ಬೆಂಗಳೂರು : ಬೆಂಗಳೂರಲ್ಲಿ ಹೈಕೋರ್ಟ್ ಜಡ್ಜ್ ಜಿ.ಬಸವರಾಜ್ ಅವರ ಕಾರು ಅಪಘಾತವಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ಜಿ.ಬಸವರಾಜ್ ಕಾರು ಅಪಘಾತ ಸಂಭವಿಸಿದೆ. ನೆಲಮಂಗಲ ತಾಲೂಕಿನ ರಾಯರ ಪಾಳ್ಯ ಬಳಿ ಈ ಒಂದು ಘಟನೆ ಸಂಭವಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ರಾಯರಪಾಳ್ಯ ಬಳಿ, ಕಾರಿನಲ್ಲಿದ್ದ ಹೈಕೋರ್ಟ್ ನ್ಯಾಯಮೂರ್ತಿ ಜಿ.ಬಸವರಾಜ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವ್ಯಕ್ತಿ ಅಡ್ಡ ಬಂದ ಹಿನ್ನೆಲೆ ಅವೈಡ್ ಮಾಡಲು ಹೋಗಿ ಪೊಲೀಸ್ ವಾಹನ ಡಿಕ್ಕಿ ಹೊಡೆದಿದೆ. ಸಿಮೆಂಟ್ ಸ್ಲಾಬ್ ಗೆ ಪೊಲೀಸ್ ಎಸ್ಕಾರ್ಟ್ ವಾಹನ ಡಿಕೆ ಹೊಡೆದಿದೆ.
ಈ ವೇಳೆ ಎಸ್ಕಾರ್ಟ್ ವಾಹನಕ್ಕೆ ಜಡ್ಜ್ ಇದ್ದ ಕಾರು ಡಿಕ್ಕಿ ಹೊಡೆದಿದೆ. ಪೊಲೀಸ್ ಚಾಲಕನಿಗೆ ಗಂಭೀರವಾದ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.ಕಾರಿನಲ್ಲಿ ಇದ್ದಂತಹ ನ್ಯಾಯಮೂರ್ತಿಗಳು ಮತ್ತು ಇತರರು ಪ್ರಾಣಾಪಾಯದಿಂದ ಪಾರಾಗಿದ್ದು, ಸ್ಥಳಕ್ಕೆ ನೆಲಮಂಗಲ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ








