ಬೆಂಗಳೂರಿನ ವಿಧಾನ ಸೌಧದ ಮೂರನೇ ಮಹಡಿಯಲ್ಲಿರುವ ಸಚಿವ ಸಂಪುಟ ಸಭಾಮಂದಿರದಲ್ಲಿ ಈ ಮಹತ್ವದ ಸಭೆ ನಡೆಯಲಿದೆ. ಈ ಕುರಿತು ಸರ್ಕಾರದ ಅಪರ ಕಾರ್ಯದರ್ಶಿ (ಸಚಿವ ಸಂಪುಟ) ಆರ್. ಚಂದ್ರಶೇಖರ್ ಅವರು ಮಂಗಳವಾರ ಅಧಿಕೃತ ಸೂಚನಾ ಪತ್ರವನ್ನು ಹೊರಡಿಸಿದ್ದಾರೆ.
ಬಜೆಟ್ ಮೇಲೆ ಕುತೂಹಲ
ರಾಜ್ಯದ ಆರ್ಥಿಕ ಅಭಿವೃದ್ಧಿ ಹಾಗೂ ಮುಂಬರುವ ವರ್ಷದ ಯೋಜನೆಗಳ ದೃಷ್ಟಿಯಿಂದ ಈ ಬಜೆಟ್ ಅತ್ಯಂತ ಮಹತ್ವದ್ದಾಗಿದೆ. ಸಭೆಯಲ್ಲಿ ಮುಖ್ಯಮಂತ್ರಿಗಳು ಮಂಡಿಸಲಿರುವ ಆಯವ್ಯಯದ ಪ್ರಸ್ತಾವನೆಗಳಿಗೆ ಸಚಿವ ಸಂಪುಟವು ಅಧಿಕೃತ ಮುದ್ರೆ ಒತ್ತಲಿದೆ. ಈ ಸಭೆಗೆ ರಾಜ್ಯದ ಎಲ್ಲಾ ಸಚಿವರು ಕಡ್ಡಾಯವಾಗಿ ಹಾಜರಿ ಸೂಚಿಸಲಾಗಿದೆ.
ಈ ವಿಶೇಷ ಸಭೆಯ ಹಿನ್ನೆಲೆಯಲ್ಲಿ ವಿಧಾನ ಸೌಧದ ಭದ್ರತೆ ಹಾಗೂ ಆಡಳಿತಾತ್ಮಕ ಸಿದ್ಧತೆಗಳಿಗಾಗಿ ವಿವಿಧ ಇಲಾಖೆಗಳಿಗೆ ಮಾಹಿತಿಯನ್ನು ರವಾನಿಸಲಾಗಿದೆ. ಶುಕ್ರವಾರ ಬೆಳಿಗ್ಗೆ ಬಜೆಟ್ ಅನುಮೋದನೆಗೊಂಡ ಬೆನ್ನಲ್ಲೇ, ಸರ್ಕಾರವು ತನ್ನ ಮುಂದಿನ ಆರ್ಥಿಕ ಗುರಿಗಳನ್ನು ಸದನದ ಮುಂದಿಡಲಿದೆ.
ಜಿಯೋ ಪ್ಲಾಟ್‌ಫಾರ್ಮ್ಸ್ ಗೆ ಡ್ಯಾನ್ ಬೈಲಿ ಅಧ್ಯಕ್ಷ; ಜಾಗತಿಕ ಮಾರುಕಟ್ಟೆ ಮೇಲೆ ದೃಷ್ಟಿ
BREAKING : ಇಸ್ರೇಲ್ ಮತ್ತು ಅಮೆರಿಕದ ದಾಳಿಯ ನಡುವೆ ಇರಾನ್ ನಲ್ಲಿ 4.3 ತೀವ್ರತೆಯ ಭೂಕಂಪ !








