ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ದರ್ಶನ್ ಗೆಳತಿ ಪವಿತ್ರಗೌಡಗೆ ಜೈಲುಟವೇ ಗತಿಯಾಗಿದೆ. ಮನೆ ಊಟಕ್ಕೆ ಬೇಡಿಕೆ ಇಟ್ಟು ಅರ್ಜಿ ಸಲ್ಲಿಸಿದ್ದರು ಆದರೆ ಹೈಕೋರ್ಟ್ ಇದೀಗ ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್ ನೀಡಿದ್ದ ಆದೇಶವನ್ನು ರದ್ದುಗೊಳಿಸಿದೆ.
ಹೌದು ಪವಿತ್ರಗೌಡ, ಲಕ್ಷ್ಮಣ ಮತ್ತು ನಾಗರಾಜಗೆ ಮನೆ ಊಟ ಕುರಿತು ಪ್ರಶ್ನಿಸಿ ಒಂದು ಅರ್ಜಿ ಸಲ್ಲಿಸಲಾಗಿತ್ತು. ವೈದ್ಯಕೀಯ ಸಲಹೆ ಇದ್ದರೆ ಮಾತ್ರ ಮನೆ ಊಟಕ್ಕೆ ಅವಕಾಶ ಇದೇ. ಕೈದಿ ಕೇಳಿದ ಕೂಡಲೇ ಮನೆ ಊಟ ಒದಗಿಸಲು ಅವಕಾಶ ಇಲ್ಲ ಎಂದು ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇನ್ನು ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್ ನೀಡಿದ ಆದೇಶವನ್ನು ಹೈಕೋರ್ಟ್ ಇದೀಗ ರದ್ದುಪಡಿಸಿದೆ. ಹಾಗಾಗಿ ದರ್ಶನ್ ಮತ್ತು ಗ್ಯಾಂಗ್ ಗೆ ಇದೀಗ ಜೈಲೂಟವೇ ಗತಿಯಾಗಿದೆ.








