ಬೆಂಗಳೂರು : ಸಿಎಂ ಸಿದ್ದರಾಮಯ್ಯ ಇಂದು 2026-27ನೇ ಸಾಲಿನ ಬಜೆಟ್ ಮಂಡಿಸಿದ್ದು, ಇದು ಸಿದ್ದರಾಮಯ್ಯ ಮಂಡಿಸಿದ 17ನೇ ದಾಖಲೆಯ ಬಜೆಟ್ ಆಗಿದೆ. ಈ ಬಜೆಟ್ ಬಾರಿ ಬಜೆಟ್ನಲ್ಲಿ ರಾಜ್ಯಕ್ಕೆ ಹಲವು ಹೊಸ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.
ರಾಮನಗರ, ಶಿಡ್ಲಘಟ್ಟ, ಹಾವೇರಿ, ತಾಂಡವಪುರ (ಮೈಸೂರು) ಹಾಗೂ ಕಲಬುರಗಿಯಲ್ಲಿ ಸಿಲ್ಕ್ ಪಾರ್ಕ್‌ಗಳ ಸ್ಥಾಪನೆ ಮಾಡಲಾಗುವುದು ಎಂದರು.ಮಹಿಳೆಯರು ಹಾಗೂ ಮಕ್ಕಳಿಗೆ ಸಂಕಷ್ಟದ ಸಂದರ್ಭದಲ್ಲಿ ತಕ್ಷಣದ ರಕ್ಷಣೆ ನೀಡುವ ಉದ್ದೇಶದಿಂದ ʻಅಕ್ಕಪಡೆ ಯೋಜನೆʼಯನ್ನು ಗೃಹ ಇಲಾಖೆಯ ಸಹಯೋಗದೊಂದಿಗೆ ಎಲ್ಲಾ ಜಿಲ್ಲೆಗಳಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ.
ಅರಣ್ಯ ಮತ್ತು ಅರಣ್ಯದಂಚಿನಲ್ಲಿ ವಾಸಿಸುತ್ತಿರುವ ಇರುಳ, ಸೋಲಿಗ, ಜೇನುಕುರುಬ, ಕಾಡುಕುರುಬ, ಕುಡಿಯ, ಸಿದ್ದಿ ಮತ್ತು ಇತರೆ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪರಿಶಿಷ್ಟ ಪಂಗಡದ ಪಿವಿಟಿಜಿಗಳಿಗೆ ʻಕರ್ನಾಟಕ ಆದಿವಾಸಿ ಅಭಿವೃದ್ಧಿ ನಿಗಮʼವನ್ನು ಸ್ಥಾಪಿಸಲಾಗುವುದು. ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಕೌಶಲ್ಯಾಧಾರಿತ ಉದ್ಯೋಗ ದೊರಕಿಸಿಕೊಡುವ ಉದ್ದೇಶದಿಂದ ಆನ್‌ಲೈನ್ ಉದ್ಯೋಗ ವಿನಿಮಯ ಕೇಂದ್ರವನ್ನು ಸ್ಥಾಪಿಸುವ ʻಕಾಯಕ ಭಾಗ್ಯʼ ಎಂಬ ಯೋಜನೆಯನ್ನು ಐದು ಕೋಟಿ ರೂ. ವೆಚ್ಚದಲ್ಲಿ ಜಾರಿಗೆ ತರಲಾಗುವುದು.
ಕೆಐಎಡಿಬಿ ಏರೋಸ್ಪೇಸ್ ಪಾರ್ಕ್‌ನಲ್ಲಿ ಏರೋಸ್ಪೇಸ್ ಕಾಮನ್ ಫೆಸಿಲಿಟಿ ಸೆಂಟರ್ ಅನ್ನು 30 ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಲಾಗುವುದು. ಮೈಸೂರಿನಲ್ಲಿ ಏರೋಸ್ಪೇಸ್ ಕೈಗಾರಿಕೆಗಳನ್ನು ಉತ್ತೇಜಿಸಲು ಮೈಸೂರು ವಿಮಾನ ನಿಲ್ದಾಣದ ಹತ್ತಿರದಲ್ಲಿ ಏರೋಸ್ಪೇಸ್ ಪಾರ್ಕ್ ಅನ್ನು ಕೆಐಎಡಿಪಿ ವತಿಯಿಂದ ಅಭಿವೃದ್ಧಿಪಡಿಸಲಾಗುವುದು ಎಂದರು






