ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವರ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಕುರಿತಂತೆ ನಡೆದಂತ ಚರ್ಚೆಯು ಅಪೂರ್ಣಗೊಂಡಿದೆ. ಹೀಗಾಗಿ ಮುಂದಿನ ಸಂಪುಟ ಸಭೆಯಲ್ಲಿ ಮತ್ತೊಮ್ಮೆ ಚರ್ಚಿಸಿ ನಿರ್ಧಾರವನ್ನು ಕೈಗೊಳ್ಳೋದಕ್ಕೆ ನಿರ್ಧರಿಸಲಾಗಿದೆ ಎಂಬುದಾಗಿ ತಿಳಿದು ಬಂದಿದೆ.
ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ರಾಜ್ಯ ಬಜೆಟ್ ಅಧಿವೇಶನ ಸೇರಿದಂತೆ ಇತರೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆಯನ್ನು ನಡೆಸಲಾಯಿತು. ಅಲ್ಲದೇ ಎಸ್ಸಿ, ಎಸ್ಟಿ ಸಮುದಾಯದವರಿಗೆ ಒಳ ಮೀಸಲಾತಿ ಕಲ್ಪಿಸುವ ಕುರಿತಂತೆಯೂ ಚರ್ಚೆ ನಡೆಸಲಾಯಿತು.
ರಾಜ್ಯ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಕುರಿತ ಚರ್ಚೆಯ ವೇಳೆಯಲ್ಲಿ ಸಹಮತವು ಸಂಪುಟದ ಸಹೋದ್ಯೋಗಿಗಳಲ್ಲಿ ಮೂಡಿಲ್ಲ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಮತ್ತೊಮ್ಮೆ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಜಾರಿ ಸಂಬಂಧ ಚರ್ಚೆ ನಡೆಸೋದಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ಹೀಗಾಗಿ ಎಸ್ಸಿ, ಎಸ್ಟಿ ಸಮುದಾಯದವರಿಗೆ ಒಳ ಮೀಸಲಾತಿ ಜಾರಿಯ ನಿರ್ಧಾರ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಆಗಿಲ್ಲ.
ಒಳ ಮೀಸಲಾತಿ ವಿಚಾರವಾಗಿ ಉಂಟಾಗಿರುವ ಗೊಂದಲ ನಿವಾರಿಸಲು ತೀರ್ಮಾನಿಸಲಾಗಿದೆ. ದಲಿತ ವರ್ಗದ ಮೂರು ಗುಂಪುಗಳಿಗೆ ಸಮಾನ ಅವಕಾಶ ಒದಗಿಸಲು ಒಳ ಮೀಸಲಾತಿ ಜಾರಿಯ ವೇಳೆ ರೋಸ್ಟರ್ ಬಿಂದು ಮರು ನಿಗದಿಗೆ ಸರ್ಕಾರ ಒಲವು ತೋರಿದೆ. ಇದಕ್ಕಾಗಿ ತಾಂತ್ರಿಕ ಸಮಿತಿ ರಚಿಸಲು ಮುಂದಾಗಿದ್ದು, ಸಂಪುಟ ಸಭೆಯಲ್ಲಿ ಈ ವಿಚಾರವಾಗಿ ಚರ್ಚೆ ನಡೆದಿದೆ. ದಲಿತ ಸಮುದಾಯದ ಎಡಗೈ, ಬಲಗೈ, ಸ್ಪೃಶ್ಯ ವರ್ಗಗಳ ಸಚಿವರಿಂದ ಭಿನ್ನಾಭಿಪ್ರಾಯ ವ್ಯಕ್ತವಾಗಿದೆ. ರೋಸ್ಟರ್ ಬಿಂದು ಜಾರಿ ಮಾಡಿದರೆ ಬಲಗೈಗೆ ಅನ್ಯಾಯವಾಗುತ್ತದೆ ಎಂದು ಆಕ್ಷೇಪ ವ್ಯಕ್ತವಾಗಿದೆ. ಒಮ್ಮತ ಮೂಡದ ಕಾರಣ ಚರ್ಚೆ ಅಪೂರ್ಣವಾಗಿದ್ದು, ವಿಶೇಷ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲು ತೀರ್ಮಾನ ಕೈಗೊಳ್ಳಲಾಗಿದೆ.








