ಗದಗ : ಗದಗದಲ್ಲಿ ಭೀಕರವಾದ ಅಪಘಾತ ಸಭವಿಸಿದ್ದು, ಗೂಡ್ಸ್ ವಾಹನ ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಎಂಟು ಜನರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಗದಗ ತಾಲೂಕಿನ ಹರ್ತಿ ಬಳಿ ನಡೆದ ಘಟನೆ ನಡೆದಿದೆ. ಮುತ್ತಪ್ಪ ಸುಟಗೇರಿ (35), ನಿಂಗಪ್ಪ ಯಳವತ್ತಿ (36) ಮೃತ ದುರ್ದೈವಿಗಳು. ಗಂಭೀರ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತ ಹಾಗೂ ಗಾಯಾಳುಗಳು ಗದಗ ತಾಲೂಕಿನ ಹಿರೇಕೊಪ್ಪ ಗ್ರಾಮಸ್ಥರು.
ಒಟ್ಟು ಹತ್ತು ಮಂದಿ ಗೋಜನೂರು ಕಾಮಣ್ಣ ಮೆರವಣಿಗೆ ನೋಡಲು ಹೋಗಿದ್ದರು. ಗೋಜನೂರಿನಿಂದ ಹಿರೇಕೊಪ್ಪಕ್ಕೆ ಬರುವ ವೇಳೆ ವಾಹನ ಮರಕ್ಕೆ ಡಿಕ್ಕಿ ಹೊಡೆದಿದೆ. ಚಾಲಕನ ಅಜಾಗರೂಕತೆಯಿಂದ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








