ಚಾಮರಾಜನಗರ : ಚಾಮರಾಜನಗರ ಜಿಲ್ಲೆಯಲ್ಲಿ ಕಾವೇರಿ ನದಿಗೆ ಹಾರಿ ಮಹಿಳೆ ಒಬ್ರು ಆತ್ಮಹತ್ಯೆಗೆ ಶರಣಾಗಿದ್ದಾರೆ, ಕೌಟುಂಬಿಕ ಕಲಹದಿಂದ ಅಭ್ಯಾಸದ ಮಹಿಳೆ ಇದೀಗ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.
ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಹ್ಯಾಂಡ್ ಪೋಸ್ಟ್ ಬಳಿ, ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ರಶ್ಮಿ (39) ಎಂದು ಗುರುತಿಸಲಾಗಿದೆ. ಈಕೆ ಪತಿ ಲೋಕೇಶ್ ಹಾಗೂ ಮಕ್ಕಳ ಜೊತೆ ಬೆಂಗಳೂರಿನಲ್ಲಿ ನೆಲೆಸಿದ್ದಳು. ಸಂಸಾರದ ವಿಚಾರದಲ್ಲಿ ಬೇಸತ್ತು ವೆಸ್ಲಿ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಈ ಕುರಿತು ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








