ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ತಮ್ಮ ವೃತ್ತಿಜೀವನದ 17ನೇ ಬಜೆಟ್ ಮಂಡಿಸಿ ಹೊಸ ದಾಖಲೆ ಬರೆಯಲಿದ್ದಾರೆ. ಈ ಐತಿಹಾಸಿಕ ಕ್ಷಣವನ್ನು ಸಂಭ್ರಮಿಸಲು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಖ್ಯಮಂತ್ರಿಗಳ ಬೃಹತ್ ರಂಗೋಲಿ ಭಾವಚಿತ್ರವನ್ನು ಬಿಡಿಸುವ ಮೂಲಕ ವಿಶಿಷ್ಟವಾಗಿ ಗೌರವ ಸಲ್ಲಿಸಲಾಗಿದೆ.
ಮೈಸೂರಿನ ಪ್ರಸಿದ್ಧ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಸುಮಾರು 8 ಸಾವಿರ ಚದರ ಅಡಿ ವಿಸ್ತೀರ್ಣದಲ್ಲಿ ಈ ರಂಗೋಲಿ ಕಲಾಕೃತಿ ಮೂಡಿಬಂದಿದೆ. ಕರ್ನಾಟಕದ ಭೂಪಟದ ನಡುವೆ ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ಮುಂಗಡಪತ್ರವನ್ನು ಕೈಯಲ್ಲಿ ಹಿಡಿದಿರುವ ಚಿತ್ರಣವು ನೋಡುಗರ ಗಮನ ಸೆಳೆಯುತ್ತಿದೆ.
ಯತೀಂದ್ರ ಯುವ ಬ್ರಿಗೇಡ್ ವತಿಯಿಂದ ಈ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಖ್ಯಾತ ಕಲಾವಿದ ಪುನೀತ್ ಅವರ ಕೈಚಳಕದಲ್ಲಿ ಈ ಸುಂದರ ರಂಗೋಲಿ ಅರಳಿದೆ. ಮುಖ್ಯಮಂತ್ರಿಗಳ ತವರು ಜಿಲ್ಲೆಯ ಅಭಿಮಾನಿಗಳು ತಮ್ಮ ನಾಯಕನ ಈ ಮಹತ್ವದ ಮೈಲಿಗಲ್ಲನ್ನು ಕಲಾತ್ಮಕವಾಗಿ ಆಚರಿಸುತ್ತಿದ್ದಾರೆ. ನಾಳಿನ ಬಜೆಟ್ ಮಂಡನೆಗೂ ಮುನ್ನವೇ ಈ ಬೃಹತ್ ರಂಗೋಲಿ ಚಿತ್ರವು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ಪ್ರವಾಸಿಗರು ಮತ್ತು ಸಾರ್ವಜನಿಕರು ಕುತೂಹಲದಿಂದ ವೀಕ್ಷಿಸುತ್ತಿದ್ದಾರೆ.
ರಾಜ್ಯದ ‘ಸರ್ಕಾರಿ PU ಕಾಲೇಜು ವಿದ್ಯಾರ್ಥಿ’ಗಳಿಗೆ ಸಿಹಿಸುದ್ದಿ: ಮುಂದಿನ ವರ್ಷದಿಂದ ಉಚಿತವಾಗಿ ‘ಪಠ್ಯಪುಸ್ತಕ’ ವಿತರಣೆ
SSLC, PUC ಪಾಸಾಗಲು ಎಷ್ಟು ಅಂಕ ಪಡೆಯಬೇಕು? ಇಲ್ಲಿದೆ ಮಂಡಳಿಯ ಅಧಿಕೃತ ಮಾಹಿತಿ








