ಆಂಧ್ರಪ್ರದೇಶ : ಆಂಧ್ರಪ್ರದೇಶದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಚಿತ್ತೂರು ಜಿಲ್ಲೆಯಲ್ಲಿ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕರ್ನಾಟಕದ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ಹೌದು ಬೆಂಗಳೂರಿನಿಂದ ತಿರುಪತಿಗೆ ಕಾರು ತೆರಳುತ್ತಿತ್ತು.ಈ ವೇಳೆ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಇದ್ದ ಐದು ಜನ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಬೆಂಗಳೂರು ಮೂಲದ ಐದು ಜನ ಸಾವನ್ನಪ್ಪಿದ್ದಾರೆ.
ಮೃತರ ಬಗ್ಗೆ ಇನ್ನೂ ಸ್ಪಷ್ಟವಾದ ಮಹಿತಿ ಇಲ್ಲ. ಆದರೆ ಕರ್ನಾಟಕದವರು ಎನ್ನುವುದು ಮಾತ್ರ ಸ್ಪಷ್ಟವಾಗಿದೆ. ಚಿತ್ತುರಿನ ಪಲಮನೇರು ಬಳಿ ಈ ಒಂದು ಅಪಘಾತ ಸಂಭವಿಸಿದೆ. ಪಲಮನೆರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.a








