Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರಲ್ಲಿ ಭೀಕರ ಅಪಘಾತ : ಲಾರಿಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಯುವಕರ ಸಾವು!

08/03/2026 8:08 AM

BREAKING : ಬೈಕ್ ವಿಚಾರವಾಗಿ ಗಲಾಟೆ : ಪ್ರೇಯಸಿ ಸೇರಿ ಮೂವರಿಗೆ, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಿಯಕರ!

08/03/2026 8:04 AM

ರೇಣುಕಾಸ್ವಾಮಿ ಕೊಲೆ ಕೇಸ್ : ಆರೋಪಿಗಳ ಜಾಮೀನು ರದ್ದು ಕೊರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ ರಾಜ್ಯ ಸರ್ಕಾರ

08/03/2026 7:58 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೈಕ್ ವಿಚಾರವಾಗಿ ಗಲಾಟೆ : ಪ್ರೇಯಸಿ ಸೇರಿ ಮೂವರಿಗೆ, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಿಯಕರ!
KARNATAKA

BREAKING : ಬೈಕ್ ವಿಚಾರವಾಗಿ ಗಲಾಟೆ : ಪ್ರೇಯಸಿ ಸೇರಿ ಮೂವರಿಗೆ, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಿಯಕರ!

By kannadanewsnow0508/03/2026 8:04 AM

ಬೆಂಗಳೂರು : ಬೆಂಗಳೂರಿನ ತರಬನಹಳ್ಳಿಯಲ್ಲಿ ಆಘಾತಕಾರಿ ಘಟನೆ ನಡೆದಿದೆ. ಕ್ಷುಲ್ಲಕ ಜಗಳ ವಿಕೋಪಕ್ಕೆ ಹೋಗಿ, ವ್ಯಕ್ತಿಯೋರ್ವ ತನ್ನ ಪ್ರೇಯಸಿ ಹಾಗೂ ಆಕೆಯ ಪೋಷಕರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ತರಬನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಆರೋಪಿಯ ಪ್ರೇಯಸಿ ಸುಮಲತಾ, ಆಕೆಯ ತಂದೆ ಶ್ರೀರಾಮ(48) ಹಾಗೂ ತಾಯಿ ಮಂಜಮ್ಮ(42) ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ಸಂಬಂಧ ಆರೋಪಿ ಪಾಂಡುರಂಗ(29)ನನ್ನು ಬಂಧಿಸಲಾಗಿದ್ದು, ಗಾಯಾಳುಗಳಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

4 ವರ್ಷದ ಹಿಂದೆ ಗಂಡನಿಂದ ದೂರವಾಗಿದ್ದ ಸುಮಲತಾ, ಯಶವಂತಪುರದ ಮೆಟ್ರೋದಲ್ಲಿ ಕೆಲಸ ಮಾಡುತ್ತಿದ್ದಳು. ಈ ನಡುವೆ ಇನ್ಸ್ಟಾಗ್ರಾಂನಲ್ಲಿ ಈಕೆಗೆ ಪಾಂಡುರಂಗನ ಪರಿಚಯವಾಗಿತ್ತು. ಬಳಿಕ ಆತನ ಜೊತೆಗೆ ಮನೆ ಬಿಟ್ಟು ಹೋಗಿದ್ದ ಸುಮಲತಾ, 4 ವರ್ಷದಿಂದ ಲೀವಿಂಗ್ ಇನ್ ರಿಲೇಷನ್​ಶಿಪ್​ನಲ್ಲಿದ್ದಳು. ಮಹಾಲಕ್ಷ್ಮೀ ಲೇಔಟ್​ನಲ್ಲಿ ಬಾಡಿಗೆ ಮನೆ ಮಾಡಿಕೊಂಡು ಇಬ್ಬರೂ ವಾಸವಿದ್ದರು.

ಆದರೆ, ಪಾಂಡುವಿನ ಜೊತೆಗೂ ವಿರಸ ಉಂಟಾಗಿ ಕಳೆದ ಎರಡು ತಿಂಗಳ‌ ಹಿಂದೆ ಆತನಿಂದಲೂ ಸುಮಲತಾ ದೂರವಾಗಿದ್ದಳು. ಈಕೆಯ ಜೊತೆ ಇದ್ದುಕೊಂಡೇ ಪಾಂಡುರಂಗ ಮತ್ತೊಂದು ಯುವತಿಯ ಸಹವಾಸ ಮಾಡಿದ್ದ ಕಾರಣ, ಗಲಾಟೆ ಮಾಡಿಕೊಂಡು ಈಕೆ ತಾಯಿ ಮನೆಯನ್ನು ಸೇರಿದ್ದಳು ಎನ್ನಲಾಗಿದೆ.

2 ದಿನಗಳ ಹಿಂದೆ ತರಬನಹಳ್ಳಿಯ ಸುಮಲತಾ ಮನೆ ಬಳಿ ಬಂದಿದ್ದ ಆರೋಪಿ ಪಾಡುರಂಗ ಸುಮಲತಾಳಿಗೆ ದ್ವಿಚಕ್ರ ವಾಹನ ಕೊಡು ಎಂದಿದ್ದ. ಈ ವೇಳೆ ಅದು ತನ್ನ ಅಕ್ಕನದ್ದು, ನಾನು ಕೊಡಲ್ಲ ಎಂದು ಸುಮಲತಾ ಹೇಳಿದ್ದಾಳೆ. ಇದರಿಂದ ಸಿಟ್ಟಿಗೆದ್ದ ಆರೋಪಿ ಗಲಾಟೆ ಮಾಡಿದ್ದಾನೆ. ಸುಮಲತಾ, ಆಕೆಯ ತಂದೆ ಮತ್ತು ತಾಯಿ ಮೂವರೂ ಈ ವೇಳೆ ಬೈದಿದ್ದಾರೆ.

