ಬೆಂಗಳೂರು : ಹೈಕಮಾಂಡ್ ಹೇಳುವವರೆಗೂ ಬಜೆಟ್ ಮಂಡಿಸುತ್ತಾನೆ ಇರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಮೂಲಕ ಬಜೆಟ್ ಅಧಿವೇಶನದ ಬಳಿಕ ನಾಯಕತ್ವ ಬದಲಾವಣೆ ಚರ್ಚೆ ಹೊತ್ತಿನಲ್ಲಿ ಸಿಎಂ ಸಿದ್ದರಾಮಯ್ಯ ಅವರ ಈ ಒಂದು ಹೇಳಿಕೆ ಮತ್ತೆ ಕಿಚ್ಚು ಹೊತ್ತಿಸಿದೆ.
ಬಜೆಟ್ ಬಳಿಕ ರಾಜ್ಯ ಕಾಂಗ್ರೆಸ್ ನಾಯಕತ್ವದಲ್ಲಿ ಬದಲಾವಣೆ ಆಗಲಿದೆ ಎಂಬ ಚರ್ಚೆಗಳು ನಡೆಯುತ್ತಿವೆ. ಆದರೆ ಸಿಎಂ ಸಿದದರಾಮಯ್ಯ ಆಪ್ತರು ಐದು ವರ್ಷ ಸಿದ್ದರಾಮಯ್ಯ ಅವರೇ ಅಧಿಕಾರದಲ್ಲಿ ಇರುತ್ತಾರೆ ಎನ್ನುತ್ತಿದ್ದಾರೆ. ಮತ್ತೊಂದು ಕಡೆಯಲ್ಲಿ ಡಿಕೆ ಶಿವಕುಮಾರ್ ಬೆಂಬಲಿಗರು ಅಧಿಕಾರ ಹಸ್ತಾಂತರದ ಮಾತನ್ನು ಆಡುತ್ತಿದ್ದಾರೆ. ಈ ಎಲ್ಲಾ ಬೆಳವಣಿಗೆ ನಡುವೆ ಪತ್ರಿಕಾಗೋಷ್ಠಿಯಲ್ಲಿ ಸಿದ್ದರಾಮಯ್ಯ ಹೇಳಿರುವ ಮಾತು ಕುತೂಹಲಕ್ಕೆ ಕಾರಣವಾಗಿದೆ.
ಈ ಬಾರಿ ಬಜೆಟ್ ನಲ್ಲಿ ಖಾಲಿ ಹುದ್ದೇಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುದೆಂದು ತಿಳಿಸಲಾಗಿದೆ. ಕಾರಣಾಂತರಗಳಿಂದ ವಿಳಂಬಗಳಾಗಿದ್ದು, ಈ ವರ್ಷ 56432 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಬಜೆಟ್ ನಲ್ಲಿ ಘೋಷಣೆ ಮಾಡಲಾಗಿದೆ. ವಿಳಂಬವಾಗಿದ್ದರ ಕಾರಣ, ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆಯನ್ನು ನೀಡಲಾಗಿದೆ ಎಂದರು.








