಧ್ಯಕ್ಷ; ಜಾಗತಿಕ ಮಾರುಕಟ್ಟೆ ಮೇಲೆ ದೃಷ್ಟಿ

03/03/2026 4:37 PM

BREAKING : ‘ನಾವು ಪರಮಾಣು ಬಾಂಬ್’ಗಳನ್ನ ತಯಾರಿಸುತ್ತೇವೆ’ ; ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಘೋಷಣೆ

03/03/2026 4:35 PM

KRIES Exam-26: ರಾಜ್ಯದ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ನಡೆಸಿದ್ದ ಲಿಖಿತ ಪರೀಕ್ಷೆಯ ಕೀ ಉತ್ತರ ಪ್ರಕಟ

03/03/2026 4:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ರಾಜ್ಯದಲ್ಲಿ ಹೊಸ ಲೇಔಟ್ ಗಳ ‘ಇ-ಖಾತಾ’ಗೆ ಗ್ರಾಮ ಪಂಚಾಯ್ತಿಯಲ್ಲೇ ಅರ್ಜಿ ಸಲ್ಲಿಕೆಗೆ ಅವಕಾಶ
KARNATAKA

GOOD NEWS: ರಾಜ್ಯದಲ್ಲಿ ಹೊಸ ಲೇಔಟ್ ಗಳ ‘ಇ-ಖಾತಾ’ಗೆ ಗ್ರಾಮ ಪಂಚಾಯ್ತಿಯಲ್ಲೇ ಅರ್ಜಿ ಸಲ್ಲಿಕೆಗೆ ಅವಕಾಶ

By kannadanewsnow0903/03/2026 3:57 PM

ಬೆಂಗಳೂರು: ಹೊಸ ಬಡಾವಣೆಗಳಿಗೆ ಅರ್ಜಿಗಳನ್ನು ಸಲ್ಲಿಸಲು ಗ್ರಾಮ ಪಂಚಾಯತಿ ಹಂತದಲ್ಲಿ ಅವಕಾಶ ನೀಡಲಾಗಿದ್ದು, ಈವರೆಗೆ 478 ಹೊಸ ಬಡಾವಣೆಗಳಿಗೆ ಅರ್ಜಿ ಸಲ್ಲಿಕೆಯಾಗಿದ್ದು, ಅವುಗಳಲ್ಲಿ 54 ಹೊಸ ಬಡಾವಣೆಗಳಿಗೆ ಗ್ರಾಮ ಪಂಚಾಯತಿ ಹಂತದಲ್ಲಿ ಅನುಮೋದನೆ ನೀಡಲಾಗಿದೆ ಹಾಗೂ ಹೊಸ ಬಹುಮಹಡಿ (ಅಪಾರ್ಟ್‌ಮೆಂಟ್) ಕಟ್ಟಡಗಳಿಗೆ ಅರ್ಜಿಗಳನ್ನು ಸಲ್ಲಿಸಲು ಗ್ರಾಮ ಪಂಚಾಯತಿ ಹಂತದಲ್ಲಿ ಅವಕಾಶ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ವಿಕಾಸಸೌಧದ ತಮ್ಮ ಕಚೇರಿ ಸಭಾಂಗಣದಲ್ಲಿ ಸಚಿವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿ ಪಂಚಾಯತ್‌ ರಾಜ್‌ ಇಲಾಖೆಯ ವಿವಿಧ ಕಾರ್ಯಕ್ರಮಗಳನ್ನು ಪರಿಶೀಲಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಇ-ಸ್ವತ್ತು 2.0 ತಂತ್ರಾಂಶದಡಿ ಇದುವರೆಗೆ ರಾಜ್ಯದಲ್ಲಿ 1,14,907 ಅರ್ಜಿಗಳನ್ನು ಅನುಮೋದಿಸಿ ವಿಲೇವಾರಿ ಮಾಡಲಾಗಿದೆ.  ಸಾರ್ವಜನಿಕರಿಂದ ಇದುವರೆಗೆ ಒಟ್ಟು 1,38,470 ಅರ್ಜಿಗಳು ಸ್ವೀಕೃತವಾಗಿದ್ದು, 23,563 ಅರ್ಜಿಗಳು ಅನುಮೋದನೆಗಾಗಿ ಬಾಕಿ ಉಳಿದಿವೆ ಎಂದರು.

