Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಒಮಾನ್ ಕರಾವಳಿ ಬಳಿ ಮತ್ತೊಂದು ಭಾರತೀಯ ಹಡಗಿನ ಮೇಲೆ ದಾಳಿ ನಡೆದಿದೆ ಎಂಬ ವರದಿಗಳು ‘ಸುಳ್ಳು’: ಕೇಂದ್ರ ಸರ್ಕಾರ ಸ್ಪಷ್ಟನೆ

NEET ಮರುಪರೀಕ್ಷೆ: ಅಕ್ರಮ ಎಸಗಿದರೆ ಕಠಿಣ ಕಾನೂನು ಕ್ರಮ ಎದುರಿಸಬೇಕಾದೀತು: ಕೇಂದ್ರ ಸರ್ಕಾರ ಎಚ್ಚರಿಕೆ

ಜಿ-7 ಶೃಂಗಸಭೆ: ಫ್ರಾನ್ಸ್, ಸ್ಲೋವಾಕಿಯಾಗೆ ಪ್ರಧಾನಿ ಮೋದಿ ಐತಿಹಾಸಿಕ ಪ್ರವಾಸ ಆರಂಭ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜಿಬಿಎ ಅಭ್ಯರ್ಥಿಗಳನ್ನು ಗುರುತಿಸಲು ವಾರದ ಗಡುವು: ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ
KARNATAKA

ಜಿಬಿಎ ಅಭ್ಯರ್ಥಿಗಳನ್ನು ಗುರುತಿಸಲು ವಾರದ ಗಡುವು: ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ 369 ವಾರ್ಡುಗಳಿಗೆ ಜೆಡಿಎಸ್ ಪಕ್ಷದ ಅಭ್ಯರ್ಥಿಗಳನ್ನು ಗುರುತಿಸಲು ಒಂದು ವಾರದ ಗಡುವು ನಿಗದಿ ಮಾಡಿರುವ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡರು; ಅಂತಿಮ ಪಟ್ಟಿಯನ್ನು ರಾಜ್ಯಾಧ್ಯಕ್ಷರಾದ ಹೆಚ್.ಡಿ. ಕುಮಾರಸ್ವಾಮಿ ಅಂತಿಮ ಪರಿಶೀಲನೆ ನಡೆಸಲಿದ್ದಾರೆ ಎಂದು ಹೇಳಿದರು.

ಪಕ್ಷದ ರಾಜ್ಯ ಕಚೇರಿ ಜೆ.ಪಿ. ಭವನದಲ್ಲಿ ಜಿಬಿಎ ಐದು ವಿಭಾಗಗಳ ಅಧ್ಯಕ್ಷರು ಹಾಗೂ ಎಲ್ಲಾ ವಿಧಾನಸಭೆ ಕ್ಷೇತ್ರಗಳ ಅಧ್ಯಕ್ಷರ ಸಭೆಯಲ್ಲಿ ಮಾತನಾಡಿದ ಅವರು; ರಾಷ್ಟ್ರೀಯ ಮತ್ತು ರಾಜ್ಯಾಧ್ಯಕ್ಷರ ನಿರ್ದೇಶನದ ಮೇರೆಗೆ ಎಲ್ಲಾ ವಾರ್ಡುಗಳಲ್ಲಿ ಅಭ್ಯರ್ಥಿಗಳನ್ನು ಅದಷ್ಟು ಬೇಗ ಗುರುತಿಸಬೇಕು. ಸಂಘಟನಾ ಶಕ್ತಿ ಹಾಗೂ ಗೆಲುವಿನ ಮಾನದಂಡ ಮುಖ್ಯ ಆಗಿರುತ್ತದೆ. ಈ ಬಗ್ಗೆ ವರಿಷ್ಠರು ಸ್ಪಷ್ಟ ಸೂಚನೆ ನೀಡಿದ್ದಾರೆ ಎಂದು ಹೇಳಿದರು.

ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರಬೇಕು. ಅದುವೇ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರ ಸಂಕಲ್ಪ ಆಗಿದೆ. ಮೈತ್ರಿಯನ್ನು ಗಮನದಲ್ಲಿಟ್ಟುಕೊಂಡು, ಅದಕ್ಕೆ ಯಾವುದೇ ಚ್ಯುತಿ ಬರದಂತೆ ಎಲ್ಲರೂ ಅವರವರ ವಾರ್ಡುಗಳಲ್ಲಿ ಕೆಲಸ ಮಾಡಬೇಕು ಎಂದು ಅವರು ಸೂಚಿಸಿದರು.