ಹೀಗಾಗಿ ಇನ್ನಷ್ಟು ಕೋಪಗೊಂಡಿದ್ದ ಪಾಡುರಂಗ ಸ್ಥಳದಿಂದ ತೆರಳಿದ್ದು, ಸುಮಾರು ಅರ್ಧಗಂಟೆ ಬಳಿಕ ವಾಪಾಸ್​​ ಆಗಿದ್ದಾನೆ. ಮತ್ತೆ ಗಲಾಟೆ ಶುರುಮಾಡಿ ಸುಮಲತಾ ಮತ್ತು ಆಕೆಯ ಪೋಷಕರ ಮೇಲೆ ಪೆಟ್ರೋಲ್​​ ಸುರಿದು ಬೆಂಕಿ ಹಚ್ಚಿ, ಆಟೋದಲ್ಲಿ ಆರೋಪಿ ಪರಾರಿಯಾಗಿದ್ದಾನೆ. ಬೆಂಕಿಯಲ್ಲಿ ಸುಟ್ಟ ಮೂವರ ಸ್ಥಿತಿ ಗಂಭೀರವಾಗಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಸೋಲದೇವನಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಲ್ಲಿ ಭೀಕರ ಅಪಘಾತ : ಲಾರಿಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಯುವಕರ ಸಾವು!

08/03/2026 8:08 AM1 Min Read

ರೇಣುಕಾಸ್ವಾಮಿ ಕೊಲೆ ಕೇಸ್ : ಆರೋಪಿಗಳ ಜಾಮೀನು ರದ್ದು ಕೊರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ ರಾಜ್ಯ ಸರ್ಕಾರ

08/03/2026 7:58 AM1 Min Read

ಹೆಣ್ಣುಮಕ್ಕಳ ಪೋಷಕರಿಗೆ ಗರ್ಭಕಂಠದ ಕ್ಯಾನ್ಸರ್ ತಡೆಗೆ ‘HPV ಲಸಿಕೆ’ ಬಗ್ಗೆ ಮಹತ್ವದ ಮಾಹಿತಿ

08/03/2026 6:19 AM2 Mins Read
Recent News

BREAKING : ಬೆಂಗಳೂರಲ್ಲಿ ಭೀಕರ ಅಪಘಾತ : ಲಾರಿಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಯುವಕರ ಸಾವು!

08/03/2026 8:08 AM

BREAKING : ಬೈಕ್ ವಿಚಾರವಾಗಿ ಗಲಾಟೆ : ಪ್ರೇಯಸಿ ಸೇರಿ ಮೂವರಿಗೆ, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಿಯಕರ!

08/03/2026 8:04 AM

ರೇಣುಕಾಸ್ವಾಮಿ ಕೊಲೆ ಕೇಸ್ : ಆರೋಪಿಗಳ ಜಾಮೀನು ರದ್ದು ಕೊರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ ರಾಜ್ಯ ಸರ್ಕಾರ

08/03/2026 7:58 AM

ಟೆಹ್ರಾನ್ ತೈಲ ಡಿಪೋ ಮೇಲೆ ಇಸ್ರೇಲ್ ಅಟ್ಟಹಾಸ: ಬೆಂಕಿಯ ಕೆನ್ನಾಲಿಗೆಯ ನಡುವೆ ಅಮೆರಿಕ ಅಧ್ಯಕ್ಷ ಟ್ರಂಪ್ ನೀಡಿದ ‘ಬಾಂಬ್‌ಶೆಲ್’ ಹೇಳಿಕೆ ಏನು?

08/03/2026 7:45 AM
State News
KARNATAKA

BREAKING : ಬೆಂಗಳೂರಲ್ಲಿ ಭೀಕರ ಅಪಘಾತ : ಲಾರಿಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಯುವಕರ ಸಾವು!

By kannadanewsnow0508/03/2026 8:08 AM KARNATAKA 1 Min Read

ಬೆಂಗಳೂರು : ನಗರದ ಹೊರವಲಯದ ಅಗರ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿಗೆ ಕಾರು ಡಿಕ್ಕಿ ಹೊಡೆದ…

BREAKING : ಬೈಕ್ ವಿಚಾರವಾಗಿ ಗಲಾಟೆ : ಪ್ರೇಯಸಿ ಸೇರಿ ಮೂವರಿಗೆ, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಿಯಕರ!

08/03/2026 8:04 AM

ರೇಣುಕಾಸ್ವಾಮಿ ಕೊಲೆ ಕೇಸ್ : ಆರೋಪಿಗಳ ಜಾಮೀನು ರದ್ದು ಕೊರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ ರಾಜ್ಯ ಸರ್ಕಾರ

08/03/2026 7:58 AM

ಹೆಣ್ಣುಮಕ್ಕಳ ಪೋಷಕರಿಗೆ ಗರ್ಭಕಂಠದ ಕ್ಯಾನ್ಸರ್ ತಡೆಗೆ ‘HPV ಲಸಿಕೆ’ ಬಗ್ಗೆ ಮಹತ್ವದ ಮಾಹಿತಿ

08/03/2026 6:19 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.