ಇ-ಸ್ವತ್ತು 2.0 ತಂತ್ರಾಂಶದ ಸಿಟಿಜನ್‌ ಇಂಟರ್‌ಫೇಸ್‌ (Citizen interface) ಮೂಲಕ ಅರ್ಜಿಗಳನ್ನು ಸಲ್ಲಿಸುವ ಸಂದರ್ಭದಲ್ಲಿ ಮತ್ತು ಅರ್ಜಿಗಳನ್ನು ಅನುಮೋದನೆ ಮಾಡುವ ಸಮಯದಲ್ಲಿ ಕೆಲವು ತಾಂತ್ರಿಕ ಸಮಸ್ಯೆಗಳು ಎದುರಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಇ-ಸ್ವತ್ತು ತಂತ್ರಾಂಶವನ್ನು ನಿರ್ವಹಿಸುತ್ತಿರುವ ಕೇಂದ್ರ ಸರ್ಕಾರದ ಎನ್‌ಐಸಿ (NIC) ಸಂಸ್ಥೆ ಮೂಲಕ ಉದ್ಭವಿಸಿರುವ ಇ-ಸ್ವತ್ತು 2.0 ತಂತ್ರಾಂಶದ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಲು ಮತ್ತು ಉಳಿದ ಮಾಡ್ಯುಲ್‌ಗಳನ್ನು ಆದ್ಯತೆ ಮೇರೆಗೆ ಅಭಿವೃದ್ದಿಪಡಿಸಲು ಕಳೆದ ಜನವರಿಯಲ್ಲಿ ಕೇಂದ್ರದ ಮಾಹಿತಿ ತಂತ್ರಜ್ಞಾನ ಹಾಗೂ ಎಲೆಕ್ಟ್ರಾನಿಕ್ಸ್‌ ಖಾತೆಯ ಸಚಿವರಿಗೆ ತಾವು ಬರೆದಿದ್ದ ಪತ್ರಕ್ಕೆ ಸಂಬಂಧಿಸಿದಂತೆ ಇ-ಸ್ವತ್ತು 2.0 ತಂತ್ರಾಂಶದಲ್ಲಿ ಬದಲಾವಣೆ ಮಾಡಿ ಕೆಲವು ಸಮಸ್ಯೆಗಳನ್ನು ಬಗೆಹರಿಸಲಾಗಿದೆ ಎಂದೂ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಗ್ರಾಮ ಪಂಚಾಯತಿ ಹಂತದಲ್ಲಿ ಆಸ್ತಿ ನೋಂದಣಿ ಸರಳೀಕರಣ - ಸಚಿವ ಪ್ರಿಯಾಂಕ್ ಖರ್ಗೆ.
ಗ್ರಾಮ ಪಂಚಾಯತಿ ಹಂತದಲ್ಲಿ ಆಸ್ತಿ ನೋಂದಣಿ ಸರಳೀಕರಣ – ಸಚಿವ ಪ್ರಿಯಾಂಕ್ ಖರ್ಗೆ.

ಹೊಸದಾಗಿ ಅನುಮೋದನೆಗೊಂಡ ಆಸ್ತಿಗಳಿಗೆ ತಿದ್ದುಪಡಿ ಮಾಡುವ ಅವಕಾಶವನ್ನು ಹಾಗೂ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಮಾರ್ಗಸೂಚಿ ದರವನ್ನು ಇ-ಸ್ವತ್ತು ತಂತ್ರಾಂಶದೊಂದಿಗೆ ಸಂಯೋಜನೆ ಮಾಡುವ ಕಾರ್ಯವನ್ನು ಮುಂದಿನ 10 ದಿನದೊಳಗೆ ಕ್ರಮವಹಿಸಲಾಗುವುದು; ಇ-ಸ್ವತ್ತು ತಂತ್ರಾಂಶದ ಬಳಕೆದಾರರು ಎದುರಿಸುತ್ತಿರುವ ಲಾಗಿನ್‌ನಲ್ಲಿ ಉಂಟಾಗುತ್ತಿರುವ ಸಣ್ಣ ಪುಟ್ಟ ತಾಂತ್ರಿಕ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಲಾಗುವುದು ಎಂದೂ ಸಚಿವರು ಹೇಳಿದ್ದಾರೆ. ಸಾರ್ವಜನಿಕರಿಗೆ ಅನುಕೂಲವಾಗುವಂತೆ ಇ-ಸ್ವತ್ತು ತಂತ್ರಾಂಶದಲ್ಲಿರುವ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಿ, ಮತ್ತಷ್ಟು ಸರಳಿಕರಿಸಲು ಕ್ರಮವಹಿಸಲಾಗುತ್ತಿದೆ, ಅರ್ಜಿ ಸಲ್ಲಿಸಲು ಯಾವುದೇ ಕಾಲಾವಧಿಯನ್ನು ನಿಗದಿಪಡಿಸಿಲ್ಲವಾದ್ದರಿಂದ ಸಾರ್ವಜನಿಕರು ಗ್ರಾಮ ಪಂಚಾಯತಿ ಕಚೇರಿಗೆ ಭೇಟಿ ನೀಡದೆಯೇ ತಾವಿರುವಲ್ಲಿಯೇ ತಮ್ಮ ಆಸ್ತಿಗೆ ಸಂಬಂಧಿಸಿದಂತೆ ನಮೂನೆಗಳನ್ನು ಇ-ಸ್ವತ್ತು ತಂತ್ರಾಂಶದ ಮೂಲಕ ಪಡೆಯಬಹುದಾಗಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಸಚಿವರು ಕೋರಿದ್ದಾರೆ.