ಅಲ್ಲದೆ, ಮತ್ತಗಟ್ಟೆ ಹಾಗೂ ವಾರ್ಡು ಮಟ್ಟದಲ್ಲಿ ಸದಸ್ಯತ್ವ ನೋಂದಣಿ ಅಭಿಯಾನವನ್ನು ಚುರುಕು ಮಾಡಬೇಕು. ಸಕ್ರಿಯ ಕಾರ್ಯಕರ್ತರನ್ನು ಮುನ್ನೆಲೆಗೆ ತರಬೇಕು. ಶೀಘ್ರದಲ್ಲಿ ಬೆಂಗಳೂರು ನಗರದಲ್ಲಿ ಬೃಹತ್ ಸಮಾವೇಶ ಮಾಡುವ ಚಿಂತನೆ ವರಿಷ್ಠರು ಹೊಂದಿದ್ದು, ಆ ಸಮಾವೇಶವನ್ನು ಯಶಸ್ವಿಗೊಳಿಸಲು ಪರಿಯೊಬ್ಬರು ಶ್ರಮಿಸಬೇಕು ಎಂದು ಅವರು ಕೋರಿದರು.

ಜಿಬಿಎ ಐದು ವಿಭಾಗಗಳ ಅಧ್ಯಕ್ಷರು ಹಾಗೂ ಎಲ್ಲಾ ವಿಧಾನಸಭೆ ಕ್ಷೇತ್ರಗಳ ಅಧ್ಯಕ್ಷರು ಪರಸ್ಪರ ಅನ್ವಯತೆಯಿಂದ ಕೆಲಸ ಮಾಡಬೇಕು ಎಂದು ಸೋಮವಾರ ನಡೆದ ಸಭೆಯಲ್ಲಿ ರಾಜ್ಯಾಧ್ಯಕರು ತಾಕೀತು ಮಾಡಿದ್ದಾರೆ. ಒಮ್ಮತ, ಒಗ್ಗಟಿನಲ್ಲಿ ಬಲವಿದೆ ಎನ್ನುವುದನ್ನು ಮರೆಯಬಾರದು. ಬೆಂಗಳೂರು ನಗರದ ಅಭಿವೃದ್ಧಿಗೆ ದೇವೇಗೌಡರು, ಕುಮಾರಸ್ವಾಮಿ ಅವರ ಕೊಡುಗೆ ಬಹಳಷ್ಟಿದೆ. ಜನತೆಗೆ ಈ ಎಲ್ಲಾ ಮಾಹಿತಿ ಕೊಡಬೇಕು. ಪಕ್ಷದ ಸಾಧನೆಗಳನ್ನು ವಿನಮ್ರವಾಗಿ ಜನತೆಯ ಗಮನಕ್ಕೆ ತನ್ನಿ ಎಂದು ಅವರು ಹೇಳಿದರು.

ಸಭೆಯಲ್ಲಿ ಬೆಂಗಳೂರು ಉತ್ತರ ನಗರ ಜಿಲ್ಲೆಯ ಅಧ್ಯಕ್ಷರು ಹಾಗೂ ಮಾಜಿ ಶಾಸಕ ಇ. ಕೃಷ್ಣಪ್ಪ, ಮಾಜಿ ಶಾಸಕರಾದ ಕೆ.ಎ. ತಿಪ್ಪೇಸ್ವಾಮಿ, ಪೂರ್ವ ನಗರ ಜಿಲ್ಲೆಯ ಅಧ್ಯಕ್ಷ ನಟರಾಜ್ ಗಂಗಾಧರ್, ಗ್ರೇಟರ್ ಬೆಂಗಳೂರು ಮಹಿಳಾ ಅಧ್ಯಕ್ಷೆ ಶೈಲಾ ಸಂತೋಜಿ ರಾವ್ ಸೇರಿ ಅನೇಕ ಪ್ರಮುಖರು ಸಭೆಯಲ್ಲಿ ಹಾಜರಿದ್ದರು.

ಶಿವಮೊಗ್ಗ: ಸೊರಬದ ಉಳವಿ ಕೆರೆ ಬಳಿಯ ‘ಅವೈಜ್ಞಾನಿಕ ಹಂಪ್ಸ್’ನಿಂದ ಬೈಕ್ ಸವಾರರು ಬಿದ್ದು ಗಾಯ

‘ಮಗುವಿನ ದೇಹದ ಮೇಲೆ ನಡೆಯುವ ಯಾವುದೇ ರೀತಿಯ ಲೈಂಗಿಕ ಅತಿಕ್ರಮಣ ಅತ್ಯಾಚಾರ’: ಕೇರಳ ಹೈಕೋರ್ಟ್ ಮಹತ್ವದ ತೀರ್ಪು

Share. Facebook Twitter LinkedIn WhatsApp Email

Related Posts

ರಾಜ್ಯದಲಲ್ಲೂಂದು ಘೋರ ಘಟನೆ: ನಂಬಿಸಿ ಹಣ ಪಡೆದವ ಕೈಕೊಟ್ಟಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

