ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡು ಚಾಲಕ ಸಜೀವ ದಹನ ಆಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಆಚೆಪಲ್ಲಿ ಗ್ರಾಮದ ಬಳಿ ನಡೆದಿದೆ.
ಪೆನುಮಲೆ ಗ್ರಾಮದ ಉದಯಕುಮಾರ್ (70) ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಬೆಂಕಿ ಕಾಣಿಸಿಕೊಂಡು ಕಾರು ಏಕಾಏಕಿ ಹೊತ್ತಿ ಉರಿದಿದೆ. ಕಾರಿನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡ ಬಗ್ಗೆ ಬೆಂಕಿ ಶಂಕೆ ವ್ಯಕ್ತವಾಗುತ್ತಿದೆ. ಸ್ಥಳಕ್ಕೆ ಬಾಗೇಪಲ್ಲಿ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.








