ಉತ್ತರ ಪ್ರದೇಶ: ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರು ಇಂದು ಸಂಭವಿಸಬಹುದಾಗಿದ್ದ ದೊಡ್ಡ ವಿಮಾನ ಅಪಘಾತದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಲಖನೌನಿಂದ ಕೌಶಂಬಿಗೆ ಹೊರಟಿದ್ದ ಅವರ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಲಖನೌನ ಅಮೌಸಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ.
ಉಪಮುಖ್ಯಮಂತ್ರಿ ಮೌರ್ಯ ಅವರು ಲಖನೌನ ಲಾ ಮಾರ್ಟ್ಸ್ (La Marts) ಮೈದಾನದಿಂದ ಕೌಶಂಬಿಗೆ ಪ್ರಯಾಣ ಬೆಳೆಸಿದ್ದರು. ಹೆಲಿಕಾಪ್ಟರ್ ಹಾರಾಟ ಆರಂಭಿಸಿದ ಕೆಲವೇ ನಿಮಿಷಗಳಲ್ಲಿ ಅದರ ಕ್ಯಾಬಿನ್‌ನಲ್ಲಿ ಹಠಾತ್ ಹೊಗೆ ಕಾಣಿಸಿಕೊಂಡಿದೆ. ಅಷ್ಟೇ ಅಲ್ಲದೆ, ಪೈಲಟ್ ಮುಂದಿನ ಡಿಸ್‌ಪ್ಲೇ ಪರದೆಯು ದಿಢೀರನೆ ಸ್ಥಗಿತಗೊಂಡಿದೆ.
ಹೆಲಿಕಾಪ್ಟರ್ ಒಳಗೆ ದಟ್ಟವಾದ ಹೊಗೆ ತುಂಬಿಕೊಂಡಿದ್ದರಿಂದ ಪ್ರಯಾಣಿಕರಲ್ಲಿ ಆತಂಕ ಮನೆಮಾಡಿತ್ತು. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಪೈಲಟ್, ಕೂಡಲೇ ಲಖನೌ ಎಟಿಸಿ (ATC) ಸಂಪರ್ಕಿಸಿ ತುರ್ತು ಭೂಸ್ಪರ್ಶಕ್ಕೆ ಅನುಮತಿ ಕೋರಿದರು. ಬಳಿಕ ಅತ್ಯಂತ ಸುರಕ್ಷಿತವಾಗಿ ಅಮೌಸಿ ವಿಮಾನ ನಿಲ್ದಾಣದಲ್ಲಿ ಹೆಲಿಕಾಪ್ಟರ್ ಇಳಿಸುವಲ್ಲಿ ಪೈಲಟ್ ಯಶಸ್ವಿಯಾಗಿದ್ದಾರೆ.
ಸರ್ಕಾರ ಹೆಚ್ಚು ಸಾಲ ಮಾಡಿದೆ ಎನ್ನುವುದು ಸತ್ಯಕ್ಕೆ ದೂರವಾದ ಮಾತು: ಸಿಎಂ ಸಿದ್ಧರಾಮಯ್ಯ
BREAKING : ಹೈಕಮಾಂಡ್ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್ ಮಂಡನೆ : 5 ವರ್ಷ ನಾನೇ CM ಎಂದ ಸಿದ್ದರಾಮಯ್ಯ