ಭಾರತದಲ್ಲಿ ನಕ್ಸಲ್ ಚಟುವಟಿಕೆಗೆ ವಿದೇಶದಿಂದ ಫಂಡಿಂಗ್ ಆರೋಪ: ಬೆಂಗಳೂರಿನ ನಿವಾಸಿ ಸೇರಿದಂತೆ 7 ಆರೋಪಿಗಳ ವಿರುದ್ಧ FIR ದಾಖಲು

2 Mins Read

BIG NEWS: ಬೆಂಗಳೂರು ಅಭಿವೃದ್ಧಿ ಖಾತೆ ಸ್ವೀಕರಿಸಲು ಕೃಷ್ಣ ಬೈರೇಗೌಡ ಹಿಂದೇಟು: ಸರ್ಕಾರಿ ಕಾರು ಬಿಟ್ಟು ಖಾಸಗಿ ಕಾರಿನಲ್ಲೇ ಸಚಿವರ ಓಡಾಟ!

2 Mins Read
Recent News

​ಒಮಾನ್ ಕರಾವಳಿ ಬಳಿ ಮತ್ತೊಂದು ಭಾರತೀಯ ಹಡಗಿನ ಮೇಲೆ ದಾಳಿ ನಡೆದಿದೆ ಎಂಬ ವರದಿಗಳು ‘ಸುಳ್ಳು’: ಕೇಂದ್ರ ಸರ್ಕಾರ ಸ್ಪಷ್ಟನೆ

NEET ಮರುಪರೀಕ್ಷೆ: ಅಕ್ರಮ ಎಸಗಿದರೆ ಕಠಿಣ ಕಾನೂನು ಕ್ರಮ ಎದುರಿಸಬೇಕಾದೀತು: ಕೇಂದ್ರ ಸರ್ಕಾರ ಎಚ್ಚರಿಕೆ

ಜಿ-7 ಶೃಂಗಸಭೆ: ಫ್ರಾನ್ಸ್, ಸ್ಲೋವಾಕಿಯಾಗೆ ಪ್ರಧಾನಿ ಮೋದಿ ಐತಿಹಾಸಿಕ ಪ್ರವಾಸ ಆರಂಭ

​ತರಬೇತುದಾರ ಜಸ್ಪಾಲ್ ರಾಣಾ ನಿಧನಕ್ಕೆ ಕಣ್ಣೀರಿಟ್ಟ ಒಲಿಂಪಿಕ್ ಪದಕ ವಿಜೇತೆ ಮನು ಭಾಕರ್

State News
KARNATAKA

ರಾಜ್ಯದಲಲ್ಲೂಂದು ಘೋರ ಘಟನೆ: ನಂಬಿಸಿ ಹಣ ಪಡೆದವ ಕೈಕೊಟ್ಟಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಕಾರವಾರ: ಕಾಲೇಜು ಶುಲ್ಕ ಪಾವತಿಸಲು ತಂದೆ ಕೊಟ್ಟಿದ್ದ ಹಣವನ್ನು ಪರಿಚಯಸ್ಥನಿಗೆ ಸಾಲವಾಗಿ ನೀಡಿ, ಆತ ಹಣವನ್ನು ಸಕಾಲದಲ್ಲಿ ಮರಳಿ ನೀಡದ…

ಭಾರತದಲ್ಲಿ ನಕ್ಸಲ್ ಚಟುವಟಿಕೆಗೆ ವಿದೇಶದಿಂದ ಫಂಡಿಂಗ್ ಆರೋಪ: ಬೆಂಗಳೂರಿನ ನಿವಾಸಿ ಸೇರಿದಂತೆ 7 ಆರೋಪಿಗಳ ವಿರುದ್ಧ FIR ದಾಖಲು

BIG NEWS: ಬೆಂಗಳೂರು ಅಭಿವೃದ್ಧಿ ಖಾತೆ ಸ್ವೀಕರಿಸಲು ಕೃಷ್ಣ ಬೈರೇಗೌಡ ಹಿಂದೇಟು: ಸರ್ಕಾರಿ ಕಾರು ಬಿಟ್ಟು ಖಾಸಗಿ ಕಾರಿನಲ್ಲೇ ಸಚಿವರ ಓಡಾಟ!

ನಿಮ್ಮ ಮನಸ್ಸಿನಲ್ಲಿರುವ ಎಲ್ಲಾ ಆಸೆಗಳು ಈಡೇರಲು ಪ್ರತಿದಿನ 30 ಸೆಕೆಂಡ್ ಈ ಚಿತ್ರ ವೀಕ್ಷಿಸಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.