ಮೈಸೂರು: ಭಾರತದ ವಿತ್ತೀಯ ಕೊರತೆ 4.4 ರಷ್ಟಿದ್ದು, ಕರ್ನಾಟಕ ರಾಜ್ಯದ ವಿತ್ತೀಯ ಕೊರತೆ 2.95 ರಷ್ಟಿದ್ದು, ಕಾಯ್ದೆಯು ಸೂಚಿಸಿರುವ ಜಿಡಿಪಿಯ ಶೇ. 3 ರ ಮಿತಿಯೊಳಗೆ ಇದೆ. ಕರ್ನಾಟಕದ ಜಿಡಿಪಿ 33,05,500 ಕೋಟಿ ಇದೆ. ಬಿಜೆಪಿಯವರು , ಸರ್ಕಾರ ಹೆಚ್ಚು ಸಾಲ ಮಾಡಿದೆ ಎನ್ನುವುದು ಸತ್ಯಕ್ಕೆ ದೂರವಾದ ಮಾತು ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಸ್ಪಷ್ಟ ಪಡಿಸಿದ್ದಾರೆ.
ಅವರು ಇಂದು ಪಿಲ್ಲಹಳ್ಳಿ ಗ್ರಾಮದ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಬಿಜೆಪಿಯವರು ಬಜೆಟ್ ಬಗ್ಗೆ ಟೀಕೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಬಿಜೆಪಿಯ ಪ್ರಧಾನಿ ಮೋದಿಯವರು ಸಾಲ ಮಾಡಿದ್ದಾರೆ. ಸಾಲ ಮಾಡದೇ ಅಭಿವೃದ್ಧಿ ಸಾಧ್ಯವಿಲ್ಲ. ಆರ್ಥಿಕ ಹೊಣೆಗಾರಿಕೆ ಕಾಯ್ದೆ ತಿಳಿಸಿರುವ ಮಾನದಂಡಗಳ ಮಿತಿಯಲ್ಲಿ ಸಾಲದ ಪ್ರಮಾಣ ಇದೆ. ಈ ಕಾಯ್ದೆಯಂತೆ ಸಾಲವು ಶೇ. 25 ರಷ್ಟಿರಬೇಕಿದ್ದು, ನಮ್ಮ ಸಾಲದ ಪ್ರಮಾಣ 24.94 ಇದ್ದು, ಮಿತಿಯೊಳಗೇ ಇದೆ. ಕೇಂದ್ರದ ಸಾಲದ ಪ್ರಮಾಣ 218 ಲಕ್ಷ ಕೋಟಿ ವಿದೆ. ಮೋದಿಯವರು ಅಧಿಕಾರಕ್ಕೆ ಬಂದ ನಂತರ 165 ಲಕ್ಷ ಕೋಟಿ ಸಾಲವನ್ನು ಮಾಡಿದ್ದಾರೆ. ಇದು ಸದರಿ ಕಾಯ್ದೆಯ ಪ್ರಕಾರ 55.6 % ರಷ್ಟು ಇದೆ ಎಂದರು.
ಭಾರತದ ವಿತ್ತೀಯ ಕೊರತೆ 4.4 ರಷ್ಟಿದ್ದು, ಕರ್ನಾಟಕ ರಾಜ್ಯದ ವಿತ್ತೀಯ ಕೊರತೆ 2.95 ರಷ್ಟಿದ್ದು, ಕಾಯ್ದೆಯು ಸೂಚಿಸಿರುವ ಜಿಡಿಪಿಯ ಶೇ. 3 ರ ಮಿತಿಯೊಳಗೆ ಇದೆ. ಕರ್ನಾಟಕದ ಜಿಡಿಪಿ 33,05,500 ಕೋಟಿ ಇದೆ. ಬಿಜೆಪಿಯವರು , ಸರ್ಕಾರ ಹೆಚ್ಚು ಸಾಲ ಮಾಡಿದೆ ಎನ್ನುವುದು ಸತ್ಯಕ್ಕೆ ದೂರವಾದ ಮಾತು. ಆರ್ಥಿಕ ಹೊಣೆಗಾರಿಕೆ ಕಾಯ್ದೆಯ ಸೂಚಿಸಿರುವ ಮಾನದಂಡದ ಮಿತಿಯೊಳಗೆ ಸಾಲ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ವಿವರಿಸಿದರು.
BREAKING : ಹೈಕಮಾಂಡ್ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್ ಮಂಡನೆ : 5 ವರ್ಷ ನಾನೇ CM ಎಂದ ಸಿದ್ದರಾಮಯ್ಯ
ಮೈಸೂರಿನಲ್ಲಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆ ಮುಚ್ಚುವುದಿಲ್ಲ : MLC ಯತೀಂದ್ರ ಸಿದ್ದರಾಮಯ್ಯ








