ಬೀದರ್: ಜಿಲ್ಲೆಯ ಬ್ರಿಮ್ಸ್ ಆಸ್ಪತ್ರೆಯ ವೈದ್ಯರೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರೋದಾಗಿ ತಿಳಿದು ಬಂದಿದೆ.
ಬೀದರ್ ನ ಬ್ರಿಮ್ಸ್ ವಸತಿ ಗೃಹದಲ್ಲಿ ವೈದ್ಯ ಸುನೀಲ್ ತಾಪ್ಸೆ(58) ಎಂಬುವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅನಾರೋಗ್ಯದ ಹಿನ್ನಲೆಯಲ್ಲಿ ಬೇಸತ್ತು ಹಿರಿಯ ವೈದ್ಯ ಆತ್ಮಹತ್ಯೆ ಮಾಡಿಕೊಂಡಿರೋದಾಗಿ ಹೇಳಲಾಗುತ್ತಿದೆ.
ಆತ್ಮಹತ್ಯೆಗೂ ಮುನ್ನ ಹಿರಿಯ ವೈದ್ಯ ಸುನೀಲ್ ತಾಪ್ಸೆ ಅವರು ನನ್ನ ಸಾವಿಗೆ ಅನಾರೋಗ್ಯವೇ ಕಾರಣ ಎಂಬುದಾಗಿ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ. ಬೆಡ್ ರೂಮಿನ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಳೆದ 35 ವರ್ಷಗಳಿಂದ ಬ್ರಿಮ್ಸ್ ಆಸ್ಪತ್ರೆಯಲ್ಲಿ ಸುನೀಲ್ ತಾಪ್ಸೆ ಅವರು ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು. ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ ಮುಖ್ಯಸ್ಥರಾಗಿಯೂ ಸೇವೆ ಸಲ್ಲಿಸಿದ್ದರು.
ಸುನೀಲ್ ಆತ್ಮಹತ್ಯೆ ವಿಷಯ ತಿಳಿದು ಬ್ರಿಮ್ಸ್ ವಸತಿಗೃಹಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕುರ್ಚಿ ಕಾಳಗದ ಮುಂದುವರಿದ ಭಾಗವೇ ಫೋನ್ ಕದ್ದಾಲಿಕೆ: ಕೇಂದ್ರ ಸಚಿವ HDK
‘ಮಗುವಿನ ದೇಹದ ಮೇಲೆ ನಡೆಯುವ ಯಾವುದೇ ರೀತಿಯ ಲೈಂಗಿಕ ಅತಿಕ್ರಮಣ ಅತ್ಯಾಚಾರ’: ಕೇರಳ ಹೈಕೋರ್ಟ್ ಮಹತ್ವದ ತೀರ್ಪು








