ಬಳ್ಳಾರಿ : ಬಳ್ಳಾರಿ ಖಾಸಗಿ ಶಾಲೆಯ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಯ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 9ನೇ ತರಗತಿ ವಿದ್ಯಾರ್ಥಿಯಿಂದ ಹಲವರ ಮೇಲೆ ಹಲ್ಲೆ ನಡೆದಿದೆ. ಕಬ್ಬಿಣದ ಹಲೆ ನಡೆಸಿದ ಪರಿಣಾಮ ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಹಲ್ಲೆಯ ವೇಳೆ ಮಹಿಳಾ ವಾರ್ಡನ್ ಸೇರಿದಂತೆ 7 ವಿದ್ಯಾರ್ಥಿಗಳಿಗೆ ಗಾಯವಾಗಿದೆ ಎಂದು ಶಾಲಾ ಆಡಳಿತ ಮಂಡಳಿ ಹೇಳುತ್ತಿದೆ.
ಆದರೆ ಚಾಕುವಿನಿಂದ ಹಿಡಿದು ಕೊಲೆ ಮಾಡಿರುವ ಅನುಮಾನ ಇದೆ. ಹಲ್ಲು ನಡೆಸಿರುವ ವಿದ್ಯಾರ್ಥಿ ಡ್ರಗ್ ಅಡಿಕ್ಟ್ ಆಗಿರುವ ಶಂಕೆ ಇದೆ. ಇಲ್ಲವಾದರೆ ಅಷ್ಟು ಹುಡುಗರ ಮೇಲೆ ಹಲ್ಲೆ ಮಾಡೋದಕ್ಕೆ ಹೇಗೆ ಸಾಧ್ಯ? ಇದಕ್ಕೆಲ್ಲಾ ಶಾಲಾ ಆಡಳಿತ ಮಂಡಳಿಯೇ ನೇರ ಹೊಣೆಯಾಗಿದೆ. ಎಂದು ಶಾಲಾ ಆಡಳಿತ ಮಂಡಳಿ ವಿರುದ್ಧ ಮೃತ ಬಾಲಕನ ಪೋಷಕರು ಗಂಭೀರವಾಗಿ ಆರೋಪಿಸಿದ್ದಾರೆ.
ಪ್ರಕರಣ ಹಿನ್ನೆಲೆ?
ರಾತ್ರಿ ಊಟದ ಬಳಿಕ ಎಲ್ಲರೂ ಮಲಗಿಕೊಂಡ ಮೇಲೆ ವಿದ್ಯಾರ್ಥಿಯೋರ್ವ ಮಂಚದ ರಾಡ್ ತೆಗೆದುಕೊಂಡು ಸಿಕ್ಕಾಸಿಕ್ಕಾವರ ಮೇಲೆ ಹಲ್ಲೆ ಮಾಡಿದ್ದು, ಎಂಟು ವಿದ್ಯಾರ್ಥಿಗಳ ಮೇಲೆ ಮನಬಂದಂತೆ ಹಲ್ಲೆ ನಡೆಸಿದ ಪರಿಣಾಮ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಬಾಲಕನ ಈ ಹುಚ್ಚಾಟದಿಂದಾಗಿ 7 ಬಾಲಕರಿಗೆ ಗಂಭೀರ ಗಾಯಗಳಾಗಿದ್ದು, ಬಳ್ಳಾರಿ ಬಿಮ್ಸ್ ಮತ್ತು ಟ್ರಾಮಕೇರ್ ಆಸ್ಪತ್ರೆಗೆ ವಿದ್ಯಾರ್ಥಿಗಳನ್ನು ದಾಖಲು ಮಾಡಲಾಗಿದೆ
ಹಾಸ್ಟೆಲ್ನ ವಾರ್ಡನ್ ಮೇಲೂ ಬಾಲಕ ಹಲ್ಲೆ ಮಾಡಿದ್ದು,ಹಲ್ಲೆಯ ಬಳಿಕ ಆತ ಓಡಿ ಹೋಗಿದ್ದಾನೆ. ತಡರಾತ್ರಿ ಈ ಘಟನೆ ನಡೆದಿದ್ದು, ಮಕ್ಕಳ ಪೋಷಕರನ್ನು ಈ ಘಟನೆ ಬೆಚ್ಚಿ ಬೀಳಿಸಿದೆ. ಮಾಹಿತಿಯ ಪ್ರಕಾರ ಆರಂಭದಲ್ಲಿ ಕ್ಷುಲ್ಲಕ ಕಾರಣಕ್ಕೆ ಗಲಾಟೆಯಾಗಿದ್ದು, ಅದೇ ವಿಚಾರ ದೊಡ್ಡದು ಮಾಡಿದ ಒಂಬತ್ತನೇ ತರಗತಿ ಬಾಲಕನಿಂದ ಸಿಕ್ಕ ಸಿಕ್ಕ ವಿದ್ಯಾರ್ಥಿಗಳ ಮೇಲೆ ಭೀಕರವಾಗಿ ಹಲ್ಲೆ ಮಾಡಿದ್ದಾನೆ.
ಪರಿಣಾಮ ರಾಡ್ನಿಂದ ಬಿದ್ದ ಏಟಿಗೆ ಓರ್ವ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಹಾಸ್ಟೆಲ್ ವಾರ್ಡನ್ ಮೇಲೆಯೂ ಬಾಲಕ ಹಲ್ಲೆ ಮಾಡಿದ್ದು, ಗಾಯಾಳುಗಳೆಲ್ಲರೂ ಒಂಬತ್ತನೇ ತರಗತಿಯಲ್ಲಿ ಓದುತ್ತಿರುವ ಬಾಲಕರಾಗಿದ್ದಾರೆ. ಬಳ್ಳಾರಿ ಬ್ರೂಸ್ಪೇಟೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.








