ಬೆಂಗಳೂರು: ರಾಜ್ಯದಲ್ಲಿ ಎಸ್ಸಿ, ಎಸ್ಟಿ ಒಳ ಮೀಸಲಾತಿ ಜಾರಿಗೆ ಸರ್ಕಾರ ಬದ್ಧವಾಗಿದೆ. ಒಳ ಮೀಸಲಾತಿ ಆಧರಿಸಿಯೇ ನೇಮಕಾತಿ ಮಾಡಿಕೊಳ್ಳುವುದಾಗಿ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಭರವಸೆ ನೀಡಿದ್ದಾರೆ. ಇದರ ಜೊತೆಗೆ ಉದ್ಯೋಗಾಕಾಂಕ್ಷಿಗಳಿಗೆ ಬಿಗ್ ಶಾಕ್ ಎನ್ನುವಂತೆ ಮಾರ್ಚ್.27ರವರೆಗೆ ಕರ್ನಾಟಕದಲ್ಲಿ ಯಾವುದೇ ನೇಮಕಾತಿ ಅಧಿಸೂಚನೆ ಪ್ರಕಟವಾಗೋದಿಲ್ಲ ಅಂತ ತಿಳಿಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಒಳಮೀಸಲಾತಿ ಜಾರಿಗೆ ಸರ್ಕಾರ ಬದ್ಧವಾಗಿದೆ. ಒಳ ಮೀಸಲಾತಿ ಆಧರಿಸಿ ನೇಮಕಾತಿ ಮಾಡಿಕೊಳ್ಳುವುದಾಗಿ ಭರವಸೆ ನೀಡಿದರು.
ಈಗಾಗಲೇ ಸಿಎಂ ಕೂಡ ಒಳ ಮೀಸಲಾತಿ ಜಾರಿಯ ಭರವಸೆ ನೀಡಿದ್ದಾರೆ. ಮಾರ್ಚ್.27ರಂದು ವಿಶೇಷ ಸಚಿವ ಸಂಪುಟ ಸಭೆ ನಡೆಸಲು ತೀರ್ಮಾನಿಸಲಾಗಿದೆ. ಬಲ ಸಮುದಾಯದ ನಾಯಕರು ಒಳ ಮೀಸಲಾತಿಗೆ ಒಪ್ಪಿಕೊಂಡಿದ್ದಾರೆ ಎಂದರು.
ಎಡ, ಬಲ ಸಮುದಾಯಗಳಿಗೆ ಸರಿ ಸಮನಾಗಿ ಒಳ ಮೀಸಲಾತಿ ಹಂಚಿಕೆ ಮಾಡಲಾಗುತ್ತದೆ. ಮಾರ್ಚ್.27ರವರೆಗೆ ಯಾವುದೇ ನೇಮಕಾತಿ ಅಧಿಸೂಚನೆ ಪ್ರಕಟಣೆ ಆಗಲ್ಲ ಎಂಬುದಾಗಿ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ತಿಳಿಸಿದರು.