ಇ-ಸ್ವತ್ತು ಸಹಾಯವಾಣಿ 9483476000, ಜಿಲ್ಲಾ ಸಹಾಯವಾಣಿಗಳ ಸಂಖ್ಯೆಯನ್ನು https://eswathu.karnataka.gov.in/Login.aspx ರಲ್ಲಿ “ಸಂಪರ್ಕಿಸಿ” ಶೀರ್ಷಿಕೆಯಡಿ ಹಾಗೂ https://panchatantra.karnataka.gov.in ರಲ್ಲಿ ಪ್ರಕಟಿಸಲಾಗಿದೆ.

‘RCB ಅಭಿಮಾನಿ’ಗಳಿಗೆ ಗುಡ್ ನ್ಯೂಸ್: ಬೆಂಗಳೂರಲ್ಲಿ ‘IPL ಪಂದ್ಯ’ ಆಡಲು ಒಪ್ಪಿದ ‘RCB ತಂಡ’

ಬಿಜೆಪಿ ಎಷ್ಟೇ ಹುಳಿ ಹಿಂಡಿದ್ರು, ನನ್ನ, ಡಿಕೆ ಶಿವಕುಮಾರ್ ಹಾಲು ಜೇನಿನಂತ ಸಂಬಂಧದ ಮೇಲೆ ಯಾವುದೇ ಪರಿಣಾಮ ಬೀರಲ್ಲ : ಸಿಎಂ

Share. Facebook Twitter LinkedIn WhatsApp Email

Related Posts

KRIES Exam-26: ರಾಜ್ಯದ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ನಡೆಸಿದ್ದ ಲಿಖಿತ ಪರೀಕ್ಷೆಯ ಕೀ ಉತ್ತರ ಪ್ರಕಟ

03/03/2026 4:31 PM1 Min Read

ಪೂರ್ಣಗ್ರಾಸ ಗ್ರಸ್ತೋದಯ ಚಂದ್ರಗ್ರಹಣ

03/03/2026 4:13 PM2 Mins Read

BREAKING : ಚಿನ್ನಸ್ವಾಮಿ ಮೈದಾನದಲ್ಲೇ IPL ಉದ್ಘಾಟನಾ ಪಂದ್ಯ ಆಡಲು RCB ಮ್ಯಾನೇಜ್ಮೆಂಟ್ ಗ್ರೀನ್ ಸಿಗ್ನಲ್!

03/03/2026 4:07 PM1 Min Read
Recent News

ಜಿಯೋ ಪ್ಲಾಟ್‌ಫಾರ್ಮ್ಸ್ ಗೆ ಡ್ಯಾನ್ ಬೈಲಿ ಅಧ್ಯಕ್ಷ; ಜಾಗತಿಕ ಮಾರುಕಟ್ಟೆ ಮೇಲೆ ದೃಷ್ಟಿ

03/03/2026 4:37 PM

BREAKING : ‘ನಾವು ಪರಮಾಣು ಬಾಂಬ್’ಗಳನ್ನ ತಯಾರಿಸುತ್ತೇವೆ’ ; ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಘೋಷಣೆ

03/03/2026 4:35 PM

KRIES Exam-26: ರಾಜ್ಯದ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ನಡೆಸಿದ್ದ ಲಿಖಿತ ಪರೀಕ್ಷೆಯ ಕೀ ಉತ್ತರ ಪ್ರಕಟ

03/03/2026 4:31 PM

BREAKING : ‘RCB’ ಅಭಿಮಾನಿಗಳಿಗೆ ಗುಡ್ ನ್ಯೂಸ್ ; ಬೆಂಗಳೂರಿನಲ್ಲೇ ‘IPL ಉದ್ಘಾಟನೆ ಸೇರಿ 5 ಪಂದ್ಯಗಳು’ ಆಯೋಜನೆ!

03/03/2026 4:23 PM
State News
KARNATAKA

KRIES Exam-26: ರಾಜ್ಯದ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ನಡೆಸಿದ್ದ ಲಿಖಿತ ಪರೀಕ್ಷೆಯ ಕೀ ಉತ್ತರ ಪ್ರಕಟ

By kannadanewsnow0903/03/2026 4:31 PM KARNATAKA 1 Min Read

ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಎಲ್ಲ ವಸತಿ ಶಾಲೆಗಳ 6ನೇ…

ಪೂರ್ಣಗ್ರಾಸ ಗ್ರಸ್ತೋದಯ ಚಂದ್ರಗ್ರಹಣ

03/03/2026 4:13 PM

BREAKING : ಚಿನ್ನಸ್ವಾಮಿ ಮೈದಾನದಲ್ಲೇ IPL ಉದ್ಘಾಟನಾ ಪಂದ್ಯ ಆಡಲು RCB ಮ್ಯಾನೇಜ್ಮೆಂಟ್ ಗ್ರೀನ್ ಸಿಗ್ನಲ್!

03/03/2026 4:07 PM

ಕೇಂದ್ರದ ಅನುದಾನ ಕೊರತೆಯಿಂದ ರಾಜ್ಯದ ಅಭಿವೃದ್ಧಿಗೆ ಆರ್ಥಿಕ ಹೊರೆ: ಮದ್ದೂರು ಶಾಸಕ ಕೆ.ಎಂ.ಉದಯ್ ಕಿಡಿ

03/03/2026 4:05 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.