ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ 15 ಸಾವಿರ ಶಿಕ್ಷಕರ ಹುದ್ದೆಗಳನ್ನು ಬಜೆಟ್ನಲ್ಲಿ ಘೋಷಿಸಿದಂತೆ ಶೀಘ್ರದಲ್ಲೇ ಭರ್ತಿ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ವಿಧಾನ ಪರಿಷತ್ತಿನಲ್ಲಿ ತಿಳಿಸಿದ್ದಾರೆ.
ಬಿಜೆಪಿಯ ಎಚ್.ಎಸ್. ಗೋಪಿನಾಥ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ನೇಮಕಾತಿ ಪ್ರಕ್ರಿಯೆಯ ಪ್ರಮುಖ ಅಂಶಗಳನ್ನು ಹಂಚಿಕೊಂಡಿದ್ದಾರೆ. ಶಾಲೆಗಳಲ್ಲಿ ಇಂಗ್ಲಿಷ್ ಶಿಕ್ಷಕರ ಕೊರತೆ ಇರುವುದನ್ನು ಗಮನಿಸಿ, ಈ ನೇಮಕಾತಿ ಪ್ರಕ್ರಿಯೆಯಲ್ಲಿ ಇಂಗ್ಲಿಷ್ ಶಿಕ್ಷಕರಿಗೂ ಹೆಚ್ಚಿನ ಆದ್ಯತೆ ನೀಡಲಾಗುವುದು.
ಪ್ರಾಂಶುಪಾಲರ ಹುದ್ದೆಗೆ ಬಡ್ತಿ: ಸದ್ಯ ಖಾಲಿ ಇರುವ ಹಾಗೂ ಮುಂದಿನ ಆರು ತಿಂಗಳಲ್ಲಿ ಖಾಲಿಯಾಗಲಿರುವ ಪ್ರಾಂಶುಪಾಲರ ಹುದ್ದೆಗಳನ್ನು ಬಡ್ತಿಯ ಮೂಲಕ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ.
ಜೇಷ್ಟತಾ ಪಟ್ಟಿ: ಉಪನ್ಯಾಸಕರ ವೃಂದದ ಕರಡು ಜೇಷ್ಟತಾ ಪಟ್ಟಿಯನ್ನು ಈಗಾಗಲೇ ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಅಂತಿಮ ಪಟ್ಟಿ ಬಿಡುಗಡೆ ಮಾಡಿ ಬಡ್ತಿ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಕಾಂಗ್ರೆಸ್ನ ಡಿ.ಟಿ. ಶ್ರೀನಿವಾಸ್ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದರು.








