ಶಿವಮೊಗ್ಗ: ಬೇಸಿಗೆಯ ತಾಪಮಾನ ದಿನೇ ದಿನೇ ಏರುತ್ತಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಅಭಾವ ಸೃಷ್ಟಿಯಾಗದಂತೆ ಅಧಿಕಾರಿಗಳು ಈಗಿನಿಂದಲೇ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸೋಮವಾರ ಸಾಗರದ ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಗ್ರಾಮ ಪಂಚಾಯ್ತಿ ಆಡಳಿತಾಧಿಕಾರಿಗಳು ಮತ್ತು ಪಿಡಿಓಗಳ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ:
ತಾಲ್ಲೂಕಿನ ಗೆಣಿಸಿನಕುಣಿ, ಹೆಗ್ಗೋಡು, ಭೀಮನಕೋಣೆ ಸೇರಿದಂತೆ ವಿವಿಧ ಭಾಗಗಳಲ್ಲಿ ನೀರಿನ ಸಮಸ್ಯೆ ಇರುವುದು ಗಮನಕ್ಕೆ ಬಂದಿದೆ. ಹಕ್ರೆ ಬಳಿ ಶರಾವತಿ ಹಿನ್ನೀರಿನಿಂದ ನೀರು ಪೂರೈಸುವ ಯೋಜನೆ ಈ ತಿಂಗಳ ಅಂತ್ಯದೊಳಗೆ ಪೂರ್ಣಗೊಳ್ಳಲಿದ್ದು, ಆನಂತರ ಈ ಭಾಗದ ನೀರಿನ ಸಮಸ್ಯೆಗೆ ಶಾಶ್ವತ ಮುಕ್ತಿ ಸಿಗಲಿದೆ. ತುರ್ತು ಅಗತ್ಯವಿರುವ ಕಡೆಗಳಲ್ಲಿ ತಕ್ಷಣವೇ ಕೊಳವೆ ಬಾವಿಗಳನ್ನು ಕೊರೆಸಲು ಶಾಸಕರು ಆದೇಶಿಸಿದರು.
ಜಾತ್ರೆಗಳ ಯಶಸ್ವಿಗೆ ಅಧಿಕಾರಿಗಳ ಸಹಕಾರ ಅಗತ್ಯ:
ಆನಂದಪುರ ಮತ್ತು ಕಣ್ಣೂರು ಜಾತ್ರೆಗಳು ನಡೆಯುತ್ತಿರುವುದರಿಂದ ಆ ಭಾಗದಲ್ಲಿ ವಿದ್ಯುತ್ ಮತ್ತು ನೀರಿನ ವ್ಯತ್ಯಯವಾಗದಂತೆ ನೋಡಿಕೊಳ್ಳಬೇಕು. ಅಲ್ಲದೆ, ಮುಂಬರುವ ಗಣಪತಿ ಜಾತ್ರೆಯನ್ನು ಮಾರಿಕಾಂಬಾ ಜಾತ್ರೆಯಂತೆಯೇ ಅದ್ದೂರಿಯಾಗಿ ಮತ್ತು ಯಶಸ್ವಿಯಾಗಿ ನಡೆಸಲು ಸಾರ್ವಜನಿಕರ ಸಹಕಾರದೊಂದಿಗೆ ಸಜ್ಜಾಗಬೇಕು ಎಂದು ತಿಳಿಸಿದರು.
-
ಪಾರದರ್ಶಕತೆ: ಜಾತ್ರೆಯ ಸ್ಟಾಲ್ ಹರಾಜು ಮತ್ತು ಜನರಿಂದ ಸಂಗ್ರಹವಾದ ಹಣವನ್ನು ಅತ್ಯಂತ ಪಾರದರ್ಶಕವಾಗಿ ಜಾತ್ರೆಯ ಖರ್ಚು-ವೆಚ್ಚಗಳಿಗೆ ಬಳಸಬೇಕು.
-
ಪವಿತ್ರತೆ ಕಾಪಾಡಿ: ದೇವಸ್ಥಾನದ ಆವರಣದಲ್ಲಿ ಪವಿತ್ರತೆ ಕಾಪಾಡಬೇಕು. ಅನ್ಯಾಹಾರ ಸೇವನೆ ಅಥವಾ ಹಂಚುವಿಕೆ ಕಂಡುಬಂದಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು.
-
ಗೋವುಗಳ ರಕ್ಷಣೆ: ಸಾಗರ ಭಾಗದಲ್ಲಿ ಗೋವುಗಳ ಕಳ್ಳತನವಾಗುತ್ತಿರುವ ದೂರುಗಳು ಕೇಳಿಬರುತ್ತಿದ್ದು, ಈ ಬಗ್ಗೆ ಉಪವಿಭಾಗಾಧಿಕಾರಿಗಳು ಹಾಗೂ ಡಿವೈಎಸ್ಪಿ ಅವರೊಂದಿಗೆ ಚರ್ಚಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಸಾಗರ ಉಪವಿಭಾಗಾಧಿಕಾರಿ ವಿರೇಶ್ ಕುಮಾರ್, ತಹಸೀಲ್ದಾರ್ ರಶ್ಮಿ ಹಾಲೇಶ್, ತಾ.ಪಂ ಕಾರ್ಯನಿರ್ವಾಹಣಾಧಿಕಾರಿ ಶಿವಪ್ರಕಾಶ್, ಗಣಪತಿ ದೇವಸ್ಥಾನದ ಇಓ ಪ್ರೇಮಕುಮಾರಿ, ಗ್ರಾಮೀಣಾಭಿವೃದ್ದಿ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರ ಗುರುಕೃಷ್ಣ ಶೆಣೈ, ಗಣಪತಿ ದೇವಸ್ಥಾನ ಸಮಿತಿಯ ಅಧ್ಯಕ್ಷ ಟಿ.ವಿ.ಪಾಂಡುರಂಗ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
BREAKING: ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ ಕೇಸ್: ಮಲ್ಲಿಕಾರ್ಜುನ ಮುತ್ಯಾ ಜಾಮೀನು ಅರ್ಜಿ ವಜಾ
ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್ 11 ರಿಂದ `OPD’ ಸೇವೆ ಬಂದ್: ರೋಗಿಗಳಿಗೆ ಸಂಕಷ್ಟದ ಭೀತಿ







