ಬೆಂಗಳೂರು : ಬಿಜೆಪಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಲು ನಾನು ದೆಹಲಿಗೆ ಬಂದಿಲ್ಲ ಪುತ್ರನ ಮದುವೆಗೆ ಆಹ್ವಾನ ನೀಡುವುದಕ್ಕೆ ದೆಹಲಿಗೆ ಬಂದಿದ್ದೇನೆ ಎಂದು ನವದೆಹಲಿಯಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾರ ಕಾಲಿಗೆ ಬಿದ್ದು ಪಕ್ಷಕ್ಕೆ ಸೇರಿಸಿಕೊಳ್ಳಿ ಅಂತ ಹೇಳಲು ಬಂದಿಲ್ಲ. ಕಡುಬೃಷ್ಟ ಕುಟುಂಬ ಬಿಜೆಪಿಯಲ್ಲಿ ಇರುವವರೆಗೂ ನಾನು ಪಕ್ಷ ಸೇರಲ್ಲ. ಬಿಎಸ್ ಯಡಿಯೂರಪ್ಪ, ಬಿ ವೈ ವಿಜಯೇಂದ್ರ, ಬಿ ವೈ ರಾಘವೇಂದ್ರ ಈ ಮೂವರು ಪಕ್ಷದಲ್ಲಿ ಇರುವವರೆಗೂ ಬಿಜೆಪಿ ಸೇರಲ್ಲ ಎಂದು ಮತ್ತೊಮ್ಮೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದರು.
ರಾಜ್ಯದಲ್ಲಿ ಪ್ರಾದೇಶಿಕ ಪಕ್ಷ ಕಟ್ಟುತ್ತೇನೆ. ನಾನೇ ಸಿಎಂ ಆಗುತ್ತೇನೆ. 2028ಕ್ಕೆ ನಾನೇ ಸಿಎಂ ಆಗ್ತೀನಿ ನಮ್ಮ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ದೆಹಲಿಯಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಫೋಟಕ ಭವಿಷ್ಯ ನುಡಿದಿದ್ದಾರೆ.








